This is the title of the web page
This is the title of the web page

Live Stream

[ytplayer id=’1198′]

April 2024
T F S S M T W
 123
45678910
11121314151617
18192021222324
252627282930  

| Latest Version 8.0.1 |

State News

ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ಎಂದ್ರು ಸಚಿವರು – ಸದನದಲ್ಲಿ ಪ್ರತ್ಯೇಕ ಮಹಾನಗರ ಪಾಲಿಕೆಯ ಪ್ರಶ್ನೆ ಕೇಳಿ ಗಮನ ಸೆಳೆದ ಶಾಸಕ ಅರವಿಂದ ಬೆಲ್ಲದ್…..

WhatsApp Group Join Now
Telegram Group Join Now

ಬೆಳಗಾವಿ

ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆಗೆ ಶೀಘ್ರದಲ್ಲಿ ಕ್ರಮ ನಗರಾಭಿವೃದ್ಧಿ ಸಚಿವ ಸುರೇಶ ಬಿ.ಎಸ್ – ಮಹಾನಗರ ಪಾಲಿಕೆ ರಚನೆಗೆ ಕ್ರಮವಹಿಸಿ ಆದೇಶ ಹೊರಡಿಸಬೇಕೆಂದು ನಗರಾಭಿವೃದ್ಧಿ ಸಚಿವರಲ್ಲಿ ಗಮನ ಸೆಳೆದ ಶಾಸಕ ಅರವಿಂದ್ ಬೆಲ್ಲದ…..

ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಮತಕ್ಷೇತ್ರದ ಶಾಸಕರಾದ ಅರವಿಂದ ಬೆಲ್ಲದ ಅವರು, ಇಂದು ಸಂಜೆ ವಿಧಾನಸಭೆಯಲ್ಲಿ ಗಮನ ಸೆಳೆಯುವ ಪ್ರಶ್ನೆ ಕೇಳಿ, ಧಾರವಾಡ ಮಹಾನಗರ ಪಾಲಿಕೆ ರಚನೆಗಾಗಿ ಅಗತ್ಯವಿರುವ ಎಲ್ಲಾ ಮಾನ ದಂಡಗಳು ಪೂರ್ಣವಾಗಿದ್ದು ಮಹಾನಗರ ಪಾಲಿಕೆ ರಚನೆಗೆ ಕ್ರಮವಹಿಸಿ ಆದೇಶ ಹೊರಡಿಸ ಬೇಕೆಂದು ನಗರಾಭಿವೃದ್ಧಿ ಸಚಿವರಲ್ಲಿ ಗಮನ ಸೆಳೆದರು.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯು ನಮ್ಮ ರಾಜ್ಯದ ಎರಡನೇ ಅತೀ ದೊಡ್ಡ ಮಹಾನ ಗರ ಪಾಲಿಕೆ ಯಾಗಿದೆ. ಹುಬ್ಬಳ್ಳಿ-ಧಾರವಾಡವು ದಿನದಿಂದ ದಿನಕ್ಕೆ ವೇಗವಾಗಿ ಬೆಳೆಯುತ್ತಿರುವ ಪ್ರದೇಶವಾಗಿದೆ.ಸಮೀಪದ ಅನೇಕ ಹಳ್ಳಿಗಳು ಪಾಲಿಕೆಗೆ ಹತ್ತಿರದಲ್ಲಿವೆ.ಜನಸಂಖ್ಯೆಯು ಹೆಚ್ಚಿನ ಪ್ರಮಾಣದಲ್ಲಿದ್ದು,ಈ ಪ್ರದೇಶದಲ್ಲಿ ಕೈಗಾರಿಕೆ, ವಸತಿ ಹಾಗೂ ಶೈಕ್ಷಣಿಕ ಕ್ಷೇತ್ರದ ಎಲ್ಲಾ ಕ್ಷೇತ್ರಗಳು ಬೃದಾಕಾರವಾಗಿ ಬೆಳೆದಿವೆ ಎಂದು ಶಾಸಕ ಬೆಲ್ಲದ ತಿಳಿಸಿದರು.

