ಬೆಂಗಳೂರು –
ನಾಡಿನ ಶಿಕ್ಷಕರ ಪರವಾಗಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಧ್ವನಿ ಎತ್ತಿದ್ದಾರೆ. ಹೌದು ಕೋವಿಡ್ ಸುಳಿಯಲ್ಲಿ ಸಿಕ್ಕು ಪರದಾಡುತ್ತಿರುವ ಶಿಕ್ಷಕರ ಪರವಾ ಗಿ ಸರ್ಕಾರಕ್ಕೆ HDK ಧ್ವನಿ ಎತ್ತಿದ್ದಾರೆ.ಚುನಾವಣೆ ಕರ್ತವ್ಯದಲ್ಲಿ ದುಡಿದ ಮತ್ತು ವಿದ್ಯಾಗಮ ಯೋಜನೆ ಮೂಲಕ ಪಾಠ ಮಾಡಿದ ಕಲ್ಯಾಣ ಕರ್ನಾಟಕದ 145 ಶಿಕ್ಷಕರು ಕೋವಿಡ್ ಸೋಂಕಿನಿಂದ ಮೃತಪಟ್ಟಿ ದ್ದಾರೆ. ಉಳಿದ ಕಡೆ ಮೃತಪಟ್ಟವರ ಲೆಕ್ಕ ಸಿಗುತ್ತಿಲ್ಲ. ಮೃತಪಟ್ಟ ಎಲ್ಲ ಶಿಕ್ಷಕರನ್ನು ಕೋವಿಡ್ ವಾರಿಯ ರ್ಸ್ ಎಂದು ಪರಿಗಣಿಸಿ ಕನಿಷ್ಠ 50 ಲಕ್ಷ ರೂ ಪರಿಹಾ ರ ನೀಡಬೇಕೆಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಹೌದು ಈ ಬಗ್ಗೆ ಟ್ವೀಟ್ ಮಾಡಿರುವ ಅವರು 145 ಕ್ಕೂ ಹೆಚ್ಚು ಶಿಕ್ಷಕರು ಹೈದರಾಬಾದ್-ಕರ್ನಾಟಕದಲ್ಲಿ ಅಂದರೆ ಕಲ್ಯಾಣ ಕರ್ನಾಟಕದಲ್ಲಿ ಸಾವನ್ನಪ್ಪಿದ್ದಾರೆ. ಸರ್ಕಾರ ಕೊಟ್ಟ ಆದೇಶ ಪಾಲಿಸಿ ರಾಜ್ಯದಾದ್ಯಂತ ಇನ್ನೂ ಹಲವು ಶಿಕ್ಷಕರ ಪ್ರಾಣ ಹೋಗಿದೆ ಎಂದು ಆರೋಪಿಸಿದರು.

ಶಿಕ್ಷಕರನ್ನು ಕೋವಿಡ್ ವಾರಿಯರ್ಸ್ ಎಂದು ಪರಿಗ ಣಿಸಬೇಕು ಅವರನ್ನು ಚುನಾವಣೆ ಹಾಗೂ ಮತ್ಯಾ ವುದೋ ಕಾರಣಕ್ಕೆ ನಿಯೋಜಿಸಿದ ಸರ್ಕಾರವೇ ಈ ಸಾವುಗಳ ಸಂಪೂರ್ಣ ಹೊಣೆ ಹೊರಬೇಕು. ಇನ್ನೂ ಸಾವಿರಾರು ಶಿಕ್ಷಕರು ಕೊರೋನಾ ಸೋಂಕಿನಿಂದ ಬಳಲುತ್ತಿದ್ದಾರೆ. ಭವಿಷ್ಯ ಕಟ್ಟುವ ಶಿಕ್ಷಕರ ಬಗ್ಗೆ ಸರ್ಕಾರದ ಉಡಾಫೆ ಹಾಗೂ ದಿವ್ಯ ನಿರ್ಲಕ್ಷ್ಯ ಧೋರಣೆ ಬಗ್ಗೆ ನನ್ನ ಧಿಕ್ಕಾರವಿದೆ. ಸರ್ಕಾರ ಈ ಬಗ್ಗೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಕುಮಾರಸ್ವಾ ಮಿ ಒತ್ತಾಯಿಸಿದರು