ಬೆಂಗಳೂರು-
ಬೆಂಗಳೂರಿನ ಮಹಾನಗರ ಪಾಲಿಕೆಯ ಮಾಜಿ ಮೇಯರ್ ಸಂಪತ್ ರಾಜ್ ನನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ.ಆಗಸ್ಟ್ 11 ರಂದು ರಾತ್ರಿ ಬೆಂಗಳೂರಿನ ಡಿ.ಜೆ. ಹಳ್ಳಿ ಹಾಗೂ ಕೆ.ಜಿ. ಹಳ್ಳಿ ಗಲಭೆ ಪ್ರಕರಣ ಹಾಗೂ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪತ್ ರಾಜ್ ನನ್ನು ನಿನ್ನೇ ಬೆಂಗಳೂರಿನ ಸಿಸಿಪಿ ಪೊಲೀಸರು ಬಂಧಿಸಿದ್ದಾರೆ.
ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ರನ್ನು ಕಡೆಗೂ ಸಿಸಿಬಿ ಪೊಲೀಸರು ಬಂಧಿಸಿ ವಶಕ್ಕೇತಗೆದುಕೊಂಡಿದ್ದಾರೆ.ಗಲಾಟೆ ಗಲಭೆ ಪ್ರಕರಣ ಕುರಿತಂತೆ ಬಹಳ ದಿನಗಳಿಂದ ತಲೆ ಮರೆಸಿಕೊಂಡಿದ್ದ ಸಂಪತ್ ರಾಜ್ ಸೆರೆಗಾಗಿ ಸಿಸಿಬಿ ಐದು ತಂಡಗಳನ್ನು ರಚಿಸಿತ್ತು. ಬೆಂಗಳೂರು ಸೇರಿದಂತೆ ಹೊರ ರಾಜ್ಯಗಳಲ್ಲೂ ಕೂಡಾ ಸಂಪತ್ ರಾಜ್ ಗಾಗಿ ಖಾಕಿ ಟೀಮ್ ಹುಡುಕಾಟ ನಡೆಸುತ್ತಿದ್ದರು.
ಮಂಗಳವಾರವಷ್ಟೇ ಸಂಪತ್ ರಾಜ್ ಆಪ್ತ ರಿಯಾಜುದ್ದೀನ್ ರನ್ನು ಸಿಸಿಬಿ ಪೊಲೀಸರು ಬಂಧಿಸಿ ಆತ ನೀಡಿದ ಸುಳಿವಿನ ಮಾಹಿತಿ ಆಧರಿಸಿ ದಾಳಿ ನಡೆಸಿದ ಪೊಲೀಸರ ಬಲೆಗೆ ಕೊನೆಗೂ ಸಂಪತ್ ರಾಜ್ ಬಿದ್ದಿದ್ದಾನೆ.ಸಧ್ಯ ಸಿಸಿಬಿ ಪೊಲೀಸರು ಅವರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆಗಸ್ಟ್ 11ರಂದು ರಾತ್ರಿ ಡಿ. ಜೆ. ಹಳ್ಳಿ ಮತ್ತು ಕೆ. ಜಿ. ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಲಭೆ ನಡೆದಿತ್ತು. ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಬೆಂಕಿ ಹಚ್ಚಲಾಗಿತ್ತು. ಅಲ್ಲದೆ ಪೋಲಿಸ್ ಠಾಣೆಗೂ ಬೆಂಕಿ ಇಟ್ಟಿದ್ದರು. ಈ ಪ್ರಕರಣದ ಬೆನ್ನುಬಿದ್ದ ಪೋಲಿಸರು ಗಲಭೆಯ ಸುಮಾರು 400ಕ್ಕೂ ಅಧಿಕ ಜನರನ್ನು ಈಗಾಗಲೇ ಬಂಧಿಸಲಾಗಿತ್ತು. ನವೀನ್ ಪುಲಿಕೇಶಿನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಸೋದರಳಿಯ. ನವೀನ್ ಒಂದು ಸಮುದಾಯದ ವಿರುದ್ಧ ಫೇಸ್ ಬುಕ್ ಪೋಸ್ಟ್ ಹಾಕಿದ್ದಾರೆ ಎಂದು ಆರೋಪಿಸಿ ಆರಂಭವಾದ ಗಲಭೆ ತೀವ್ರ ಸ್ವರೂಪ ಪಡೆದಿತ್ತು ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿ ಪಾಸ್ತಿ ಕೂಡಾ ನಷ್ಟ ವಾಗಿತ್ತು ಈ ಪ್ರಕರಣದಲ್ಲಿ ತನಿಖೆ ಮಾಡ್ತಾ ಇದ್ದ ಪೊಲೀಸರಿಗೆ ಮಾಜಿ ಮೇಯರ್ ಹೆಸರು ಕೇಳಿಬಂದಿತ್ತು ಅಂದಿನಿಂದ ಸಂಪತ್ ರಾಜ್ ನಾಪತ್ತೆಯಾಗಿದ್ದನು ಸಧ್ಯ ಪೊಲೀಸರು ಸಂಪತ್ ರಾಜ್ ನನ್ನು ಬಂಧಿಸಿದ್ದು ವಶಕ್ಕೇ ತಗೆದುಕೊಂಡು ಡ್ರೀಲ್ ಮಾಡುತ್ತಿದ್ದಾರೆ.