ಗದಗ –
ಪೇಪರ್ ಪ್ಲೇಟ್ ತಯಾರಿಕಾ ಘಟಕದ ಪರವಾನಿಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅಧಿಕಾರಿಯೊಬ್ಬರು ಗದಗ ನಲ್ಲಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಹೌದು ಜಿಲ್ಲಾ ಕಾರ್ಮಿಕ ನಿರೀಕ್ಷಕಿ ಎಸಿಬಿ ಟ್ರ್ಯಾಪ್ ಆಗಿದ್ದಾರೆ.

ಗದಗ ಕಾರ್ಮಿಕ ಕಚೇರಿಯ ಕಾರ್ಮಿಕ ನಿರೀಕ್ಷಕಿ ಅನುರಾಧ ಜಿ ಎಸಿಬಿ ಬಲೆಗೆ ಬಿದ್ದ ಅಧಿಕಾರಿ ಯಾಗಿದ್ದಾರೆ. ಲಂಚ ಸ್ವೀಕರಿಸುವಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ.

ಪೇಪರ್ ಪ್ಲೇಟ್ ತಯಾರಿಕ ಘಟಕದ ಪರವಾನಿ ನೀಡುವ ಸಂಬಂಧ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮಾಬುಸಾಬ್ ಕನಕ್ಯಾನವರ ಎಂಬುವರಿಂದ ಲಂಚ ಸ್ವೀಕರಿಸುವಾಗ ಬಲೆಗೆ ಬಿದ್ದಿದ್ದಾರೆ.2500 ರೂ. ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದಿದ್ದಾರೆ.

ಮಾಬುಸಾಬ್ ಗದಗ ನಗರದ ಎಸ್.ಎಂ ಕೃಷ್ಣ ಕಾಲೋನಿ ನಿವಾಸಿಯಾಗಿದ್ದಾರೆ.ಎಸಿಬಿ DYSP ವಾಸುದೇವರಾಮ್ ಎನ್ ಅವರ ನೇತೃತ್ವದಲ್ಲಿ ಈ ಒಂದು ದಾಳಿ ನಡೆದಿದ್ದು ಇಲಾಖೆಯ ಹಲವು ಸಿಬ್ಬಂದಿಗಳು ಪಾಲ್ಗೊಂಡಿದ್ದರು