This is the title of the web page
This is the title of the web page

Live Stream

[ytplayer id=’1198′]

April 2025
T F S S M T W
 12
3456789
10111213141516
17181920212223
24252627282930

| Latest Version 8.0.1 |

Local News

ಚುನಾಯಿತ ಸದಸ್ಯರ ಸಮ್ಮುಖದಲ್ಲಿ ಗ್ರಾಮ ಪಂಚಾಯತ
ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ನಿಗದಿಗೊಳಿಸಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ಆದೇಶ

WhatsApp Group Join Now
Telegram Group Join Now

ಧಾರವಾಡ –

ರಾಜ್ಯ ಚುನಾವಣಾ ಆಯೋಗದ ಮಾರ್ಗಸೂಚಿ ಅನ್ವಯ ಧಾರವಾಡ ತಾಲೂಕಿನ 35 ಗ್ರಾಮ ಪಂಚಾಯತಿಗಳ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಚುನಾಯಿತ ಸದಸ್ಯರ ಸಮ್ಮುಖದಲ್ಲಿ ಮೀಸಲಾತಿ ನಿಗದಿಗೊಳಿಸಿ, ಜಿಲ್ಲಾಧಿಕಾರಿ ನಿತೇಶ ಪಾಟೀಲ ಆದೇಶಿಸಿದರು.

ಕೃಷಿ ವಿಶ್ವವಿದ್ಯಾಲಯದ ರೈತ ಜ್ಞಾನಾಭಿವೃದ್ಧಿ ಸಭಾಭವನದಲ್ಲಿ ಧಾರವಾಡ ತಾಲೂಕಿನ 35 ಗ್ರಾಮ ಪಂಚಾಯತಿಗಳ ಸದಸ್ಯರ ಸಭೆಯನ್ನು ಜರುಗಿಸಿ, ಮಾತನಾಡಿ ನಂತರ ಮೀಸಲಾತಿ ಕುರಿತು ಪಂಚಾಯತ್ ಸದಸ್ಯರಿಂದ ಲಾಟರಿ ಎತ್ತುವ ಮೂಲಕ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳನ್ನು ಆಯ್ಕೆ ಮಾಡಿ ನಿಗದಿಗೊಳಿಸಿ ಆದೇಶಿಸಿದರು.

ಧಾರವಾಡ ತಾಲೂಕಿನ 35 ಗ್ರಾ ಪಂ ಮೀಸಲಾತಿ ವಿವರ

ಗ್ರಾಮ ಪಂಚಾಯತ್‍ಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ ವಿವರ

ಮನಗುಂಡಿ ಗ್ರಾಮ ಪಂಚಾಯತಿಯ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಅ’ ವರ್ಗ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ,

ಮನಸೂರ ಗ್ರಾಮ ಪಂಚಾಯತಿಯ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಅ’ ವರ್ಗದ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಅನುಸೂಚಿತ ಪಂಗಡ ಮಹಿಳೆ,

ಮಂಡಿಹಾಳ ಗ್ರಾಮ ಪಂಚಾಯತಿಯ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಅ’ ವರ್ಗ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ,

ತೇಗೂರ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಅ’ ವರ್ಗ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ,

ಮಮ್ಮಿಗಟ್ಟಿ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಅ’ ವರ್ಗ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಅನುಸೂಚಿತ ಜಾತಿ ಮಹಿಳೆ,

ಮಾದನಭಾವಿ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಅ’ ವರ್ಗ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಬ’ ವರ್ಗ ಮಹಿಳೆ,

ತಡಕೊಡ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಅ’ ವರ್ಗ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ,

ನರೇಂದ್ರ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಅ’ ವರ್ಗ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ,

ಮರೇವಾಡ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಅ’ ವರ್ಗ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ,

ಕನಕೂರ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಅ’ ವರ್ಗ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ,

ಕ್ಯಾರಕೊಪ್ಪ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಬ’ ವರ್ಗ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ,

ಕುರುಬಗಟ್ಟಿ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಬ’ ವರ್ಗ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ,

ಯರಿಕೊಪ್ಪ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಅ’ ವರ್ಗ ಮಹಿಳೆ,

ನಿಗದಿ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ,

ಕಲಕೇರಿ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ,

ರಾಮಾಪುರ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಅನುಸೂಚಿತ ಜಾತಿ ಮಹಿಳೆ,

ಹಂಗರಕಿ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಅ’ ವರ್ಗ ಮಹಿಳೆ,

ಕೊಟಬಾಗಿ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಅ’ ವರ್ಗ ಮಹಿಳೆ,

ಪುಡಕಲಕಟ್ಟಿ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ,

ಅಮ್ಮಿನಭಾವಿ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಅ’ ವರ್ಗ ಮಹಿಳೆ,

ಶಿವಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ,

ಮುಗದ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ,

ಹಳ್ಳಿಗೇರಿ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ,

ಬೇಲೂರ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ,

ಯಾದವಾಡ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಅ’ ವರ್ಗ,

ಗರಗ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಅನುಸೂಚಿತ ಪಂಗಡ,

ಲೋಕೂರ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಅ’ ವರ್ಗ,

ಉಪ್ಪಿನಬೆಟಗೇರಿ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಅ’ ವರ್ಗ,

ಕರಡಿಗುಡ್ಡ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಅನುಸೂಚಿತ ಜಾತಿ,

ಹೆಬ್ಬಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಅ’ ವರ್ಗ,

ಚಿಕ್ಕಮಲ್ಲಿಗವಾಡ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಅನುಸೂಚಿತ ಜಾತಿ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಅ’ ವರ್ಗ ಮಹಿಳೆ,

ದೇವರಹುಬ್ಬಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಅನುಸೂಚಿತ ಜಾತಿ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ,

ಮಾರಡಗಿ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಅನುಸೂಚಿತ ಜಾತಿ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ,

ಹಾರೋಬೆಳವಡಿ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಅನುಸೂಚಿತ ಪಂಗಡ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಅ’ ವರ್ಗ,

ಕೋಟೂರು ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಅನುಸೂಚಿತ ಪಂಗಡ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಬ’ ವರ್ಗ ಮೀಸಲಾತಿಯನ್ನು ನಿಗದಿಗೊಳಿಸಿ ಜಿಲ್ಲಾ‌ ಚುನಾವಣಾ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಪ್ರಕಟಿಸಿದ್ದಾರೆ.


WhatsApp Group Join Now
Telegram Group Join Now
Suddi Sante Desk