ಧಾರವಾಡ –
ಆಗಸ್ಟ್ 9 ರಂದು ಮೊಹರಂ ಹಬ್ಬದ ಹಿನ್ನೆಲೆಯಲ್ಲಿ ಆಗಸ್ಟ್ 8 ರಿಂದ 10 ರವರೆಗೆ ಜಿಲ್ಲೆಯಲ್ಲಿ ಮದ್ಯಪಾನ ಮದ್ಯ ಮಾರಾಟ ಹಾಗೂ ಮದ್ಯ ಸಾಗಾಣಿಕೆ ನಿಷೇಧಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶವನ್ನು ಮಾಡಿದ್ದಾರೆ
ಆಗಸ್ಟ್ 9 ರಂದು ಮೊಹರಂ ಹಬ್ಬ ಆಚರಿಸುತ್ತಿರುವುದ ರಿಂದ ಮೊಹರಂ ಹಬ್ಬದ ಆಚರಣೆ ಸಮಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿ ಯಿಂದ ಜಿಲ್ಲೆಯಾದ್ಯಂತ ಆಗಸ್ಟ್ 8 ರ ಸಂಜೆ 6 ಗಂಟೆ ಯಿಂದ ಆಗಸ್ಟ್ 10 ರ ಬೆಳಿಗ್ಗೆ 6 ಗಂಟೆಯವರೆಗೆ ಜಿಲ್ಲೆ ಯಲ್ಲಿ ಮದ್ಯಪಾನ,ಮದ್ಯಮಾರಾಟ ಹಾಗೂ ಮದ್ಯ ಸಾಗಾ ಣಿಕೆಯನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಇಂದು ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ಗ್ರಾಮೀಣ ವ್ಯಾಪ್ತಿಯಲ್ಲಿನ ಭಾರತೀಯ ತಯಾರಿಕೆ ಮದ್ಯದ ಅಂಗಡಿಗಳು,ಬೀಯರ್ ಬಾರಗಳು, ಕ್ಲಬ್‍ಗಳು,ಮತ್ತು ಮದ್ಯದ ಡಿಪೋಗಳನ್ನು ನಿಷೇದಾಜ್ಞೆ ಜಾರಿಯಲ್ಲಿರುವ ಅವಧಿಯಲ್ಲಿ ಮುಚ್ಚಬೇಕು.ಪರಿಸ್ಥಿತಿಗೆ ಅನುಗುಣವಾಗಿ ಸಾರ್ವಜನಿಕ ಶಾಂತತೆಯನ್ನು ಕಾಯ್ದು ಕೊಂಡು ಬರುವ ಹಿತದೃಷ್ಟಿಯಿಂದ ವಲಯ ಅಬಕಾರಿ ಇನ್ಸ್ಪೆಕ್ಟರ್ ಗಳು ಹಾಗೂ ಉಪವಿಭಾಗ ಅಬಕಾರಿ ಅಧೀ ಕ್ಷಕರು ಅವಶ್ಯಕತೆ ಕಂಡುಬಂದಲ್ಲಿ ಕರ್ನಾಟಕ ಅಬಕಾರಿ ಕಾಯ್ದೆ ಅನ್ವಯ ಶಾಂತಿ ಪಾಲನೆಗಾಗಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅವರು ಆದೇಶಿಸಿದ್ದಾರೆ.
ಧಾರವಾಡ ಜಿಲ್ಲೆಯ ಆರಕ್ಷಕ ಅಧೀಕ್ಷಕರು,ಉಪ ಆರಕ್ಷಕ ಅಧೀಕ್ಷಕರು,ಅಬಕಾರಿ ಉಪ ಆಯುಕ್ತರು ಹಾಗೂ ಹೆಚ್ಚುವರಿ ಅಬಕಾರಿ ಅಧೀಕ್ಷಕರು ತಮ್ಮ ಕಾರ್ಯ ವ್ಯಾಪ್ತಿ ಯಲ್ಲಿ ಈ ಆದೇಶವನ್ನು ಪರಿಣಾಮಕಾರಿಯಾಗಿ ಜಾರಿಗೆ ಬರುವಂತೆ ಕ್ರಮ ಜರುಗಿಸಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಆದೇಶದಲ್ಲಿ ತಿಳಿಸಿದ್ದಾರೆ.