This is the title of the web page
This is the title of the web page

Live Stream

[ytplayer id=’1198′]

April 2024
T F S S M T W
 123
45678910
11121314151617
18192021222324
252627282930  

| Latest Version 8.0.1 |

Local News

ಸಡಗರ ಸಂಭ್ರಮದಿಂದ ನಡೆಯಿತು ಧಾರವಾಡದ ಕೃಷಿ ವಿವಿ 35 ನೇ ಘಟಿಕೋತ್ಸವ – ಕೃಷಿ ವಿವಿ ಅತಿ ಹೆಚ್ಚು ಚಿನ್ನದ ಪದಕಗಳನ್ನು ಪಡೆದ ಪಿ.ಆನಂದಕುಮಾರ…..

WhatsApp Group Join Now
Telegram Group Join Now

ಧಾರವಾಡ –

ಕೃಷಿ ಪದವೀಧರರು ಆತ್ಮನಿರ್ಭರ ಭಾರತ ನಿರ್ಮಾಣಕ್ಕೆ ಕೊಡುಗೆಗಳನ್ನು ನೀಡಲಿ ರಾಜ್ಯಪಾಲ ಥಾವರ ಚಂದ್ ಗೆಹ್ಲೋಟ್ ಅಭಿಮತ…..

ಕೃಷಿ ಪ್ರಧಾನವಾಗಿರುವ ಭಾರತವನ್ನು ಆತ್ಮನಿರ್ಭರ ದೇಶವಾಗಿ ನಿರ್ಮಿಸಲು ಕೃಷಿ ಪದವೀಧರರು ಮಹತ್ವದ ಕೊಡುಗೆಗಳನ್ನು ನೀಡಬೇಕು ಎಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹೇಳಿದರು.

ಕೃಷಿ ವಿಶ್ವವಿದ್ಯಾಲಯದ ರೈತರ ಜ್ಞಾನಾಭಿವೃದ್ಧಿ ಕೇಂದ್ರ ದಲ್ಲಿಂದು ಜರುಗಿದ 35 ನೇ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಧಾರವಾಡದ ಕೃಷಿ ವಿವಿಯು ರಾಷ್ಟ್ರ ಮಟ್ಟದಲ್ಲಿ ಪ್ರಸಿದ್ಧಿ ಪಡೆದಿದೆ.ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಆಶಯದ ಆತ್ಮನಿರ್ಭರ ಭಾರತ ನಿರ್ಮಾಣಕ್ಕೆ ಕೃಷಿ ಪದವೀಧರರು ಹೆಚ್ಚು ಕೊಡುಗೆಗಳನ್ನು ನೀಡಬೇಕುದೇಶದ ಜನತೆ ಕೃಷಿಯನ್ನು ಅಧಿಕವಾಗಿ ಅವಲಂಬಿಸಿದ್ದಾರೆ.ಕೃಷಿ ಕ್ಷೇತ್ರ ಸಂಪೂರ್ಣ ಸ್ವಾವಲಂಬನೆಯಾದರೆ ದೇಶದ ಅಭಿವೃದ್ಧಿ ವೇಗ ತೀವ್ರವಾಗುತ್ತದೆ.ಪದವಿ ಪಡೆದವರು ತಾವಿರುವ ಊರು,ಪ್ರದೇಶಗಳಲ್ಲಿ ಕೃಷಿ ಮೂಲಕ ಸ್ವಾವಲಂಬನೆ ಸಾಧಿಸಲು ಶ್ರಮಿಸಬೇಕು.ಪರಿಸರ ಸಂರ ಕ್ಷಣೆ,ಜಾಗತಿಕ ತಾಪಮಾನ ಹೆಚ್ಚಳ,ಜಲಮೂಲಗಳ ಸಂರಕ್ಷಣೆ ಕಾರ್ಯಗಳು ಮುಖ್ಯವಾಗಿವೆ.ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರೊಂದಿಗೆ ಇಸ್ರೇಲ್ ಪ್ರವಾಸ ಕೈಗೊಂಡಿದ್ದ ಸಂದರ್ಭದಲ್ಲಿ ಅಲ್ಲಿನ ಕೃಷಿ ತಂತ್ರಜ್ಞಾನ ವೀಕ್ಷಿ ಸುವ ಅವಕಾಶ ಸಿಕ್ಕಿತ್ತು.ಶೇ 9-10 ರಷ್ಟು ಮಳೆಯಾಗುವ ಆ ದೇಶದಲ್ಲಿ ಹನಿ ಹನಿ ನೀರಿನ ಸದ್ಬಳಕೆಯಾಗುತ್ತಿದೆ ಸಾವ ಯವ ಪದ್ಧತಿ ಮೂಲಕ ಭೂಮಿಯ ಫಲವತ್ತತೆ ಕಾಪಾ ಡಲು ಒತ್ತು ನೀಡಬೇಕು ಎಂದರು.