ಸಾರ್ವಜನಿಕರ ಸಮಸ್ಯೆಗಳು ಶೀಘ್ರವಾಗಿ ಇತ್ಯರ್ಥವಾಗುತ್ತಿಲ್ಲ ಹಾಗೂ ಹಲವಾರು ಸಂಘಟ ನೆಗಳು ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಸ್ಥಾಪಿಸಬೇಕೆಂದು ಅಭಿಪ್ರಾಯಿಸಿವೆ. ಸಾರ್ವಜನಿಕ ಹಿತದೃಷ್ಟಿಯಿಂದ ಹಾಗೂ ಧಾರವಾ ಡದ ಜನರ ಸರ್ವತೋಮುಖ ಅಭಿವೃದ್ಧಿ ಹಿತದೃ ಷ್ಟಿಯಿಂದ ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆಯನ್ನು ಸ್ಥಾಪಿಸುವಂತೆ ಶಾಸಕ ಅರವಿಂದ ಬೆಲ್ಲದ ಅವರು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರ ಗಮನ ಸೆಳೆದರು.

ಈ ಸಂದರ್ಭದಲ್ಲಿ ಉತ್ತರಿಸಿದ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಸುರೇಶ ಬಿ.ಎಸ್. ಅವರು ಮಾತನಾಡಿ ಹುಬ್ಬಳ್ಳಿ-ಧಾರವಾಡ ನಗರಗಳು ಅವಳಿ ನಗರವಾಗಿ ಗುರಿತಿಸಲ್ಪಟ್ಟಿದ್ದು ಜಂಟಿಯಾಗಿ ಹುಬ್ಬಳ್ಳಿ-ಧಾರವಾಡ ಮಹಾನಗರಪಾಲಿಕೆಯಾಗಿ ಈಗಾಗಲೇ ಗುರುತಿಸಲ್ಪಟ್ಟಿವೆ.

ಈ ಮಹಾನಗರ ಪಾಲಿಕೆಯು 202.3 ಚದರ ಕಿ.ಮೀ. ವಿಸ್ತೀರ್ಣವನ್ನು ಹೊಂದಿದ್ದು, 2011ರ ಜನಗಣತಿಯನ್ವಯ 9,43,788 ಜನಸಂಖ್ಯೆ ಹೊಂದಿದೆ ಹಾಗೂ ಇಲ್ಲಿನ ಜನಸಾಂದ್ರತೆಯನ್ನು ಪ್ರತಿ ಚದರ ಕಿ.ಮೀ.ಗೆ 4,665 ಆಗಿದೆ.ಒಂದು ನಗರ ಸ್ಥಳೀಯ ಸಂಸ್ಥೆಯನ್ನು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸಲು 2011ರ ಜನಸಂಖ್ಯೆಯು ಮಾನದಂಡವಾಗಿದೆ

ಕರ್ನಾಟಕ ಮಹಾನಗರ ಪಾಲಿಕೆಗಳ ಅಧಿನಿ ಯಮ 1976 ರಲ್ಲಿರುವ ಮಾನದಂಡಗಳನ್ನು ಪೂರೈಸುತ್ತಿರುವ ಬಗ್ಗೆ ಪರಿಶೀಲಿಸಿ ಧಾರವಾಡ ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿ ಸಲು ಕ್ರಮವಹಿಸಲಾಗುತ್ತಿದೆ ಎಂದು ಹೇಳಿದರು.

ಮಹಾನಗರ ಪಾಲಿಕೆ ರಚನೆಗೆ ಅರ್ಹತೆ ಕರ್ನಾಟಕ ಮಹಾನಗರ ಪಾಲಿಕೆಗಳ ಅಧಿನಿ ಯಮ 1976ರ ನಿಯಮ-3ರಲ್ಲಿ ತಿಳಿಸಿರುವಂತೆ ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸ ಲಾಗುವ ಪ್ರದೇಶದ ಜನಸಂಖ್ಯೆ 3 ಲಕ್ಷಕ್ಕಿಂತ ಕಡಿಮೆ ಇರಬಾರದು.ಅಂತಹ ಪ್ರದೇಶದ ಜನಸಂ ಖ್ಯೆಯ ಜನಸಾಂದ್ರತೆಯು ಆ ಪ್ರದೇಶದ ಒಂದು ಚದರ ಕಿ.ಮೀ. ವಿಸ್ರ್ತೀಣಕ್ಕೆ 3,000 ಕ್ಕಿಂತ ಕಡಿಮೆ ಇರಬಾರದು.

