ಬೆಂಗಳೂರು –
ರಾಜ್ಯ ಸರ್ಕಾರಿ ನೌಕರರ ವರ್ಗಾವಣೆಗೆ ಸಿಎಂ ಸಿದ್ಧರಾಮಯ್ಯ ಖಡಕ್ ನಿರ್ಧಾರ ಕೈಗೊಂಡಿ ದ್ದಾರೆ. ಹೌದು ನೌಕರರ ವರ್ಗಾವಣೆ ನಾನು ಬೇರೆ ಯಾವುದಕ್ಕೂ ಮಣೆ ಹಾಕೋದಿಲ್ಲ.ಆ ಮಾನ ದಂತ ಪೂರೈಸಿದ್ರೆ ಮಾತ್ರವೇ ವರ್ಗಾವಣೆ ಅನು ಮತಿಸೋದಾಗಿ ಎಚ್ಚರಿಸಿದ್ದಾರೆ.
ವಾಣಿಜ್ಯ ತೆರಿಗೆ ಇಲಾಖೆ ಮತ್ತು ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ವರ್ಗಾವಣೆ ವೇಳೆ ತೆರಿಗೆ ಸಂಗ್ರಹದಲ್ಲಿ ನಿಮ್ಮ ಕಾರ್ಯಕ್ಷಮ ತೆಯನ್ನು ಮಾನದಂಡವಾಗಿ ನಾನು ಪರಿಗಣಿ ಸುತ್ತೇನೆ.
ಬೇರೆ ಯಾವ ಪ್ರಭಾವಕ್ಕೂ ನಾನು ಮಣೆ ಹಾಕಲ್ಲ ಎನ್ನುತ್ತಾ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿ ಗಳಿಗೆ ಎಚ್ಚರಿಕೆ ನೀಡಿದರು.ಗುರಿ ಸಾಧಿಸದಿದ್ದರೆ ಶಿಸ್ತು ಕ್ರಮ ತೆಗೆದುಕೊಳ್ಳುವುದು ಅನಿವಾರ್ಯ ವಾಗುತ್ತದೆ.ವರ್ಗಾವಣೆ ವೇಳೆ ನಿಮ್ಮ ಕಾರ್ಯಕ್ಷ ಮತೆಯೇ ಮಾನದಂಡ.
ಬೇರೆ ಯಾವ ಪ್ರಭಾವಕ್ಕೂ ನಾನು ಮಣೆ ಹಾಕಲ್ಲ. ಅಂದಾಜು, ಜಾರಿ, ಮೇಲ್ಮನವಿ ತಂಡಗಳು ನಿರಂತರ ಸಹಕಾರದಿಂದ ಕೆಲಸ ಮಾಡಿ ಎಂದು ಸೂಚನೆ ನೀಡಿದರು.ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಆರ್ಥಿಕ ಇಲಾಖೆ ಕಾರ್ಯದರ್ಶಿ ಪಿ.ಸಿ.ಜಾಫರ್, ವಾಣಿಜ್ಯ ತೆರಿಗೆ ಇಲಾಖೆಯ ಆಯುಕ್ತೆ ಸಿ.ಶಿಖಾ ಉಪಸ್ಥಿತರಿದ್ದರು
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..