ನವದೆಹಲಿ –
ಪ್ರಧಾನಿ ನರೇಂದ್ರ ಮೋದಿ ವಿರುದ್ದ ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ಯಾರು ಗೊತ್ತಾ – ಎರಡು ಬಾರಿ ಸೋತಿದ್ದ ಅಜರ್ ರಾಯ್ ಮತ್ತೊಮ್ಮೆ ಪ್ರಧಾನಿ ವಿರುದ್ದ ಅಖಾಡಕ್ಕೆ ಹೌದು
ದೇಶದಲ್ಲಿ ಲೋಕಸಭಾ ಚುನಾವಣೆಯ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ.ಈಗಾಗಲೇ ಬಹುತೇಕ ಎಲ್ಲಾ ಪಕ್ಷದವರು ತಮ್ಮ ತಮ್ಮ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು ಇನ್ನೂ ದೇಶದ ಪ್ರಧಾನಿ ನರೇಂದ್ರ ಮೋದಿ ವಾರಣಾಸಿ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದು ಈಗಾಗಲೇ ಮೊದಲ ಪಟ್ಟಿಯಲ್ಲಿ ಕೂಡಾ ಹೆಸರನ್ನು ಬಿಜೆಪಿ ಹೈಕಮಾಂಡ್ ಘೋಷಣೆ ಮಾಡಿದ್ದು ಪ್ರಧಾನಿ ಯವರ ಎದುರಾಳಿಯಾಗಿ
ಈ ಬಾರಿಯೂ ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ಯಾಗಿ ಅಜರ್ ರಾಯ್ ರನ್ನು ಕೈ ಪಡೆ ಘೋಷಣೆ ಮಾಡಿದೆ.ಹೌದು ಲೋಕಸಭೆ ಚುನಾವಣೆ 2024ಕ್ಕೆ ಅಭ್ಯರ್ಥಿಗಳ 4ನೇ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಉತ್ತರ ಪ್ರದೇಶದ ವಾರಣಾಸಿ ಕ್ಷೇತ್ರಕ್ಕೆ ಅಭ್ಯರ್ಥಿ ಯನ್ನು ಘೋಷಣೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಎದುರಾಳಿ ಯಾರು ಎಂಬುದು ಬಹಿರಂಗವಾಗಿದೆ.ಅಭ್ಯರ್ಥಿಗಳ 4ನೇ ಪಟ್ಟಿ ಯನ್ನು ಬಿಡುಗಡೆ ಮಾಡಿದೆ
ಕಾಂಗ್ರೆಸ್ ವಾರಣಾಸಿ ಕ್ಷೇತ್ರಕ್ಕೆ ಅಜಯ್ ರಾಯ್ ಅವರನ್ನು ಕಣಕ್ಕಿಳಿಸಿದೆ.ಬಿಜೆಪಿ ಮೊದಲ ಪಟ್ಟಿ ಯಲ್ಲಿಯೇ ಪ್ರಧಾನಿ ನರೇಂದ್ರ ಮೋದಿ ವಾರಣಾ ಸಿಯಿಂದ ಕಣಕ್ಕಿಳಿಯಲಿದ್ದಾರೆ ಎಂದು ಘೋಷಣೆ ಮಾಡಿತ್ತು. 54 ವರ್ಷದ ಅಜಯ್ ರಾಯ್ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಯಾಗಿದ್ದಾರೆ.ಈಗಾಗಲೇ 2014, 2019ರ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ವಿರುದ್ಧ ಕಣಕ್ಕಿಳಿದು ಸೋತಿದ್ದ ಅಜಯ್ ರಾಯ್ 2024ರ ಚುನಾವಣೆಯಲ್ಲಿ ಯೂ ಮೋದಿ ಎದುರಾಳಿಯಾಗಿದ್ದಾರೆ.
