ದಾವಣಗೆರೆ +
ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯಕಾರಿಣಿ ಸಭೆ ದಾವಣಗೆರೆ ಯಲ್ಲಿ ನಡೆಯಿತು ಒಪಿಎಸ್ ಮರುಜಾರಿಗೆ ಹೋರಾಟಕ್ಕೆ ನಿರ್ಧಾರ ವನ್ನು ತೆಗೆದುಕೊಳ್ಳಲಾಯಿತು ಹೌದು ಒಪಿಎಸ್ ಮರು ಜಾರಿಗಾಗಿ ಸರ್ಕಾರದ ಮೇಲೆ ಒತ್ತಡ ಹೇರಲು ವಿವಿಧ ಹಂತಗಳಲ್ಲಿ ಹೋರಾಟ ಸೇರಿದಂತೆ ಇನ್ನಿತರೆ ನಿರ್ಣಯಗಳಿಗೆ ಬೆಂಬಲ ಸೂಚಿಸಲು ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯಕಾರಿ ಸಮಿತಿ ಸಭೆ ನಿರ್ಧರಿಸಿತು.
ಸಂಘದ ರಾಜ್ಯ ಘಟಕದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ನೇತೃತ್ವದಲ್ಲಿ 2024-29ನೇ ಅವಧಿಯ ರಾಜ್ಯ ಕಾರ್ಯ ಕಾರಿಣಿಯ ಮೊದಲ ಸಭೆ ನಡೆಯಿತು.ನಗದು ರಹಿತ ಚಿಕಿತ್ಸೆ ಯೋಜನೆಯ ತ್ವರಿತ ಜಾರಿಗೆ ಒತ್ತಾಯಿಸುವುದು, 2026ಕ್ಕೆ ಕೇಂದ್ರ ಸರ್ಕಾರದ ಮಾದರಿ ವೇತನಕ್ಕಾಗಿ ಹೋರಾಟ ರೂಪಿಸುವುದು, ಪ್ರಾಥಮಿಕ ಶಾಲಾ ಶಿಕ್ಷಕರ ಸಿ ಆಯಂಡ್ ಆರ್ ನಿಯಮಕ್ಕೆ ತಿದ್ದುಪಡಿ ತರುವಂತೆ ಆಗ್ರಹಿಸಿ ನಡೆಸಲಾಗುವ ಹೋರಾಟವನ್ನು ಬೆಂಬಲಿಸು ವುದು, ವೈದ್ಯಕೀಯ ವೆಚ್ಚ ಮರುಪಾವತಿ ಬಿಲ್‌ಗಳಿಗೆ ಶೀಘ್ರವೇ ಹಣ ಬಿಡುಗಡೆ ಮಾಡಿಸಲು ಕ್ರಮ ವಹಿಸುವ ನಿರ್ಣಯಗಳನ್ನು ಕೈಗೊಳ್ಳಲಾಯಿತು.
ಹಬ್ಬದ ಮುಂಗಡ ಮೊತ್ತವನ್ನು ₹25,000 ದಿಂದ ₹50,000ಕ್ಕೆ ಹೆಚ್ಚಿಸಲು ಹಾಗೂ ನಿವೃತ್ತಿ ಸಮಯದ ಗಳಿಕೆ ರಜೆಗಳನ್ನು 300 ರಿಂದ 340ಕ್ಕೆ ಏರಿಸಲು ಕ್ರಮ ವಹಿಸುವುದು, ಕೇಂದ್ರ ಮತ್ತು ಜಿಲ್ಲಾ ಸಂಘಕ್ಕೆ ವಂತಿಗೆ ರೂಪದಲ್ಲಿ ಸಲ್ಲಿಸುವ ಹಣವನ್ನು ಕಡಿತಗೊಳಿಸಿ ತಾಲ್ಲೂಕು ಮಟ್ಟದಲ್ಲಿ ಉಳಿಸಿಕೊಳ್ಳುವ ಬಗ್ಗೆ ಚರ್ಚಿ ಸಲಾಯಿತು.
2024-25ನೇ ಸಾಲಿನ ಸರ್ಕಾರಿ ನೌಕರರ ಕ್ರೀಡಾ, ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ₹ 3 ಕೋಟಿ ಅನುದಾನ ನೀಡಲು ಒಪ್ಪಿದ್ದಾರೆ. ಶೀಘ್ರವೇ ತಾಲ್ಲೂಕು, ಜಿಲ್ಲೆ ಮತ್ತು ರಾಜ್ಯ ಮಟ್ಟದಲ್ಲಿ ಕಾರ್ಯಕ್ರಮ ಆಯೋಜಿಸಲು ಹಾಗೂ 2024-25ನೇ ಸಾಲಿಗೆ ಆಯ್ಕೆಯಾದ ರಾಜ್ಯದ ಎಲ್ಲಾ ನಿರ್ದೇಶಕರು, ಪದಾಧಿಕಾರಿಗಳಿಗೆ ಸಮ್ಮಿಲನ
ಸಮಾವೇಶ ನಡೆಸಲು ಸಭೆ ಅನುಮೋದನೆ ನೀಡಿತು.
ಸಭೆಯಲ್ಲಿ ಎಲ್ಲಾ ಜಿಲ್ಲೆಗಳ ಯೋಜನಾ ಶಾಖೆಗಳ ಅಧ್ಯಕ್ಷರು, ಖಜಾಂಚಿ, ರಾಜ್ಯ ಪರಿಷತ್ ಸದಸ್ಯರು, ಕಾರ್ಯದರ್ಶಿಗಳು ಸೇರಿ ಹಲವರು ಭಾಗವಹಿಸಿದ್ದರು.
ಸುದ್ದಿ ಸಂತೆ ನ್ಯೂಸ್ ದಾವಣಗೆರೆ…..