ಬೆಂಗಳೂರು –
ಆಗಸ್ಟ್ 23 ರಿಂದ 9ರಿಂದ 12ನೇ ತರಗತಿಗಳು ಆರಂಭವಾಗಲಿದ್ದು ಇವುಗಳ ನಂತರದ ಪ್ರತಿಕ್ರಿ ಯೆಯನ್ನು ಆಧರಿಸಿ 1 ರಿಂದ 8 ನೇ ತರಗತಿಗಳನ್ನು ಸೆಪ್ಟಂಬರ್‌ನಿಂದ ಆರಂಭಿಸಲು ತೀರ್ಮಾನಿಸ ಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು 23 ರಿಂದ ಆರಂಭವಾಗುವ ಭೌತಿಕ ತರಗತಿಗಳಿಗೆ ಹಾಜರಾಗುವ ವಿದ್ಯಾರ್ಥಿಗಳ ಸುರಕ್ಷತೆಗಾಗಿ ವಿಸ್ತೃತ ಎಸ್‌ಒಪಿ (ಪ್ರಮಾಣಿತ ಕಾರ್ಯಚರಣೆ ವಿಧಾನ)ವನ್ನು ಬಿಡುಗಡೆ ಮಾಡಲಾ ಗಿದೆ ಎಂದರು

ಇನ್ನೂ 1 ರಿಂದ 8 ನೇ ತರಗತಿಗಳನ್ನು ಆರಂಭಿ ಸುವುದಕ್ಕೆ ಸಂಬಂಧಿಸಿದಂತೆ ಇದೇ 30 ರಂದು ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ತೀರ್ಮಾನವನ್ನು ತೆಗೆದುಕೊಳ್ಳಲಾಗುವುದು.ತರಗತಿ ಆರಂಭಿಸಬೇಕು ಎಂಬ ಒತ್ತಡ ಪೋಷಕರಿಂದ ಬರುತ್ತಿದೆ.ತರಗತಿಗಳನ್ನು ಆರಂಭಿಸಬೇಕು ಎಂಬ ಆಲೋಚನೆ ಇದೆ.ಕೋವಿಡ್‌ನಿಂದ ಮಕ್ಕಳಿಗೆ ಹೆಚ್ಚಿನ ತೊಂದರೆ ಆಗುವುದಿಲ್ಲ ಎಂದು ಕೋವಿಡ್ ತಾಂತ್ರಿಕ ಸಮಿತಿ ಮತ್ತು ಮಕ್ಕಳ ತಜ್ಞರು ಹೇಳಿದ್ದಾರೆ. 9 ರಿಂದ 12 ತರಗತಿಗಳ ಪ್ರತಿಕ್ರಿಯೆ ಗಮನಿಸಲಾಗು ವುದು ಎಂದರು.