ಉತ್ತರ ಪ್ರದೇಶ ರಾಜ್ಯದ ಕಾಂಗ್ರೆಸ್ ಮುಖ್ಯಸ್ಥ ಅಜಯ್ ರಾಯ್ 5 ಬಾರಿ ಶಾಸಕರಾಗಿ ಆಯ್ಕೆ ಯಾಗಿದ್ದಾರೆ.ಬಿಜೆಪಿಯ ವಿದ್ಯಾರ್ಥಿ ಘಟಕದ ಮೂಲಕ ರಾಜಕೀಯ ಜೀವನ ಪ್ರಾರಂಭಿಸಿದ ಅವರು ಸಮಾಜವಾದಿ ಪಕ್ಷವನ್ನು ಸಹ ಸೇರಿದ್ದರು 1996 ರಿಂದ 2007ರ ನಡುವೆ ಮೂರು ಬಾರಿ ಬಿಜೆಪಿಯಿಂದ ಕೋಲಸ್ಲಾ ಕ್ಷೇತ್ರದಿಂದ ಶಾಸಕ ರಾಗಿ ಆಯ್ಕೆಯಾದರು ಅಜಯ್ ರಾಯ್.
ಲೋಕಸಭೆ ಟಿಕೆಟ್ ಬಿಜೆಪಿ ನೀಡದ ಕಾರಣ 2009ರಲ್ಲಿ ಸಮಾಜವಾದಿ ಪಕ್ಷ ಸೇರಿದರು ಚುನಾವಣೆಯಲ್ಲಿ ಸೋತರು.ಕೋಲಸ್ಲಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಯಾಗಿ ಕಣಕ್ಕಿಳಿದು ಗೆದ್ದರು. 2012ರಲ್ಲಿ ಕಾಂಗ್ರೆಸ್ ಸೇರಿದ ಅಜಯ್ ರಾಯ್ ಪಿಂಡ್ರಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಮತ್ತೆ ಶಾಸಕರಾಗಿ ಆಯ್ಕೆಯಾದರು.
ಆದರೆ 2017ರ ವಿಧಾನಸಭೆ ಚುನಾವಣೆಯಲ್ಲಿ ಸೋತರು.2014ರ ಲೋಕಸಭೆ ಚುನಾವಣೆ ಯಲ್ಲಿ ಪ್ರಧಾನಿ ನರೇಂದ್ರ ಮೋದಿ ಎದುರಾಳಿ ಯಾಗಿ ವಾರಣಾಸಿಯಲ್ಲಿ ಅಜಯ್ ರಾಯ್ ಕಣಕ್ಕಿಳಿದರು.ನರೇಂದ್ರ ಮೋದಿ 581,022 ಮತಗಳನ್ನು ಪಡೆದು ಗೆದ್ದರು..ಅಜಯ್ ರಾಯ್ 2019ರ ಚುನಾವಣೆಯಲ್ಲಿ ಮತ್ತೆ ಮೋದಿ ವಿರುದ್ಧ ಅಭ್ಯರ್ಥಿಯಾದರು.ನರೇಂದ್ರ ಮೋದಿ 674,664 ಮತಗಳನ್ನು ಪಡೆದು ಜಯಗಳಿಸಿ ದರು
ಸಮಾಜವಾದಿ ಪಕ್ಷದ ಶಾಲಿನಿ ಯಾದವ್ 195,159 ಮತಗಳನ್ನು ಪಡೆದು 2ನೇ ಸ್ಥಾನಗ ಳಿಸಿದರು. ಕಾಂಗ್ರೆಸ್‌ನ ಅಜಯ್ ರಾಯ್ 152,548 ಮತಗಳನ್ನು ಪಡೆದು 3ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರು.ವಾರಣಾಸಿಯಲ್ಲಿ ಎರಡು ಲೋಕಸಭೆ ಚುನಾವಣೆಯಲ್ಲಿಯೂ 3ನೇ ಸ್ಥಾನ ಪಡೆದಿರುವ ಅಜಯ್ ರಾಯ್ ಈ ಬಾರಿಯ ಚುನಾವಣೆಯಲ್ಲಿ ಮತ್ತೆ ನರೇಂದ್ರ ಮೋದಿ ಎದುರಾಳಿಯಾಗಿದ್ದು
ಮತ್ತೊಮ್ಮೆ ಈ ಬಾರಿಯೂ ದೇಶದ ಗಮನವನ್ನು ಸೆಳೆದಿರುವ ಈ ಒಂದು ವಾರಣಾಸಿ ಕ್ಷೇತ್ರದಲ್ಲಿ ಗೆಲುವು ಯಾರಿಗೆ ಎಂಬೊದನ್ನು ಕಾದು ನೋಡಬೇಕಿದೆ
ಸುದ್ದಿ ಸಂತೆ ನ್ಯೂಸ್ ನವದೆಹಲಿ…..