JP ನಡ್ಡಾ ವಿರುದ್ಧ ದಾಖಲಾಗಿದ್ದ FIR ರದ್ದುಗೊಳಿಸಿದ ಧಾರವಾಡ ಹೈಕೋರ್ಟ್ – ಭಾಷಣದಲ್ಲಿ ಮತದಾರರಿಗೆ ಆಮಿಷ ಪ್ರಕರಣದಲ್ಲಿ ದಾಖಲಾಗಿದ್ದ ಪ್ರಕರಣ…..

Suddi Sante Desk
JP ನಡ್ಡಾ ವಿರುದ್ಧ ದಾಖಲಾಗಿದ್ದ FIR ರದ್ದುಗೊಳಿಸಿದ ಧಾರವಾಡ ಹೈಕೋರ್ಟ್ – ಭಾಷಣದಲ್ಲಿ ಮತದಾರರಿಗೆ ಆಮಿಷ ಪ್ರಕರಣದಲ್ಲಿ ದಾಖಲಾಗಿದ್ದ ಪ್ರಕರಣ…..

ಧಾರವಾಡ

ಚುನಾವಣೆ ಸಮಯದಲ್ಲಿ ಮತದಾರರಿಗೆ ಆಮಿಷವೊಡ್ಡಿದ ಆರೋಪದಡಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ವಿರುದ್ಧ ದಾಖಲಿಸಲಾಗಿದ್ದ ಎಫ್ಐಆರ್ ಅನ್ನು ಧಾರವಾಡದ ಕರ್ನಾಟಕ ಹೈಕೋರ್ಟ್‌ನ ಪೀಠ ರದ್ದುಗೊಳಿಸಿ ಮಹತ್ವದ ತೀರ್ಪು ಪ್ರಕಟಿಸಿದೆ.

ವಿಜಯನಗರ ಜಿಲ್ಲೆ ಹರಪನಹಳ್ಳಿಯಲ್ಲಿ ಮೇ 7 ರಂದು ನಡೆದ ರೋಡ್‌ ಶೋ ವೇಳೆ ಜೆಪಿ ನಡ್ಡಾ ಮತದಾರರಿಗೆ ಆಮಿಷ ನೀಡಿದ್ದಾರೆಂದು ದೂರು ದಾಖಲಾಗಿತ್ತು ನಡ್ಡಾ ಅವರ ಭಾಷಣದಲ್ಲಿ ನೀತಿ ಸಂಹಿತೆ ಉಲ್ಲಂಘನೆ ಮಾಡಲಾಗಿದೆ ಎಂದು ಆರೋಪಿಸಿ ಚುನಾವಣಾ ಜಾಗೃತ ವಿಭಾಗದ ಅಧಿಕಾರಿ ವೀರಣ್ಣ ಲಕ್ಕಣ್ಣವರ್‌ ನೀಡಿದ ದೂರಿನ ಆಧಾರದಲ್ಲಿ ಹರಪನಹಳ್ಳಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.

ತಮ್ಮ ವಿರುದ್ಧ ಆಧಾರ ರಹಿತವಾಗಿ ದಾಖಲಾದ ಎಫ್‌ಐಆರ್ ಅನ್ನು ರದ್ದುಪಡಿಸುವಂತೆ ಹೈಕೋರ್ಟ್ ನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಜೆ.ಪಿ. ನಡ್ಡಾ ಅರ್ಜಿ ಸಲ್ಲಿಸಿದ್ದರು.ವಿಚಾರಣೆ ನಡೆಸಿದ ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ಅರ್ಜಿ ದಾರರು ರಾಜ್ಯಸಭಾ ಸದಸ್ಯರಾಗಿರುವ ಕಾರಣ ದೂರು ದಾಖಲಿಸಲು ಮ್ಯಾಜಿಸ್ಟ್ರೇಟ್ ನ್ಯಾಯಾಲ ಯದಿಂದ ಅನುಮತಿ ಪಡೆಯಬೇಕಿತ್ತು.

ಈ ಅನುಮತಿ ಪಡೆಯುವಲ್ಲಿ ನಿಯಮಗಳನ್ನು ಪಾಲಿಸಿಲ್ಲ ದಾಖಲಾದ ದೂರಿನಲ್ಲಿಯೂ ಮತ ದಾರರಿಗೆ ಆಮಿಷ ಹಾಗೂ ಬೆದರಿಕೆ ಒಡ್ಡುವಂತಹ ಹೇಳಿಕೆ ಕಂಡುಬಂದಿಲ್ಲ ಎಂದು ಅಭಿಪ್ರಾಯ ಪಟ್ಟು ಎಫ್‌ಐಆರ್ ಅನ್ನು ರದ್ದುಪಡಿಸಿದೆ.

ಈ ಪ್ರಕರಣದ ವಾದ ಪ್ರತಿವಾದ ಬೆಂಗಳೂರು ಜನಪ್ರತಿನಿಧಿಗಳ‌ ನ್ಯಾಯಾಲಯದಲ್ಲಿ ನಡೆದಿತ್ತು ಧಾರವಾಡ ಹೈಕೋರ್ಟ್ ಪೀಠದಿಂದ ತೀರ್ಪು ಪ್ರಕಟವಾಗಿದೆ.ಇನ್ನೂ ಈ ಒಂದು ವಿಚಾರ ಕುರಿತು
ನಡ್ಡಾ ಮಾತನಾಡಿ ವಿಧಾನಸಭಾ ಚುನಾವಣೆ ಯಲ್ಲಿ ಒಂದು ವೇಳೆ ಬಿಜೆಪಿ ಸೋತರೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳಿಂದ ಮತದಾರರು ವಂಚಿತರಾಗಲಿದ್ದಾರೆ ಎಂಬ ಭಾಷಣದ ಮೇಲೆ ದೂರು ನೀಡಲಾಗಿತ್ತು ಇದೊಂದು ಆರೋಪ ರಹಿತವಾದ ದೂರಾಗಿತ್ತು ನ್ಯಾಯಾಲಯ ಮಹತ್ವದ ತೀರ್ಪು ನೀಡಿದ್ದು ಸಂತೋಷದ ವಿಚಾರ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕಿಸಾನ್ ಸಮ್ಮಾನ್ ನಿಧಿ ಸೇರಿದಂತೆ ಕೇಂದ್ರದ ಹಲವು ಯೋಜನೆಗಳನ್ನು ಸ್ಥಗಿತ ಮಾಡಲಾಗು ತ್ತದೆ ಎಂದು ಭಾಷಣ ಮಾಡಿದ್ದರು. ಈ ಹೇಳಿಕೆಗೆ ಸಂಬಂಧಿಸಿದಂತೆ ಮೇ 11ರಂದು ಸ್ವಯಂ ಪ್ರೇರಿತ ಎಫ್ಐಆರ್ ದಾಖಲಿಸಲಾಗಿತ್ತು.

ಸುದ್ದಿ ಸಂತೆ ನ್ಯೂಸ್ ಧಾರವಾಡ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.