ಬೆಂಗಳೂರು –
ಶೇ 17 ರಷ್ಟು ವೇತನ ಹೆಚ್ಚಳದಿಂದ ನೌಕರರ ಮೂಲ ವೇತನ ಎಷ್ಟು ಹೆಚ್ಚಳವಾಗಲಿದೆ ಗೊತ್ತಾ ರಾಜ್ಯ ಸರ್ಕಾರಿ ನೌಕರರ ಹೋರಾಟದಿಂದ ಹೊರಬೀತ್ತು ಆದೇಶ.ಹೌದು 7ನೇ ವೇತನ ಜಾರಿಗೆ ಮತ್ತು ಹಳೆ ಪಿಂಚಣಿ ಯೋಜನೆ ಮರು ಜಾರಿಗೆ ಒತ್ತಾಯಿಸಿ ಇಂದಿನಿಂದ ರಾಜ್ಯವ್ಯಾಪಿ ಆರಂಭವಾಗಿದ್ದ ಸರ್ಕಾರಿ ನೌಕರರ ಹೋರಾಟಕ್ಕೆ ಕೊನೆಗೂ ರಾಜ್ಯ ಸರ್ಕಾರ ಬಗ್ಗಿದೆ.
ಹೌದು ನಿನ್ನೆ ತಡರಾತ್ರಿ ವರೆಗೂ ಹಗ್ಗ ಜಗ್ಗಾಟದ ನಡುವೆಯೂ ಕೂಡಾ ಬೆಳಿಗ್ಗೆ ರಾಜ್ಯದಲ್ಲಿ ಸರ್ಕಾರಿ ನೌಕರರು ಬೀದಿಗಿಳಿದು ಹೊರಾಟ ಮಾಡುತ್ತಿ ದ್ದರುಇದೇಲ್ಲದರ ಪರಿಣಾಮವಾಗಿ ಎಚ್ಚೇತ್ತು ಕೊಂಡ ರಾಜ್ಯ ಸರ್ಕಾರ ಕೊನೆಗೂ ರಾಜ್ಯ ಸರ್ಕಾರಿ ನೌಕರರ ವೇತನವನ್ನು 17ರಷ್ಟು ಹೆಚ್ಚಳವನ್ನು ಮಾಡಿ ಆದೇಶವನ್ನು ಮಾಡಲಾ ಗಿದೆ.
ಎರಡು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟು ಕೊಂಡು ಹೋರಾಟ ಮಾಡುತ್ತಿದ್ದ ರಾಜ್ಯ ಸರ್ಕಾರಿ ನೌಕರರಿಗೆ ಕೊನೆಗೂ ರಾಜ್ಯ ಸರ್ಕಾರ ಶೇ.17 ರಷ್ಟು ವೇತನವನ್ನು ಹೆಚ್ಚಳ ಮಾಡಿ ಆದೇಶವನ್ನು ಮಾಡಿದೆ.ರಾಜ್ಯ ಸರ್ಕಾರಿ ನೌಕರ’ರ ಮೂಲ ವೇತನ ಹೆಚ್ಚಳವಾಗಲಿದೆ. ರಾಜ್ಯ ಸರ್ಕಾರಿ ನೌಕರ ರಿಗೆ ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಮೂಲ ವೇತನದ ಶೇ.17ರಷ್ಟು ಮಧ್ಯಂತರ ಪರಿಹಾರ ವನ್ನು ಮಂಜೂರು ಮಾಡಿ ರಾಜ್ಯ ಸರ್ಕಾರ ಅಧಿಕೃತ ವಾಗಿ ಆದೇಶ ಹೊರಡಿಸಿದೆ.
ಅದರಂತೆ ನಿಮ್ಮ ಮೂಲ ವೇತನ,ಪ್ರಸ್ತುತ ತುಟ್ಟಿ ಭತ್ಯೆ ಸೇರಿ ಶೇ.17 ರಷ್ಟು ಮಧ್ಯಂತರ ಪರಿಹಾರ ಸೇರಿದರೆ ವೇತನ ಎಷ್ಟು ಸಿಗಲಿದೆ ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯ ದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ.2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಏಪ್ರಿಲ್ 2023 ರಿಂದ ಜಾರಿಗೆ ಬರುವಂತೆ ಮೂಲ ವೇತನದ ಶೇ.17ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ಸರ್ಕಾರವು ಹರ್ಷಿಸುತ್ತದೆ ಎಂದು ತಿಳಿಸಿದ್ದಾರೆ.
ಮಧ್ಯಂತರ ಪರಿಹಾರದ ಉದ್ದೇಶಕ್ಕಾಗಿ ಮೂಲ ವೇತನ ಎಂದರು ಸ್ರಕಾರಿ ನೌಕರರನು ಧಾರಣ ಮಾಡಿರುವ ಹುದ್ದೆಗೆ ಅನ್ವಯವಾಗುವ ವೇತನ ಶ್ರೇಣಿಯಲ್ಲಿ ಪಡೆಯುತ್ತಿರುವ ವೇತನ ಎಂದು ತಿಳಿಸಿದ್ದಾರೆ.ರಾಜ್ಯ ಸರ್ಕಾರದ ನಿವೃತ್ತಿ ವೇತನದಾ ರರು,ಕುಟುಂಬ ನಿವೃತ್ತಿ ವೇತನದಾರರಿಗೆ ಮತ್ತು ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನವನ್ನು ಪಡೆಯು ತ್ತಿರುವಂತ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು, ಕುಟುಂಬ ನಿವೃತ್ತಿ ವೇತನದಾ ರರಿಗೂ ದಿನಾಂಕ 01-04-2023ರಿಂದ ಜಾರಿಗೆ ಬರುವಂತೆ ಮೂಲ ನಿವೃತ್ತಿ ವೇತನ, ಕುಟುಂಬ ನಿವೃತ್ತಿ ವೇತನ ಶೇ.17ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ಸಹ ಸರ್ಕಾರವು ಹರ್ಷಿಸುತ್ತದೆ ಎಂದಿದ್ದಾರೆ.
ಇದಲ್ಲದೇ ಸರ್ಕಾರದ ಸ್ಥಳೀಯ ಸಂಸ್ಥೆಗಳ ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯನು ದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಕಾಲಿಕ ವೇತನ ಶ್ರೇಣಿಗ ಳಲ್ಲಿರುವ ಪೂರ್ಣಾವಧಿ ನೌಕರರುಗಳಿಗೆ ಈ ಆದೇಶವು ಅನ್ವಯಿಸುತ್ತದೆ ಎಂದಿದ್ದಾರೆ. ಯುಜಿಸಿ,ಎಐಸಿಇಟಿ, ಐಸಿಎಆರ್, ಎನ್ ಜೆಪಿಸಿ ವೇತನ ಶ್ರೇಣಿಗಳಲ್ಲಿ ಹಾಲಿ ವೇತನ ಪಡೆಯುತ್ತಿ ರುವ ನೌಕರರಿಗೆ,ಪಿಂಚಣಿದಾರರಿಗೆ ಈ ಆದೇ ಶವು ಅನ್ವಯಿಸುವುದಿಲ್ಲ ಎಂದು ತಿಳಿಸಿದ್ದಾ ರೆ.ಶೇ.17ರಷ್ಟು ಮೂಲ ವೇತನ ಹೆಚ್ಚಳವಾದರೇ ನಿಮ್ಮ ವೇತನ ಈ ಕೆಳಗಿನಂತೆ ಹೆಚ್ಚಾಗಲಿದೆ
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..