ಐಸಿಎಆರ್ ರಾಷ್ಟ್ರೀಯ ಕೃಷಿ ಉನ್ನತ ಶಿಕ್ಷಣ ಯೋಜನೆ ಯ ನಿರ್ದೇಶಕ ಹಾಗೂ ಕೃಷಿ ಶಿಕ್ಷಣದ ಉಪಮಹಾನಿರ್ದೇ ಶಕ ಡಾ‌.ರಾಕೇಶಚಂದ್ರ ಅಗ್ರವಾಲ ಘಟಿಕೋತ್ಸವ ಭಾಷಣ ಮಾಡಿ,ಪದವಿ ಪಡೆದ ವಿದ್ಯಾರ್ಥಿಗಳ ಮೇಲೆ ಕುಟುಂಬ, ಸಮಾಜ ಹಾಗೂ ರಾಷ್ಟ್ರದ ಜವಾಬ್ದಾರಿ ಇದೆ.ಕಳೆದ ಎರಡು ವರ್ಷಗಳ ಕೋವಿಡ್ ಸಾಂಕ್ರಾಮಿಕದ ಸಂಕಷ್ಟ ಕಾಲದಲ್ಲಿ ಕೃಷಿ ಉತ್ಪನ್ನಗಳು, ಹಾಲು,ತರಕಾರಿಗಳನ್ನು ಜನಸಾಮಾನ್ಯರಿಗೆ ಯಾವುದೇ ವ್ಯತ್ಯಯವಾಗದಂತೆ ಪೂರೈಸಿದ ಶ್ರೇಯಸ್ಸು ಕೃಷಿಕರಿಗೆ ಸಲ್ಲುತ್ತದೆ. ಜಲಮೂಲ ಹವಾಮಾನ ಬದಲಾವಣೆ,ಜನಸಂಖ್ಯೆಯ ತೀವ್ರ ಹೆಚ್ಚಳ ಸಾಂಕ್ರಾಮಿಕ ಖಾಯಿಲೆಗಳು ಸೇರಿದಂತೆ ಅನೇಕ ಸವಾಲು ಗಳು ಇಂದು ನಮ್ಮೆದುರಿಗೆ ಇವೆ‌.ರಾಷ್ಟ್ರದ ಹಿತಕ್ಕಾಗಿ ಇವು ಗಳಿಗೆ ಪರಿಹಾರ ಒದಗಿಸುವ ಬದ್ಧತೆ ಬೆಳೆಸಿಕೊಳ್ಳಬೇಕು ಹಸಿರು ಕ್ರಾಂತಿ,ಕ್ಷೀರಕ್ರಾಂತಿ,ನೀಲಿಕ್ರಾಂತಿಗಳು ನಮ್ಮನ್ನು ಸ್ವಾವಲಂಬಿಯಾಗಿಸಿವೆ.ಸಿರಿಧಾನ್ಯಗಳು,ಸುಸ್ಥಿರ ಕೃಷಿ ಇಂದಿನ ಅಗತ್ಯಗಳಾಗಿವೆ.ಜಾಗತಿಕ ಹಸಿವು ಸೂಚ್ಯಂಕದ 17 ಸುಸ್ಥಿರ ಗುರಿಗಳನ್ನು ತಲುಪಲು ಕೃಷಿ ವಿದ್ಯಾರ್ಥಿಗಳ ಮೇಲೆ ಹೆಚ್ಚು ಹೊಣೆಗಾರಿಕೆಯಿದೆ.ಬಡತನ,ಹಸಿವು ನೀಗಿಸಿ,ಉತ್ತಮ ಜೀವನ ನಿರ್ಮಿಸಿಕೊಳ್ಳಲು ಕೃಷಿ ವಿದ್ಯಾರ್ಥಿಗಳು ಪ್ರಮುಖ ಆಧಾರ ಸ್ತಂಭವಾಗಿದ್ದಾರೆ ಶಿಕ್ಷಣವೆಂದರೆ ಸರ್ವಾಂಗೀಣ,ಸರ್ವತೋಮುಖ ವಿಕಾಸ ಶಿಕ್ಷಕರು,ಕುಟುಂಬ, ಸಮಾಜ ಹೀಗೆ ಎಲ್ಲರಿಂದ ಕಲಿತು ತಿಳಿದುಕೊಳ್ಳುವುದು ನಿರಂತರವಾಗಿರುತ್ತದೆ.ಕಲಿಕೆಗೆ ಕೊನೆಯೆಂಬುದು ಇಲ್ಲ.ಹೆಚ್ಚು ಹೆಚ್ಚು ಸಂವಾದಕ್ಕೆ ನಾವು ಒಳಪಡಬೇಕು.ಬರುವ ಜೂನ್ 14 ರಂದು ನವದೆಹಲಿ ಯಲ್ಲಿ ಸಿಬಿಎಸ್‌ಇ,ಎನ್‌ಸಿಇಆರ್‌ಟಿ ಮೊದಲಾದ ಅಕಾಡೆಮಿಕ್ ಸದಸ್ಯರೊಂದಿಗೆ ಸಭೆ ನಡೆಸಿ ಕೃಷಿ ಶಿಕ್ಷಣ ವನ್ನು ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಅನುಸಾರ ಶಾಲಾ ಹಂತದಿಂದಲೇ ಅಳವಡಿಸಿಕೊಳ್ಳಲು ಕ್ರಮವಹಿಸಲಾಗು ತ್ತಿದೆ ಎಂದರು.

