ಬೆಂಗಳೂರು –
ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ ಹೆಚ್ಚಳ ಮಾಡಿ CM ಹೇಳಿದ್ದೇನು ಗೊತ್ತಾ – ರಾಜ್ಯ ಸರ್ಕಾರಿ ನೌಕರರ ಬಗ್ಗೆ ಮೆಚ್ಚುಗೆಯ ಮಾತುಗ ಳನ್ನಾಡಿ ನಾಡದೊರೆ ಹೌದು
ರಾಜ್ಯದ ಸಮಸ್ತ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಕೊನೆಗೂ ಸಿಹಿ ಸುದ್ದಿಯನ್ನು ನೀಡಿದೆ ಹೌದು ಬಹು ದಿನಗಳಿಂದ ರಾಜ್ಯ ಸರ್ಕಾರಿ ನೌಕರರ ಬೇಡಿಕೆಯಾಗಿದ್ದ ತುಟ್ಟಿ ಭತ್ಯೆಯನ್ನು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶವನ್ನು ಮಾಡಿದೆ.ಇದರೊಂದಿಗೆ ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ ಹೆಚ್ಚಳ ಮಾಡಲಾಗಿದ್ದು
ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜನವರಿ 2024 ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದಶೇ.38.75 ರಿಂದ ಶೇ.42.5 ಕ್ಕೆ ಹೆಚ್ಚಿಸಿ ಆದೇಶಿಸಲಾಗಿದೆ.ಈ ಒಂದು ವಿಚಾರ ಕುರಿತಂತೆ ರಾಜ್ಯ ಸರ್ಕಾರವು ಅಧಿಕೃತವಾಗಿ ಆದೇಶವನ್ನು ಮಾಡಿದ್ದ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಕೂಡಾ ತಮ್ಮ X ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಅಲ್ಲದೇ ಸರ್ಕಾರ ಮತ್ತು ಜನರ ನಡುವಿನ ಕೊಂಡಿಯಂತೆ ಕೆಲಸ ಮಾಡುತ್ತಿರುವ ಸರ್ಕಾರದ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನ ದಲ್ಲಿ ನಮ್ಮ ಜೊತೆ ಕೆಲಸ ನಿರ್ವಹಿಸುತ್ತಿರುವ ಸರ್ಕಾರಿ ನೌಕರರ ಜೊತೆ ನಾವಿದ್ದೇವೆ.ಸರ್ಕಾರಿ ನೌಕರರ ಹಿತಕಾಯಲು ನಾವು ಸದಾ ಬದ್ಧರಿ ದ್ದೇವೆ ಎಂಬ ಮೆಚ್ಚುಗೆಯ ಮಾತುಗಳನ್ನಾ ಡಿದ್ದಾರೆ.
ಇದರೊಂದಿಗೆ ಲೋಕಸಭಾ ಚುನಾವಣೆಯ ಮುನ್ನವೇ ರಾಜ್ಯ ಸರ್ಕಾರ ರಾಜ್ಯದ ಸಮಸ್ತ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆಯನ್ನು ಹೆಚ್ಚಳ ಮಾಡಿ ಸಂತೋಷದ ಸುದ್ದಿಯನ್ನು ನೀಡಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..