ವಿಚಾರಣೆಗೆ ಹಾಜರಾಗದಿರಲು ದಿನೇಶ್ ಕಲ್ಲಹಳ್ಳಿ ನಿರ್ಧಾರ

Suddi Sante Desk

ಬೆಂಗಳೂರು –

ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ, ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಪೊಲೀಸರ ವಿಚಾರಣೆಗೆ ಹಾಜರಾಗದಿರಲು ನಿರ್ಧರಿಸಿದ್ದಾರೆ.

ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಪಡೆಯಲು ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸರು ದಿನೇಶ್ ಕಲ್ಲಹಳ್ಳಿಗೆ ಇಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು.ಆದರೆ ತಮಗೆ ಸೂಕ್ತ ಭದ್ರತೆ ಇಲ್ಲದ ಕಾರಣ ಇಂದು ವಿಚಾರಣೆಗೆ ಹಾಜರಾಗುವುದಿಲ್ಲ, ಮಾರ್ಚ್ 9ರಂದು ಹಾಜರಾಗುವುದಾಗಿ ಕಲ್ಲಹಳ್ಳಿ ತಿಳಿಸಿದ್ದಾರೆ.

ಈ ಬಗ್ಗೆ ಪೊಲೀಸರಿಗೆ ಪತ್ರ ಬರೆದಿರುವ ದಿನೇಶ್ ಕಲ್ಲಹಳ್ಳಿ, ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ದೂರು ದಾಖಲಿಸಿದ ದಿನದಿಂದ ನನಗೆ ಪದೇ ಪದೆ ಫೋನ್ ಮಾಡಿ ಬೆದರಿಕೆ ಹಾಕಲಾಗುತ್ತಿದೆ.ನನಗೆ ಜೀವ ಬೆದರಿಕೆಯಿದೆ. ಹಾಗಾಗಿ ಸೂಕ್ತವಾದ ಭದ್ರತೆ ಇಲ್ಲದಿರುವ ಕಾರಣಕ್ಕೆ ವಿಚಾರಣೆಗೆ ಇಂದು ಹಾಜರಾಗಲು ಸಾಧ್ಯವಿಲ್ಲ. ಭದ್ರತೆ ಒದಗಿಸಿದಲ್ಲಿ ಮಾರ್ಚ್ 9ರಂದು ವಿಚಾರಣೆಗೆ ಹಾಜರಾಗುವುದಾಗಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.