ಧಾರವಾಡ –
ಗ್ರಾಮ ಪಂಚಾಯತ್ ಅಧ್ಯಕ್ಷೆ ಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಧಾರವಾಡ ದಲ್ಲಿ ನಡೆದಿದೆ. ಹೌದು ಧಾರವಾಡ ತಾಲೂಕಿನ ಕೊಟೂರ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ
ಕೋಟುರ ಗ್ರಾ.ಪಂ ಅಧ್ಯಕ್ಷೆ ಶೋಭಾ ದೊಡಮನಿ ಆತ್ಮಹತ್ಯೆಗೆ ಯತ್ನಿಸಿದವರಾಗಿದ್ದಾರೆ. ಮನೆಯಲ್ಲಿ ಯೇ ವಿಷ ಸೇವನೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಅಧ್ಯಕ್ಷೆ ಶೋಭಾ ದೊಡ್ಜಮನಿ ಅವರನ್ನು ಕೂಡಲೇ ಆಸ್ಪತ್ರೆಗೆ ಗ್ರಾಮಸ್ಥರು ಕರೆದುಕೊಂಡು ಬಂದು ದಾಖಲು ಮಾಡಿದ್ದು ಧಾರವಾಡ ಜಿಲ್ಲಾಸ್ಪತ್ರೆಯಲ್ಲಿ ಅಧ್ಯಕ್ಷೆಗೆ ಚಿಕಿತ್ಸೆ ನೀಡಲಾಗುತ್ತಿದ್ದು ಗರಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ























