ಬೆಂಗಳೂರು –
ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುವ ಪೊಲೀಸ್ ಸಿಬ್ಬಂದಿಗೆ ವಾರದ ರಜೆ ಕಡ್ಡಾಯ ಗೊಳಿಸುವಂತೆ ಡಿಜಿ ಐಜಿಪಿ ಪ್ರವೀಣ್ ಸೂದ್ ಸುತ್ತೊಲೆಯೊಂದನ್ನು ಹೊರಡಿಸಿದ್ದಾರೆ.

ಪೊಲೀಸರಿಗೆ ವಾರದಲ್ಲಿ ಒಂದು ದಿನ ವಾರದ ರಜೆ ಕಡ್ಡಾಯಗೊಳಿಸುವಂತೆ ಸೂಚನೆ ನೀಡಲಾಗಿದೆ.ಈ ಹಿಂದೆಯೂ ಕಡ್ಡಾಯಗೊಳಿಸುವಂತೆ ಆದೇಶ ನೀಡಲಾಗಿತ್ತು.ಕೆಲ ಪೊಲೀಸರು ವಾರದ ರಜೆಯನ್ನು ಠಾಣಾಧಿಕಾರಿಗಳು ನೀಡುತ್ತಿಲ್ಲವೆಂದು ಪೊಲೀಸ್ ಮಹಾ ನಿರ್ದೇಶಕರಿಗೆ ಪತ್ರ ಬರೆದಿದ್ದರು.ಈ ಹಿನ್ನಲೆ ಇದೀಗ ಮತ್ತೋಮ್ಮೆ ವಾರದ ರಜೆ ಕಡ್ಡಾಯ ಗೊಳಿಸುವಂತೆ ಆದೇಶ ಹೊರಡಿಸಲಾಗಿದೆ.

ನಗರ ಪೊಲೀಸ್ ಆಯುಕ್ತರು, ವಲಯ ಐಜಿಪಿ, ಜಿಲ್ಲಾ ಎಸ್ಪಿಗಳಿಗೆ ಸೂಚನೆ ನೀಡಲಾಗಿದೆ. ಚುನಾವಣೆ ,ಬಂದೋ ಬಸ್ತ್ ತುರ್ತು ಪರಿಸ್ಥಿತಿ ಹೊರತುಪಡಿಸಿ ಬೇರೆ ಎಲ್ಲಾ ಸಂದರ್ಭದಲ್ಲಿ ವಾರದ ರಜೆ ಕಡ್ಡಾಯವಾಗಿ ನೀಡುವಂತೆ ಆದೇಶದಲ್ಲಿ ತಿಳಿಸಲಾಗಿದ್ದು ಇನ್ನಾದರೂ ಪೊಲೀಸ್ ಸಿಬ್ಬಂದಿ ಗೆ ವಾರದ ರಜೆ ಸಿಗುತ್ತದೆನಾ ಎಂಬುದನ್ನು ಕಾದು ನೋಡಬೇಕು.