ಕಲಬುರಗಿ –
ಸಿಎಂ ಯಡಿಯೂರಪ್ಪ ವಿರುದ್ಧದ ದೇವದುರ್ಗ ಆಡಿಯೋ ಬಾಂಬ್ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾ.ಜಾನ್ ಮೈಕೆಲ್ ಕುನ್ಹಾ ಪೀಠದಲ್ಲಿ ಇಂದು ವಿಚಾರಣೆ ನಡೆಯಲಿದೆ. ನ್ಯಾ.ಜಾನ್ ಮೈಕೆಲ್ ಕುನ್ಹಾ ಕಲಬುರಗಿಯಲ್ಲಿರುವ ಹಿನ್ನೆಲೆಯಿಂದಾಗಿ ವಿಡಿಯೋ ಕಾನ್ಪರೆನ್ಸ್ ಮೂಲಕ ಕಲಬುರಗಿ ಹೈಕೋರ್ಟ್ ನಲ್ಲಿ ನ್ಯಾಯಮೂರ್ತಿ ಕುನ್ಹಾ ವಿಚಾರಣೆ ನಡೆಸಲಿದ್ದಾರೆ.

ಯಾದಗಿರಿ ಜಿಲ್ಲೆಯ ಗುರುಮಠಕಲ್ ಶಾಸಕ ನಾಗನಗೌಡ ಕಂದಕೂರ ಪುತ್ರ ಶರಣಗೌಡ ದೂರು ನೀಡಿದ್ದರು. ರಾಯಚೂರು ಜಿಲ್ಲೆಯ ದೇವದುರ್ಗ ಠಾಣೆಯಲ್ಲಿ BSY ಸೇರಿ ನಾಲ್ವರ ವಿರುದ್ಧ ದೂರು ದಾಖಲಾಗಿತ್ತು. ಈ ಬಗ್ಗೆ ಕಲಬುರಗಿ ಹೈಕೋರ್ಟ್ ನಲ್ಲಿ BSY ವಿಚಾರಣೆಗೆ ತಡೆ ಪಡೆದಿದ್ದರು. ಕಳೆದ ತಿಂಗಳು ಕಲಬುರಗಿ ಹೈಕೋರ್ಟ್ ಪೀಠ ಪ್ರಕರಣವನ್ನು ಜನಪ್ರತಿನಿಧಿಗಳ ಕೋರ್ಟ್ ಗೆ ವರ್ಗಾಯಿಸಿತ್ತು.ಆಪರೇಷನ್ ಕಮಲದಡಿಯಲ್ಲಿ BSY ಸೇರಿ ಇನ್ನೂ ನಾಲ್ವರು ನನ್ನನ್ನು ಬಿಜೆಪಿಗೆ ಸೇರುವಂತೆ ಆಮಿಷವೊಡಿದ್ದರು ಎಂದು ಗುರುಮಠಕಲ್ ಶಾಸಕ ನಾಗನಗೌಡ ಕಂದಕೂರ ಪುತ್ರ ಶರಣಗೌಡ ದೂರು ನೀಡಿದ್ದರು. ಅದಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿ ಆಡಿಯೋ ಬಾಂಬ್ ಸಹ ಸಿಡಿಸಿದ್ದರು. 2018 ರ ಪೆಬ್ರವರಿಯಲ್ಲಿ ಈ ಘಟನೆ ನಡೆದಿತ್ತು.ಈ ಒಂದು ಪ್ರಕರಣದ ವಿಚಾರಣೆ ಇಂದು ನಡೆಯಲಿದೆ.