ಧಾರವಾಡ –
ವಿಶೇಷ ಚೇತನರಿಗೆ ತ್ರಿಚಕ್ರ ವಾಹನ ಹಾಗೂ ಕಾರ್ಮಿಕರ ಮಕ್ಕಳಿಗೆ ಲ್ಯಾಪ್‌ಟಾಪ್ ವಿತರಣೆ
ಕಾರ್ಮಿಕರ ನೋಂದಣೆ ದಿನಪತ್ರಿಕೆ ವಿತರಣೆ ಕಾರ್ಮಿಕರ ವಿಮಾ ಯೋಜನೆಗೆ ಚಾಲನೆ ಸಂತೋಷ್ ಲಾಡ್ ಫೌಂಡೇಶನ್ ವತಿಯಿಂದ 25 ತ್ರಿಚಕ್ರ ವಾಹನ ವಿತರಣೆ ಹೌದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಕಾರ್ಯಕ್ರಮಕ್ಕೆ ಚಾಲನೆ
ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾಡ ಳಿತದ ಆಶ್ರಯದಲ್ಲಿ ಧಾರವಾಡ ಜಿಲ್ಲೆಯ ವಿಶೇಷ ಚೇತನರಿಗೆ ಮೋಟಾರ್ ಚಾಲಿತ ತ್ರಿಚಕ್ರ ವಾಹನ ಗಳ ವಿತರಣೆ, ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಲ್ಯಾಪ್ ಟಾಪ್ ವಿತರಣೆ ಸಮಾರಂಭ ಹಾಗೂ ಗಿಗ್
ಕಾರ್ಮಿಕರ ನೋಂದಣಿ ಹಾಗೂ ದಿನಪತ್ರಿಕೆ ವಿತರಣೆ ಕಾರ್ಮಿಕರ ವಿಮಾ ಯೋಜನೆ ಚಾಲನಾ ಸಮಾರಂಭವನ್ನು ಧಾರವಾಡದ ಕೆಸಿಡಿ ಕಾಲೇಜು ಮೈದಾನದಲ್ಲಿ ಇದೇ ಡಿಸೆಂಬರ್ 16 ರ ಶನಿವಾರ ಹಮ್ಮಿಕೊಳ್ಳಲಾಗಿದೆ.
ಇದೇ ಸಮಾರಂಭದಲ್ಲಿ ನಮ್ಮ ಸಂತೋಷ್ ಲಾಡ್ ಫೌಂಡೇಶನ್ ವತಿಯಿಂದ ಸಹ 25 ತ್ರಿಚಕ್ರ ವಾಹನಗಳನ್ನು ಸಹ ವಿತರಿಸಲಾಗುತ್ತಿದೆ. ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯ ಕಾರ್ಯಕ್ರಮ ವನ್ನು ಉದ್ಘಾಟಿಸಲಿದ್ದಾರೆ
ಉಪ ಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ್ ಪರಿಷತ್ ನ ಸಭಾಪತಿ ಬಸವರಾಜ ಹೊರಟ್ಟಿ ಅವರು ಹಾಗೂ ಹಲವು ಸಚಿವರು, ಜಿಲ್ಲೆಯ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಕಾರ್ಯಕ್ರಮದ ಪೂರ್ವ ಸಿದ್ಧತೆಗಳನ್ನು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಪರಿಶೀಲಿಸಿದರು.ಈ ಸಂದರ್ಭ ದಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್,
ಕಾರ್ಮಿಕ ಆಯುಕ್ತ ಡಾ. ಗೋಪಾಲಕೃಷ್ಣ, ಜಿಪಂ ಸಿಇಓ ಸ್ವರೂಪ ಟಿಕೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.ಶನಿವಾರ ಸಂಜೆ 5 ಗಂಟೆಗೆ ಕಾರ್ಯಕ್ರಮ ಆರಂಭಗೊಳ್ಳಲಿದ್ದು ರಾಜ್ಯದ ವಿವಿಧ ಕಲಾ ತಂಡಗಳಿಂದ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ಸುದ್ದಿ ಸಂತೆ ನ್ಯೂಸ್ ಧಾರವಾಡ…..