ಹಿಂದಿನ ನಿಕಟಪೂರ್ವ ಜನಗಣತಿಯಲ್ಲಿ ಅಂತಹ ಪ್ರದೇಶದಿಂದ ಸ್ಥಳೀಯ ಆಡಳಿತಕ್ಕಾಗಿ ತೆರಿಗೆ ಮತ್ತು ತೆರಿಗೆಯಲ್ಲದ ಇತರ ಸಂಪನ್ಮೂಲಗಳಿಂದ ಉತ್ಪಾದಿತವಾದ ರಾಜಸ್ವ ವಾರ್ಷಿಕ ರೂ. 6.00 ಕೋಟಿ ಅಥವಾ ವಾರ್ಷಿಕ ತಲಾ ಒಬ್ಬರಿಗೆ ರೂ. 200 ಗಳ ದರದಂತೆ ಲೆಕ್ಕಹಾಕಲಾದ ಮೊತ್ತ ಇವೆರಡರಲ್ಲಿ ಯಾವುದು ಹೆಚ್ಚೋ ಆ ಮೊತ್ತಕ್ಕಿಂತ ಕಡಿಮೆ ಇರಬಾರದು ಮತ್ತು ಅಂತಹ ಪ್ರದೇಶದ ಲ್ಲಿನ ಕೃಷಿಯೇತರ ಚಟುವಟಿಕೆಗಳಲ್ಲಿನ

ಉದ್ಯೋಗಾವಕಾಶಗಳ ಶೇಕಡಾವಾರು ಪ್ರಮಾ ಣವು ಒಟ್ಟು ಉದ್ಯೋಗದ ಪ್ರಮಾಣದಲ್ಲಿ ಶೇ. 50 ಕ್ಕಿಂತ ಕಡಿಮೆಯಿಲ್ಲದಿರುವುದನ್ನು ಪರಿಗಣಿ ಸಲಾಗುತ್ತದೆ.ಈ ಎಲ್ಲಾ ಮಾನದಂಡಗಳನ್ನು ಪೂರೈಸುತ್ತಿರುವ ಧಾರವಾಡ ನಗರಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆಯನ್ನು ರಚಿಸಲು ಕ್ರಮಕೈ ಗೊಳ್ಳಲಾಗುವುದೆಂದು ನಗರಾಭಿವೃದ್ಧಿ ಸಚಿವ ಸುರೇಶ ಬಿ.ಎಸ್. ಅವರು ತಿಳಿಸಿದರು.

ಧಾರವಾಡ ಜಿಲ್ಲಾಧಿಕಾರಿಗಳು ಧಾರವಾಡ ನಗರ ವನ್ನು ಮಾತ್ರ ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸುವುದು ಸೂಕ್ತವೆಂದು ಗುರುತಿಸಿ ಈ ಕುರಿತಂತೆ ಅಗತ್ಯ ದಾಖಲೆಗಳೊಂದಿಗೆ ಪ್ರಸ್ತಾ ವನೆಯನ್ನು ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರಿಗೆ ಸಲ್ಲಿಸಿದ್ದಲ್ಲಿ ಮತ್ತು ಪೌರಾಡಳಿತ ನಿರ್ದೇಶಕರಿಂದ ಕರ್ನಾಟಕ ಮಹಾನಗರ ಪಾಲಿಕೆ ಗಳ ಅಧಿನಿಯಮ 1976 ರನ್ವಯ

ಸೂಕ್ತ ಶಿಫಾರಸ್ಸಿನೊಂದಿಗೆ ಪ್ರಸ್ತಾವನೆಯು ಸರ್ಕಾರದಲ್ಲಿ ಸ್ವೀಕೃತವಾದಲ್ಲಿ ನಿಯಮಾನುಸಾರ ಅರ್ಹತೆಯನ್ನು ಪರಿಶೀಲಿಸಿ ಕ್ರಮವಹಿಸಲಾ ಗುತ್ತದೆ ಎಂದು ನಗರಾಭಿವೃದ್ಧಿ ಸಚಿವರು ಸದನದಲ್ಲಿ ತಿಳಿಸಿದರು.

ಸುದ್ದಿ ಸಂತೆ ನ್ಯೂಸ್ ಬೆಳಗಾವಿ…..


Google News

 

 

WhatsApp Group Join Now
Telegram Group Join Now
Suddi Sante Desk