ಧಾರವಾಡ –
ಧಾರವಾಡದಲ್ಲಿ ನಡೆಯಿತು ದಿಶಾ ಪ್ರಗತಿ ಪರಿಶೀಲನಾ ಸಭೆ – ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ ಅಧ್ಯಕ್ಷತೆಯಲ್ಲಿ ನಡೆಯಿತು ಸಭೆ…..ಜಿಲ್ಲೆಯ ಶಾಸಕರು ಅಧಿಕಾರಿಗಳು ಭಾಗಿ…..ಮೊದಲ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಹಲವು ವಿಷಯಗಳ ಕುರಿತಂತೆ ಚರ್ಚೆ
ಧಾರವಾಡದಲ್ಲಿ ಜಿಲ್ಲಾ ಅಭಿವೃದ್ದಿ ಸಮನ್ವಯ ಮತ್ತ ಉಸ್ತುವಾರಿ ಸಮಿತಿ ನೇತ್ರತ್ವದಲ್ಲಿ ದಿಶಾ ದ ಪ್ರಗತಿ ಪರಿಶೀಲನಾ ಸಭೆ ನಡೆಯಿತು.ನಗರದ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ ಅಧ್ಯಕ್ಷತೆಯಲ್ಲಿ ಮೊದಲ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಯಿತು.ಕೇಂದ್ರ ಸರ್ಕಾರದ ಕೇಂದ್ರ ಗ್ರಾಹಕರ ವ್ಯವಹಾರಗಳ, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಹೊಸ ಹಾಗೂ ನವೀಕರಿಸಬಹು ದಾದ ಇಂಧನ ಸಚಿವರಾದ ಪ್ರಹ್ಲಾದ್ ಜೋಶಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ
ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಪ್ರಗತಿ ಪರಿಶೀಲನಾ ಕುರಿತಂತೆ ಚರ್ಚೆಯನ್ನು ಮಾಡಲಾಯಿತು.ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರೊಂದಿಗೆ ಜಿಲ್ಲೆಯ ಶಾಸಕರಾದ ಎಮ್ ಆರ್ ಪಾಟೀಲ್,ಎನ್ ಹೆಚ್ ಕೋನರೆಡ್ಡಿ,ಜಿಲ್ಲಾಧಿಕಾರಿಗಳು,ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಮೇಯರ್, ಆಯುಕ್ತರು.
ಅಪರ ಜಿಲ್ಲಾಧಿಕಾರಿಗಳು,ಸೇರಿದಂತೆ ಪೊಲೀಸ್ ಅಧಿಕಾರಿಗಳು ಜಿಲ್ಲಾ ಮಟ್ಟದ ವಿವಿಧ ಇಲಾಖೆ ಗಳ ಅಧಿಕಾರಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸುದ್ದಿ ಸಂತೆ ನ್ಯೂಸ್ ಧಾರವಾಡ…..