ಗೌರವ ಡಾಕ್ಟರೇಟ್ ಪ್ರದಾನ
ಕೃಷಿ ಕ್ಷೇತ್ರಕ್ಕೆ ಮಹತ್ವದ ಕೊಡುಗೆಗಳನ್ನು ನೀಡಿರುವ ಜಗದೀಶ ಹರಿ ಕುಲಕರ್ಣಿ,ಯೋಗೇಂದ್ರ ಕೌಶಿಕ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.ಇನ್ನೋರ್ವ ಗೌರವ ಡಾಕ್ಟರೇಟ್ ಪುರಸ್ಕೃತರಾದ ಅದೃಶ್ಯ ಕಾಡಸಿದ್ಧೇ ಶ್ವರ ಸ್ವಾಮಿಗಳು ಘಟಿಕೋತ್ಸವದಲ್ಲಿ ಭಾಗವಹಿಸಿರಲಿಲ್ಲ.

ಪದವಿಗಳ ಪ್ರಧಾನ

35 ನೇ ಘಟಿಕೋತ್ಸವದಲ್ಲಿ 42 ಪಿಹೆಚ್‌ಡಿ,253 ಸ್ನಾತ ಕೋತ್ತರ,595 ಸ್ನಾತಕ ಪದವಿಗಳನ್ನೊಳಗೊಂಡು ಒಟ್ಟು 890 ಅಭ್ಯರ್ಥಿಗಳಿಗೆ ಪದವಿಗಳನ್ನು ಪ್ರದಾನ ಮಾಡಲಾ ಯಿತು.48 ಚಿನ್ನದ ಪದಕಗಳು ಹಾಗೂ 11 ನಗದು ಬಹು ಮಾನಗಳನ್ನು ಅತಿಹೆಚ್ಚು ಅಂಕ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರದಾನ ಮಾಡಿ ಗೌರವಿಸಲಾಯಿತು.

ಕೃಷಿ ವಿವಿ ಕುಲಪತಿ ಡಾ.ಮಹದೇವ ಬಿ.ಚೆಟ್ಟಿ ಸ್ವಾಗತಿಸಿ, ವಾರ್ಷಿಕ ವರದಿ ವಾಚಿಸಿದರು.ಕೃಷಿ ಸಚಿವ ಬಿ.ಸಿ.ಪಾಟೀಲ ಕೃಷಿ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಶಿವಯೋಗಿ ಕಳಸದ,ಕುಲಸಚಿವ ಶಿವಾನಂದ ಕರಾಳೆ,ಕೃಷಿ ವಿಶ್ವವಿದ್ಯಾಲ ಯದ ವ್ಯವಸ್ಥಾಪನ ಮಂಡಳಿ,ವಿದ್ಯಾವಿಷಯಕ ಪರಿಷತ್ತು ಹಾಗೂ ಅಧ್ಯಯನ ಮಂಡಳಿ ಸದಸ್ಯರು,ಎಲ್ಲಾ ನಿಕಾಯ ಗಳ ಡೀನರು ವೇದಿಕೆಯಲ್ಲಿದ್ದರು.

ವಾರ್ತಾ ಇಲಾಖೆ ಧಾರವಾಡ ಟೀಮ್


Google News

 

 

WhatsApp Group Join Now
Telegram Group Join Now
Suddi Sante Desk