ಪಾಲಿಕೆಯ ಚುನಾವಣಾ ಪ್ರಚಾರಕ್ಕೆ ಐದು ಜನರಿಗೆ ಅಷ್ಟೇ ಅವಕಾಶ – ಜಿಲ್ಲಾಧಿಕಾರಿ ಆದೇಶ

Suddi Sante Desk

ಧಾರವಾಡ –

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸಾರ್ವತ್ರಿಕ ಚುನಾವಣೆ -2021 ಮನೆ ಮನೆ ಪ್ರಚಾರಕ್ಕೆ ಗರಿಷ್ಠ 5 ಜನರಿಗೆ ಅವಕಾಶವನ್ನು ನೀಡಲಾಗಿದೆ ಎಂದು ಧಾರವಾಡ ಜಿಲ್ಲಾಧಿಕಾರಿ ನಿತೀಶ್ ಪಾಟೀಲ್ ಹೇಳಿದ್ದಾರೆ‌.ಪ್ರಚಾರ ವಾಹನ, ಗುಂಪು ಪ್ರಚಾರ ನಿಷೇಧವನ್ನು ಮಾಡಲಾಗಿದೆ ಎಂದರು.

ರಾಜ್ಯದಲ್ಲಿ ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಪ್ರಸ್ತುತ ಘೋಷಣೆಯಾಗಿರುವಹುಬ್ಬಳ್ಳಿ-ಧಾರವಾಡ ಸಾರ್ವತ್ರಿಕ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿ ಗಳು ಮನೆ ಮನೆ ಪ್ರಚಾರ ಹಾಗೂ ಬಹಿರಂಗ ಪ್ರಚಾರಕ್ಕೆ ಮಾರ್ಗಸೂಚಿಗಳನ್ನು ನೀಡಿ ರಾಜ್ಯ ಚುನಾವಣಾ ಆಯೋಗವು ಇಂದು (ಆಗಸ್ಟ್ 18) ಆದೇಶ ಹೊರಡಿಸಿದ್ದು ಅಭ್ಯರ್ಥಿಗಳು ಇದನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಜಿಲ್ಲಾ ಚುನಾವ ಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು ರಾಜ್ಯ ಚುನಾವಣಾ ಆಯೋಗವು ಅಭ್ಯರ್ಥಿಗಳು ಪ್ರಚಾರ ಕೈಗೊಳ್ಳುವ ಕುರಿತು ಭಾರತ ಸಂವಿಧಾನದ ಪರಿಚ್ಛೇದ 243 ಜೆಡ್‍ಎ ರನ್ವಯ ಕೆಲವು ನಿರ್ದೇಶನ ಗಳನ್ನು ನೀಡಿ ಆದೇಶಿಸಿದೆ.

ಅಭ್ಯರ್ಥಿಯೂ ಸೇರಿ ಗರಿಷ್ಟ 5 ಜನ ಬೆಂಬಲಿಗ ರೊಂದಿಗೆ ಫೇಸ್‍ ಮಾಸ್ಕ್ ಧರಿಸಿ,ಸಾಮಾಜಿಕ ಅಂತರ ಕಾಯ್ದುಕೊಂಡು ಮನೆ ಮನೆಗೆ ಭೇಟಿ ನೀಡಿ ಪ್ರಚಾರ ನಡೆಸಬಹುದು.ಪ್ರಚಾರಕ್ಕೆ ವಾಹನ ಬಳಸುವುದನ್ನು ಮತ್ತು ಗುಂಪು ಗುಂಪು ಸೇರಿ ಪ್ರಚಾರ ಮಾಡುವುದನ್ನು ನಿಷೇಧಿಸಿದೆ.ಮುದ್ರಣ ಹಾಗೂ ವಿದ್ಯುನ್ಮಾನ (ಇಲೆಕ್ಟ್ರಾನಿಕ ಮೀಡಿಯಾ) ಮಾಧ್ಯಮದಲ್ಲಿ ಪ್ರಚಾರ ಕೈಗೊಳ್ಳಬಹುದು ಮತ್ತು ಅವುಗಳ ವೆಚ್ಚದ ವಿವರವನ್ನು ಸಲ್ಲಿಸಬೇಕು. ಪ್ರಚಾರಕ್ಕಾಗಿ ನಿಯಮಾನುಸಾರ ಮುದ್ರಿಸಿದ ಕರಪತ್ರವನ್ನು ಹಂಚಬಹುದು.ಈ ಸಮಯದಲ್ಲಿ ಕಡ್ಡಾಯವಾಗಿ ಫೇಸ್‍ಮಾಸ್ಕ್ ಧರಿಸಿರಬೇಕು ಎಂದು ರಾಜ್ಯ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.

ಅದರಂತೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಸಾರ್ವತ್ರಿಕ ಚುನಾವಣೆ ಗಾಗಿ ಕೈಗೊಳ್ಳುವ ಪ್ರಚಾರ ಕಾರ್ಯದಲ್ಲಿ ಆಯೋ ಗವು ನೀಡಿರುವ ಆದೇಶವನ್ನು ಕಡ್ಡಾಯವಾಗಿ ಎಲ್ಲ ಅಭ್ಯರ್ಥಿಗಳು ಪಾಲಿಸಬೇಕು.ಈ ಕುರಿತು ಸದಾ ಚಾರ ಸಂಹಿತೆಯ ಸಮಿತಿ ಕಣ್ಗಾವಲು ವಹಿಸಿದ್ದು ಉಲ್ಲಂಘನೆ ಕಂಡು ಬಂದಲ್ಲಿ ತಕ್ಷಣ ಕಾನೂನಾತ್ಮಕ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.