ರಾಜ್ಯ ಬಜೆಟ್ ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸಿಕ್ಕಿದೆಷ್ಟು ಗೊತ್ತಾ – ಬಜೆಟ್ ನಲ್ಲಿ ಶಿಕ್ಷಣ ಕ್ಷೇತ್ರದ ಸಿಕ್ಕಿದೇಷ್ಟು CM ಏನೇನು ಕೊಟ್ಟಿದ್ದಾರೆ ಗೊತ್ತಾ ಸಂಪೂರ್ಣ ಮಾಹಿತಿ…..

Suddi Sante Desk
ರಾಜ್ಯ ಬಜೆಟ್ ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸಿಕ್ಕಿದೆಷ್ಟು ಗೊತ್ತಾ – ಬಜೆಟ್ ನಲ್ಲಿ ಶಿಕ್ಷಣ ಕ್ಷೇತ್ರದ ಸಿಕ್ಕಿದೇಷ್ಟು CM ಏನೇನು ಕೊಟ್ಟಿದ್ದಾರೆ ಗೊತ್ತಾ ಸಂಪೂರ್ಣ ಮಾಹಿತಿ…..

ಬೆಂಗಳೂರು

ರಾಜ್ಯ ಬಜೆಟ್ ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸಿಕ್ಕಿದೆಷ್ಟು ಗೊತ್ತಾ – ಬಜೆಟ್ ನಲ್ಲಿ ಶಿಕ್ಷಣ ಕ್ಷೇತ್ರದ ಸಿಕ್ಕಿದೇಷ್ಟು CM ಏನೇನು ಕೊಟ್ಟಿದ್ದಾರೆ ಗೊತ್ತಾ ಸಂಪೂರ್ಣ ಮಾಹಿತಿ…..

ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಬಜೆಟ್ ನಲ್ಲಿ ಶಿಕ್ಷಣ ಕ್ಷೇತ್ರಕ್ಕೂ ಹಲವಾರು ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ.ಪಬ್ಲಿಕ್ ಶಾಲೆಗಳಾಗಿ ಉನ್ನತೀಕರಣ, ಅತಿಥಿ ಉಪನ್ಯಾಸಕರಿಗೆ ಮಾತೃತ್ವ ರಜೆ ಘೋಷಣೆ ಸೇರಿದಂತೆ ಶಾಲೆಗಳ ಮೂಲಭೂತ ಸೌಕರ್ಯ ಅಭಿವೃದ್ಧಿಗೆ 565 ಕೋಟಿ ರೂ ಅನುದಾನ ಸೇರಿದಂತೆ, ಶಿಕ್ಷಕರ ಹುದ್ದೆಗಳ ಭರ್ತಿ ಕಲ್ಯಾಣ ಕರ್ನಾಟಕದಲ್ಲಿ ಪ್ರಥಮ ದರ್ಜೆ ಕಾಲೇಜುಗಳ ಸ್ಥಾಪನೆಗೆ ಅನುದಾನವನ್ನು ನೀಡಲಾಗಿದೆ.

ಪ್ರಮುಖವಾಗಿ 2026-27ನೇ ಸಾಲಿನಲ್ಲಿ ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ 15,000 ಬೋಧಕ ಹುದ್ದೆಗಳ ಭರ್ತಿ ಬಸವ ಕಲ್ಯಾಣದಲ್ಲಿ ಖಾಸಗಿ ವಚನ ವಿಶ್ವವಿದ್ಯಾಲಯವನ್ನು ಪ್ರಾರಂಭಿ ಸಲು 25 ಎಕರೆ ಜಮೀನು ಮಂಜೂರು ಧಾರವಾಡ ಮತ್ತು ಬೆಂಗಳೂರಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳಿಗಾಗಿ ತಲಾ 10 ಕೋಟಿ ರೂ. ವೆಚ್ಚದಲ್ಲಿ ಡಿಜಿಟಲ್ ಗ್ರಂಥಾಲಯ ಹಾಗೂ ಅಧ್ಯಯನ ಕೇಂದ್ರ ನಿರ್ಮಾಣಕ್ಕೆ ಒತ್ತು ನೀಡಲಾಗಿದೆ.

ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್ ಹಾಗೂ ಇಂಜಿನಿಯರಿಂಗ್ ಕಾಲೇಜು ಮಹಿಳಾ ಅತಿಥಿ ಉಪನ್ಯಾಸಕರು ಗಳಿಗೆ 90 ದಿನಗಳ ಮಾತೃತ್ವ ರಜೆಯ ಸೌಲಭ್ಯ ಸರಕಾರಿ ಶಾಲೆಗಳ ಶಿಕ್ಷಣ ಗುಣಮಟ್ಟ ಹಾಗೂ ಉಳಿವಿಗೆ 2026-27 ನೇ ಸಾಲಿನ ಬಜೆಟ್‌ನಲ್ಲಿ ಹಲವು ಘೋಷಣೆಗಳನ್ನು ಮಾಡಲಾಗಿದೆ 2025-26ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ 184 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಹಾಗೂ 50 ಪ್ರೌಢ ಶಾಲೆಗಳನ್ನು ಪದವಿ ಪೂರ್ವ ಕಾಲೇಜು ಗಳನ್ನಾಗಿ ಉನ್ನತೀಕರಿಸಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಅನುಕೂಲ ಕಲ್ಪಿಸಲಾಗಿದೆ.

ಇನ್ನೂ ಉತ್ತಮ ಕಲಿಕೆ ಉಜ್ವಲ ಭವಿಷ್ಯʼ ಎಂಬ ಘೋಷವಾಕ್ಯ ದೊಂದಿಗೆ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ ನೀಡಲು ADB ನೆರವಿನೊಂದಿಗೆ 500 ಶಾಲೆಗಳು, KKRDB ನಿಧಿಯಿಂದ 200 ಶಾಲೆಗಳು ಹಾಗೂ KMERC ನಿಧಿಯಿಂದ 100 ಶಾಲೆಗಳು ಒಟ್ಟಾರೆ 800 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಉನ್ನತೀಕರಿಸಲಾಗುವುದು. ಇದಕ್ಕಾಗಿ ಒಟ್ಟಾರೆ 3,900 ಕೋಟಿ ರೂ.ಗಳನ್ನು ಮುಂದಿನ ಮೂರು ವರ್ಷಗಳಲ್ಲಿ ವೆಚ್ಚ ಮಾಡ ಲಾಗುವುದು.

ಖಾಸಗಿ ಶಾಲೆಗಳ ಮಾನ್ಯತೆ ಪಡೆಯುವ ಹಾಗೂ ನವೀಕರಿಸುವ ಪ್ರಕ್ರಿಯೆಯನ್ನು ಆನ್ಲೈನ್ ಮೂಲಕ ಅರ್ಜಿ ಹಾಗೂ ದಾಖಲೆಗ ಳನ್ನು ಸಲ್ಲಿಸಲು ಅನುಮತಿಸಿ ಸರಳೀಕರಣಗೊಳಿಸಲಾಗಿದೆ. 2025–26ನೇ ಸಾಲಿನಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುವ ವಿವಿಧ ಸವಲತ್ತುಗಳನ್ನು ಮೊದಲ ಬಾರಿಗೆ ನೇರ ನಗದು ವರ್ಗಾವಣೆ (DBT) ಮಾಡಲಾಗುತ್ತಿದೆ ವಿದ್ಯಾರ್ಥಿಗಳಿಗೆ ಗ್ರಾಮೀಣ ಪತ್ರ ಕನ್ನಡ ಮಾಧ್ಯಮ ವ್ಯಾಸಂಗ ಪ್ರಮಾಣ ಪತ್ರಗಳನ್ನು ಆನ್-ಲೈನ್ ಮೂಲಕ ವಿತರಿಸಲಾಗಿದೆ.ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆಯ ವೇಳೆ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿನ (KPS)ಶಿಕ್ಷಕರ ಹುದ್ದೆಗಳನ್ನು ಮಹತ್ವದ ಹುದ್ದೆಗಳೆಂದು ಪರಿಗಣಿಸಿ ಮೊದಲ ಆದ್ಯತೆಯಲ್ಲಿ ಭರ್ತಿ ಮಾಡಲಾಗುವುದು ಹಾಗೂ ಸದರಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಶಿಕ್ಷಕರ ನೇಮಕಾತಿ ಮಾಡಲು ಆದ್ಯತೆ ನೀಡಲಾಗುವುದು.

ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಹೊಸ ಕೊಠಡಿ ನಿರ್ಮಾಣ ಮತ್ತು ಕೊಠಡಿಗಳ ದುರಸ್ತಿ ಕಾಮಗಾರಿಗಳಿಗೆ 565 ಕೋಟಿ ರೂ.ಗಳು, ಶೌಚಾಲಯ ನಿರ್ಮಾಣಕ್ಕಾಗಿ 75 ಕೋಟಿ ರೂ.ಗಳು ಹಾಗೂ ಶಾಲೆಗಳಿಗೆ ಪೀಠೋಪಕರಣಗಳನ್ನು ಖರೀದಿಸಲು 25 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು.ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳ ನಿರ್ವಹಣೆಗಾಗಿ 125 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು.

ಪ್ರಾಥಮಿಕ ಶಾಲಾ ಶಿಕ್ಷಕರ ಸಾಮರ್ಥ್ಯ ವೃದ್ಧಿಗಾಗಿ ಇಂಗ್ಲಿಷ್ ಭಾಷಾ ತರಬೇತಿ ಕಾರ್ಯಕ್ರಮವನ್ನು 24 ಕೋಟಿ ರೂ. ವೆಚ್ಚದಲ್ಲಿ ಹಮ್ಮಿಕೊಳ್ಳಲಾಗುವುದು.IIT ಧಾರವಾಡದ ಸಹಯೋಗ ದೊಂದಿಗೆ 8 ರಿಂದ 12ನೇ ತರಗತಿಯವರೆಗೆ ವಿದ್ಯಾಭ್ಯಾಸ ಮಾಡುತ್ತಿರುವ ಸುಮಾರು 12.28 ಲಕ್ಷ ವಿದ್ಯಾರ್ಥಿಗಳಿಗೆ ಅಂದಾಜು ಐದು ಕೋಟಿ ರೂ.ಗಳ ವೆಚ್ಚದಲ್ಲಿ ಕಲಿಕಾ ಪ್ರಕ್ರಿಯೆ ಯಲ್ಲಿ AI ತಂತ್ರಜ್ಞಾನವನ್ನು ಅಳವಡಿಸಿಕೊಂಡು ವೈಯಕ್ತಿಕ ಸ್ವಯಂ-ಕಲಿಕಾ ಡಿಜಿಟಲ್ ಟ್ಯೂಟರ್ ಸೌಲಭ್ಯವನ್ನು ಒದಗಿಸಲಾಗುವುದು.

2026-27ನೇ ಸಾಲಿನಲ್ಲಿ ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ 15,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲಾಗುವುದು.204 BRC ಕೇಂದ್ರಗಳಲ್ಲಿ ಪ್ರತಿ ಕೇಂದ್ರಕ್ಕೆ ಒಬ್ಬರು ಅರ್ಹ ಮಾನಸಿಕ ಆರೋಗ್ಯ ಸಲಹೆಗಾರರನ್ನು ನೇಮಿಸಲಾಗುವುದು ವಿಜಯಪುರದ ಸೈನಿಕ ಶಾಲೆಯ ಹಾಸ್ಟೆಲ್ ಕಟ್ಟಡಗಳನ್ನು ಹಂತ ಹಂತವಾಗಿ ಪುನರ್ ನಿರ್ಮಿಸಲು ಪ್ರಸಕ್ತ ಸಾಲಿನಲ್ಲಿ 10 ಕೋಟಿ ರೂ.ಗಳನ್ನು ಒದಗಿಸಲಾಗುವುದು.ಹೆಚ್ಚುತ್ತಿರುವ ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ಬೀರುವ ಅಡ್ಡ ಪರಿಣಾಮಗಳನ್ನು ತಡೆಗಟ್ಟುವ ಉದ್ದೇಶದಿಂದ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆಯನ್ನು ನಿಷೇಧಿಸಲಾಗುವುದು.

ಮಾದಕ ವಸ್ತುಗಳ ಮೇಲೆ ಕಟ್ಟುನಿಟ್ಟಿನ ನಿರ್ಬಂಧ ಹೇರಲಾಗು ವುದು.ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಪಾಲಿಟೆಕ್ನಿಕ್ಗಳ ಬಲವರ್ಧನೆ, ಉತ್ಕೃಷ್ಟತಾ ಕೇಂದ್ರಗಳ ಸ್ಥಾಪನೆ ಹಾಗೂ ಸಂಶೋಧನಾ ಸಾಮರ್ಥ್ಯ ಹೆಚ್ಚಿಸುವ ಸಲುವಾಗಿ ADB ನೆರವಿನೊಂದಿಗೆ 2,500 ಕೋಟಿ ರೂ. ವೆಚ್ಚದಲ್ಲಿ ʻಕರ್ನಾಟಕ ಉನ್ನತ ಶಿಕ್ಷಣ ಪರಿವರ್ತನೆ ಯೋಜನೆʼ ಯನ್ನು ಅನುಷ್ಠಾನ ಗೊಳಿಸಲಾಗುತ್ತಿದೆ.

ಈ ಯೋಜನೆಯಡಿ 40 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಮತ್ತು 11 ಪಾಲಿಟೆಕ್ನಿಕ್ಗಳನ್ನು ಮಾದರಿ ಸಂಸ್ಥೆಗಳನ್ನಾಗಿ ಅಭಿವೃದ್ಧಿ ಗೊಳಿಸಲಾಗುತ್ತಿದೆ. ವಿದ್ಯಾರ್ಥಿಗಳಲ್ಲಿ ಉದ್ಯಮಶೀಲತೆ ಮತ್ತು ಸ್ಟಾರ್ಟ್-ಅಪ್ ಸಂಸ್ಕೃತಿಯನ್ನು ಪ್ರೋತ್ಸಾಹಿಸಲು ADB ನೆರವಿನೊಂದಿಗೆ 9 ಉತ್ಕೃಷ್ಟತಾ ಕೇಂದ್ರಗಳನ್ನು ಸ್ಥಾಪಿಸಲಾ ಗುವುದು.ಹಿಂದಿನ ಸಾಲಿನಲ್ಲಿ ಘೋಷಿಸಿದಂತೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಇಂಜಿನಿಯರಿಂಗ್ ಕಾಲೇಜುಗಳು, ಪಾಲಿಟೆಕ್ನಿ ಕ್  ಗಳು ಮತ್ತು UGC ವಿಶ್ವವಿದ್ಯಾಲಯದಲ್ಲಿ  2,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿಸ. ಲಾಗಿದೆ.ಸದರಿ ನೇಮಕಾತಿ ಪ್ರಕ್ರಿಯೆಯನ್ನು ಶೀಘ್ರದಲ್ಲಿ ಪೂರ್ಣಗೊಳಿಸಲಾಗುವುದು.

ಸಾರ್ವಜನಿಕ ವಿಶ್ವವಿದ್ಯಾಲಯಗಳಲ್ಲಿ 1,000 ಬೋಧಕ ಹುದ್ದೆಗಳನ್ನು ತರ್ಕಬದ್ಧಗೊಳಿಸಿ ಹಂತ ಹಂತವಾಗಿ ಭರ್ತಿ ಮಾಡಲಾಗುವುದು.ಶೇ.50ಕ್ಕಿಂತ ಹೆಚ್ಚು ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿರುವ 25 ಸರ್ಕಾರಿ ಪದವಿ ಕಾಲೇಜು, ಮೂರು ಪಾಲಿಟೆಕ್ನಿಕ್ ಹಾಗೂ ಮೂರು ಇಂಜಿನಿಯರಿಂಗ್ ಕಾಲೇಜುಗಳಲ್ಲಿ ತಲಾ ಒಂದು ಕೋಟಿ ರೂ.ಗಳಂತೆ ಒಟ್ಟು 31 ಕೋಟಿ ರೂ.ಗಳ ವೆಚ್ಚದಲ್ಲಿ ವಿದ್ಯಾರ್ಥಿನಿಯರಿಗೆ ಅವಶ್ಯವಿರುವ ಮೂಲ ಸೌಲಭ್ಯಗಳನ್ನು ಒದಗಿಸಲಾಗುವುದು.

50 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಅಗತ್ಯವಿರುವ ಪೀಠೋಪಕರಣಗಳು ಹಾಗೂ ಕಟ್ಟಡಗಳ ದುರಸ್ತಿ/ನವೀಕರಣ ಕಾಮಗಾರಿಗಳನ್ನು 100 ಕೋಟಿ ರೂ.ಗಳ ವೆಚ್ಚದಲ್ಲಿ ಮುಂದಿನ ಮೂರು ವರ್ಷಗಳಲ್ಲಿ ಕೈಗೊಳ್ಳಲಾಗುವುದು.ವಿಜಯಪುರ ಜಿಲ್ಲೆಯ ಚಡಚಣ, ಬೆಳಗಾವಿ ಗ್ರಾಮಾಂತರ ಹಾಗೂ ಮೈಸೂರು ನಗರದ ನರಸಿಂಹರಾಜ ಕ್ಷೇತ್ರದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಗಳನ್ನು ಸ್ಥಾಪಿಸಲಾಗುವುದು. ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿ KKRDB macro ಅನುದಾನದಿಂದ ಪ್ರಥಮ ದರ್ಜೆ ಕಾಲೇಜ ನ್ನು ಸ್ಥಾಪಿಸಲಾಗುವುದು ಎಂದು ಘೋಷಿಸಿದ್ದಾರೆ

 

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.