ಬೆಂಗಳೂರು –
ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆ ಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಯನ್ನು ಘೋಷಣೆ ಮಾಡಲಾಗಿದೆ ಹೌದು ಈ ಜಿಲ್ಲೆಗಳಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆ ಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾ ಮಾನ ಇಲಾಖೆ ಮುನ್ಸೂಚನೆ ನೀಡಿದೆ ಹೀಗಾಗಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಅಂಗನವಾಡಿ,ಶಾಲೆ, ಪಿಯುಸಿ, ಪದವಿ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಭಾರೀ ಮಳೆಯಾ ಗುವ ಸಾಧ್ಯತೆ ಇದ್ದು, ದಕ್ಷಿಣ ಕನ್ನಡ ಜಿಲ್ಲೆಯಾ ದ್ಯಂತ ಅಂಗನವಾಡಿ, ಶಾಲೆ, ಪಿಯು ಪದವಿ ಕಾಲೇಜುಗಳಿಗೆ ಡಿಸಿ ಮುಲ್ಲೈ ಮುಗಿಲನ್ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.
ಇತ್ತ ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಇಂದು ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿ ಉಡುಪಿ ಜಿಲ್ಲಾಧಿಕಾರಿ ಕುರ್ಮಾ ರಾವ್ ಆದೇಶ ಹೊರಡಿಸಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..