ಸವದತ್ತಿ ಯ ಯಲ್ಲಮ್ಮದೇವಿ ದೇವಸ್ಥಾನಕ್ಕೆ ಇನ್ನೂ ಸಿಗದ ದರ್ಶನ ಭಾಗ್ಯ….. ಇನ್ನೂ ಬಂದ್ ಮಾಡಿ ಜಿಲ್ಲಾಧಿಕಾರಿ ಆದೇಶ‌‌‌…..

Suddi Sante Desk

ಬೆಳಗಾವಿ –

ಉತ್ತರ ಕರ್ನಾಟಕದ ಐತಿಹಾಸಿಕ ದೇವಸ್ಥಾನ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕಿನ ರೇಣುಕಾ ಯಲ್ಲಮ್ಮ ದೇವಸ್ಥಾನ ಹಾಗೂ ಜೋಗುಳಭಾವಿ ಸತ್ತೆಮ್ಮದೇವಿ ದೇವಸ್ಥಾನಗಳಲ್ಲಿ ಸಾರ್ವಜನಿಕ ದರ್ಶನವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಭಾನುವಾರ ಆದೇಶಿಸಿದ್ದಾರೆ.

ಈ ದೇವಸ್ಥಾನಗಳ ಆಡಳಿತ ಮಂಡಳಿಯವರು ದಿನ ನಿತ್ಯದ ಸಂಪ್ರದಾಯದಂತೆ ಧಾರ್ಮಿಕ ವಿಧಿವಿಧಾನ ಗಳನ್ನು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ವಹಿಸಿ ನಡೆಸುವ ಷರತ್ತಿಗೆ ಒಳಪಟ್ಟು ವಿನಾಯಿತಿ ನೀಡ ಲಾಗಿದೆ.ಈ ದೇವಸ್ಥಾನಗಳ ಸುತ್ತಮುತ್ತಲಿನ ಪ್ರದೇ ಶದಲ್ಲಿನ ಅಂಗಡಿಗಳನ್ನು ತೆರೆಯುವುದನ್ನು ಕೂಡ ಮುಂದಿನ‌ ಆದೇಶದವರೆಗೆ ನಿಷೇಧಿಸಲಾಗಿದೆ.

ಆದೇಶ ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ಭಾರತೀಯ ದಂಡ ಸಂಹಿತೆ 188ರ ಪ್ರಕಾರ ಕ್ರಮ ಜರುಗಿಸಲಾಗು ವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ. ರಾಜ್ಯದಲ್ಲಿ ಜುಲೈ 5ರಿಂದ ಅನ್ ಲಾಕ್ ಘೋಷಣೆ ಮಾಡಲಾಗಿದ್ದು ದೇವಸ್ಥಾನಗಳನ್ನು ತೆರೆಯಲು ಅವಕಾಶ ಕೊಡಲಾಗಿದೆ. ಆದರೆ, ಯಲ್ಲಮ್ಮ ದೇವ ಸ್ಥಾನಕ್ಕೆ ನೆರೆಯ ಮಹಾರಾಷ್ಟ್ರದ ಭಕ್ತರು ಹೆಚ್ಚಾಗಿ ಬರುವುದರಿಂದ ಮುಂಜಾಗ್ರತಾ ಕ್ರಮವಾಗಿ ಸಾರ್ವ ಜನಿಕ ದರ್ಶನ ನಿಷೇಧ ಮುಂದುವರಿಸಲಾಗಿದೆ. ಆ ರಾಜ್ಯದಲ್ಲಿ ಕೋವಿಡ್ ಮತ್ತು ಡೆಲ್ಟಾ ಪ್ಲಸ್ ಪ್ರಕರಣ ಗಳು ಹೆಚ್ಚಿರುವುದು ಇದಕ್ಕೆ ಕಾರಣವಾಗಿದೆ ಎಂದು ದೇವಸ್ಥಾನದ ಆಡಳಿತಾಧಿಕಾರಿ ರವಿ ಅವರು ಹೇಳಿದರು

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.