ಧಾರವಾಡದ ಸಿದ್ದೇಶ್ವರ ನಗರ ಕಂಪ್ಲೀಟ್ ಸೀಲ್ ಡೌನ್ ಹೇಗೆ ಮಾಡಿದ್ದಾರೆ ಗೊತ್ತಾ…..

Suddi Sante Desk

ಧಾರವಾಡ –

ಧಾರವಾಡ ನಗರದ ಲಕಮನಹಳ್ಳಿ ಗ್ರಾಮ ವ್ಯಾಪ್ತಿ ಯ ಕಲಘಟಗಿ ರಸ್ತೆಯಲ್ಲಿರುವ ಸೋಮೇಶ್ವರ ದೇವಸ್ಥಾನದ ಹಿಂಭಾಗದಲ್ಲಿರುವ ಸಿದ್ದೇಶ್ವರನಗ ರದಲ್ಲಿ ಕಳೆದ‌ ಎರಡು ದಿನಗಳಲ್ಲಿ 80 ಕ್ಕೂ ಹೆಚ್ಚು ಕೋವಿಡ್ ಪಾಜಿಟಿವ್ ಪ್ರಕರಣಗಳು ವರದಿಯಾ ಗಿವೆ‌‌. ಕಾಲೋನಿಗೆ ಸಂಪರ್ಕ ಕಲ್ಪಿಸುವ ಎಲ್ಲ ರಸ್ತೆಗ ಳನ್ನು ಕಟ್ಟಿಗೆ ಬಳಸಿ ಬ್ಯಾರಿಕೇಡಿಂಗ್ ಮಾಡಲಾಗಿದೆ. ಇದರೊಂದಿಗೆ ಸಿದ್ದೇಶ್ವರ ಕಾಲೋನಿಯನ್ನು ಕಂಪ್ಲೀ ಟ್ ಸೀಲ್ ಡೌನ್ ಮಾಡಲಾಗಿದೆ.

ಕಾಲೋನಿಯ ಕೆಲವರು ಕೋವಿಡ್ ಪಾಜಿಟಿವ್ ಬಂದರೂ ಕೋವಿಡ್ (ಕೇರ್) ಕಾಳಜಿ ಕೇಂದ್ರಗಳಿಗೆ ಹೋಗಲು ನಿರಾಕರಿಸಿದ್ದರು.ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ತಹಶೀಲ್ದಾರ ಸಂತೋಷ ಬಿರಾದಾರ ಹಾಗೂ ಸಹಾಯಕ ಪೋಲಿಸ್ ಆಯುಕ್ತೆ ಅನುಷಾ.ಜಿ. ಅವರು ಕಾಲೋನಿ ಪ್ರಮುಖರಿಗೆ ಹಾಗೂ ಸೋಂಕಿತರ ಕುಟುಂಬದ ಸದಸ್ಯರಿಗೆ ಮಾಹಿತಿ ತಿಳುವಳಿಕೆ ನೀಡಿದರು

ಸೋಂಕಿತರು ಕೋವಿಡ್ ಕೇರ್ ಸೆಂಟರ್ ಗಳಿಗೆ ದಾಖಲಾಗುವಂತೆ ಜಾಗೃತಿ ಮೂಡಿಸಿದರು.
ಸಿದ್ದೇಶ್ವರ ಕಾಲೋನಿಯಲ್ಲಿ ಸುಮಾರು 130 ಮನೆಗಳಿದ್ದು, ಅಂದಾಜು 800 ಜನ ವಾಸಿಸುತ್ತಿ ದ್ದಾರೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.