ಬೆಂಗಳೂರು –
ಸಾರ್ವಜನಿಕ ಶಿಕ್ಷಣ ಇಲಾಖೆಯು ಮಕ್ಕಳ ಪೋಷಕರಿಗೆ ಸಿಹಿ ಸುದ್ದಿ ಯೊಂದನ್ನು ನೀಡಿದೆ ಹೌದು ಅನುದಾನ ರಹಿತ ಖಾಸಗಿ ಶಾಲೆಗಳು ಪಠ್ಯಪುಸ್ತಕಕ್ಕೆ ಹೆಚ್ಚು ಹಣ ವಸೂಲಿ ಮಾಡಿದ್ರೆ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಎಚ್ಚರಿಕೆ ನೀಡಿದೆ.ಸಾರ್ವಜನಿಕ ಶಿಕ್ಷಣ ಇಲಾಖೆಯ ಕರ್ನಾಟಕ ಪಠ್ಯ ಪುಸ್ತಕ ಸಂಘದಿಂದ ಖರೀದಿಸಿದ ಪಠ್ಯಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ನೀಡುತ್ತಿ ರುವ ನೀಡುವಾಗ ನಿಗದಿ ದರಕ್ಕಿಂತ ಹೆಚ್ಚಿನ ಹಣ ವಸೂಲಿ ಮಾಡುತ್ತಿರುವ ಅನುದಾನ ರಹಿತ ಖಾಸಗಿ ಶಾಲೆಗಳ ವಿರುದ್ಧ ಕ್ರಮ ಜರುಗಿಸುವಂತೆ ಇಲಾಖೆಯ ಎಲ್ಲ ಜಿಲ್ಲಾ ಉಪನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚಿಸಿದ್ದಾರೆ
ಕೆಲ ಶಾಲೆಗಳು ಪಠ್ಯಪುಸ್ತಕಕ್ಕೆ ಹೆಚ್ಚಿನ ಹಣ ವಸೂಲಿ ಮಾಡುತ್ತಿರುವ ಬಗ್ಗೆ ಪೋಷಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಪ್ರತಿ ಪಠ್ಯಪುಸ್ತ ಕಕ್ಕೂ ದರ ನಿಗದಿಪಡಿಸಲಾಗಿದ್ದು ಇದೇ ದರ ಪಡೆದುಕೊಂಡು ವಿದ್ಯಾರ್ಥಿಗಳಿಗೆ ಪುಸ್ತಕ ನೀಡಬೇಕೆಂದು ಸಾರ್ವಜನಿಕ ಇಲಾಖೆ ಸ್ಪಷ್ಟ ಸೂಚನೆ ನೀಡಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..