ಧಾರವಾಡ –
ರಾಜ್ಯ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ವಯ ಅಣ್ಣಿಗೇರಿ ತಾಲೂಕಿನ 09 ಗ್ರಾಮ ಪಂಚಾಯತಿಗಳಿಗೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿಯನ್ನು ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಅಣ್ಣಿಗೇರಿ ಪಟ್ಟಣದ ಪಂಪ ಭವನದಲ್ಲಿ ಗ್ರಾಮಪಂಚಾಯತ್ ನೂತನ ಸದಸ್ಯರ ಸಭೆ ಜರುಗಿಸಿ, ಅವರ ಸಮ್ಮುಖದಲ್ಲಿಯೇ ಮೀಸಲಾತಿ ನಿಗದಿಪಡಿಸಿ ಪ್ರಕಟಿಸಿದರು.

ಅಣ್ಣಿಗೇರಿ ತಾಲೂಕಿನ 09 ಗ್ರಾಮ ಪಂಚಾಯತ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಮೀಸಲಾತಿ ವಿವರ

ಶಲವಡಿ ಗ್ರಾಮ ಪಂಚಾಯತಿಯ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಅ’ ವರ್ಗ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ, ಭದ್ರಾಪೂರ ಗ್ರಾಮ ಪಂಚಾಯತಿಯ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಅ’ ವರ್ಗ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ, ಸಾಸ್ವಿಹಳ್ಳಿ ಗ್ರಾಮ ಪಂಚಾಯತಿಯ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಅನುಸೂಚಿತ ಪಂಗಡ ಮಹಿಳೆ, ತುಪ್ಪದಕುರಹಟ್ಟಿ ಗ್ರಾಮ ಪಂಚಾಯತಿಯ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಇಬ್ರಾಹಿಂಪುರ ಗ್ರಾಮ ಪಂಚಾಯತಿಯ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಶಿಶ್ವಿನಹಳ್ಳಿ ಗ್ರಾಮ ಪಂಚಾಯತಿಯ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಅನುಸೂಚಿತ ಜಾತಿ ಮಹಿಳೆ, ನಲವಡಿ ಗ್ರಾಮ ಪಂಚಾಯತಿಯ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಅ’ ವರ್ಗ, ನಾವಳ್ಳಿ ಗ್ರಾಮ ಪಂಚಾಯತಿಯ ಅಧ್ಯಕ್ಷ ಸ್ಥಾನಕ್ಕೆ ಅನುಸೂಚಿತ ಜಾತಿ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಅ’ ವರ್ಗ ಮಹಿಳೆ, ಹಳ್ಳಿಕೇರಿ ಗ್ರಾಮ ಪಂಚಾಯತಿಯ ಅಧ್ಯಕ್ಷ ಸ್ಥಾನಕ್ಕೆ ಅನುಸೂಚಿತ ಪಂಗಡ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ,

ವರ್ಗಕ್ಕೆ ಮೀಸಲಾತಿಯನ್ನು ನಿಗದಿಗೊಳಿಸಿ ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಪ್ರಕಟಿಸಿದ್ದಾರೆ. ಗ್ರಾಮಪಂಚಾಯತಿಗಳ ಅಧ್ಯಕ್ಷ, ಉಪಾಧ್ಯಕ ಸ್ಥಾನಗಳ ಮೀಸಲಾತಿ ನಿಗದಿಪಡಿಸುವ ಕಾರ್ಯದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ತಹಶೀಲ್ದಾರ ಕೊಟ್ರೇಶ್ ಘಾಳಿ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಎಮ್. ಕಾಂಬಳೆ, ಜಿಲ್ಲಾಧಿಕಾರಿ ಕಚೇರಿಯ ಚುನಾವಣೆ ಶಾಖೆಯ ತಹಶೀಲ್ದಾರ ಎಚ್.ಎನ್. ಬಡಿಗೇರ, ಡಿ.ಎನ್. ಕಸಮಳಗಿ, ವರುಣ ನಾಯ್ಕ, ರುದ್ರೇಶ ಎಮ್., ಜಿಲ್ಲಾ ಎನ್‍ಐಸಿ ಅಧಿಕಾರಿ ಮೀನಾಕುಮಾರಿ, ಸಹಾಯಕ ಅಧಿಕಾರಿ ರಾಜು ಸೇರಿದಂತೆ ಇತರರು ಭಾಗವಹಿಸಿ ಕರ್ತವ್ಯ ನಿರ್ವಹಿಸಿದರು.