ಬೆಂಗಳೂರು –
ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತ್ರತ್ವದಲ್ಲಿನ ಸಚಿವ ಸಂಪುಟ ವಿಸ್ತರಣೆಯಾಗುತ್ತಿ ದ್ದಂತೆ ಸಚಿವರಾಗಿ ಪ್ರಮಾಣ ವಚನ ಸ್ವೀಕಾರವನ್ನು ಮಾಡಿದ ನೂತನ ಸಚಿವರುಗಳಿಗೆ ಜಿಲ್ಲೆಗಳ ಉಸ್ತು ವಾರಿಯನ್ನು ಹಂಚಿಕೆ ಮಾಡಲಾಗಿದೆ.

ಹೌದು ಮಧ್ಯಾಹ್ನ ನೂತನ ಸಚಿವ ಸಂಪುಟ ರಚನೆಯಾಗುತ್ತಿದ್ದಂತೆ ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿಯನ್ನು ಹಂಚಿಕೆ ಮಾಡಿ ಜವಾಬ್ದಾರಿಯನ್ನು ವಹಿಸಿದ್ದಾರೆ.

ಸಧ್ಯ ಒಂದು ರಾಜ್ಯದಲ್ಲಿ ನೆರೆ, ಪ್ರವಾಹ, ಕೊರೋ ನಾ 3ನೇ ಅಲೆಯ ಕಾಟ ಹೀಗಾಗಿ ಇವೆಲ್ಲವುಗಳನ್ನು ಗಮನದಲ್ಲಿಟ್ಟುಕೊಂಡು ಸಚಿವ ಸಂಪುಟ ಬೆನ್ನಲ್ಲೇ ಸಂಪುಟದ ಸಭೆಯನ್ನು ಮಾಡಿ ನಂತರ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ನೂತನವಾಗಿ ಸಚಿವರಾದವರಿಗೆ ಜವಾಬ್ದಾರಿಯನ್ನು ನೀಡಿದ್ದಾರೆ
ಸಧ್ಯ ರಾಜ್ಯದಲ್ಲಿ ಕೋವಿಡ್-19 ನಿರ್ವಹಣೆ, ನೆರೆ ಹಾವಳಿ ಪರಿಹಾರ ಕೆಲಸಗಳನ್ನು ತ್ವರಿತವಾಗಿ ಪರಿಶೀಲನೆ ಮಾಡಿ ಕಾರ್ಯಗಳನ್ನು ಕೈಗೊಳ್ಳಲು ಈ ಒಂದು ಉಸ್ತುವಾರಿಯನ್ನು ನೀಡಲಾಗಿದ್ದು ಈ ಕೆಳಕಂಡ ಸಚಿವರುಗಳನ್ನು ಅವರ ಹೆಸರಿನ ಮುಂದೆ ಸೂಚಿಸಿರುವ ಜಿಲ್ಲೆಗಳಿಗೆ, ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಲಾಗಿದ್ದು ಉಸ್ತುವಾರಿ ಸಚಿವರು ಮತ್ತು ಜಿಲ್ಲೆಗಳ ಮಾಹಿತಿ ಈ ಕೆಳಗಿನಂತಿದೆ.

