This is the title of the web page
This is the title of the web page

Live Stream

December 2022
T F S S M T W
1234567
891011121314
15161718192021
22232425262728
293031  

| Latest Version 8.0.1 |

State News

ಕನ್ನಡ ಲೋಕದ ಹಿರಿಯ ಸಾಹಿತಿ ಡಾ ಚಂದ್ರಶೇಖರ ಪಾಟೀಲ್ ನಿಧನ – ಕಳಚಿತು ಕನ್ನಡ ಸಾರಸತ್ವ ಲೋಕದ ಮತ್ತೊಂದು ಮಹಾನ್ ಕೊಂಡಿ…..

Join The Telegram Join The WhatsApp

 


ಬೆಂಗಳೂರು –

ಕನ್ನಡದ ಹಿರಿಯ ಸಾಹಿತಿ ಚಂದ್ರಶೇಖರ್ ಪಾಟೀಲ್ (83)ನಿಧನರಾಗಿದ್ದಾರೆ.ಕಳೆದ ಹಲವು ದಿನಗಳಿಂದ ವಯೋ ಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರನ್ನು ಬೆಂಗಳೂ ರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಚಿಕಿತ್ಸೆ ಫಲಕಾರಿ ಯಾಗದೇ ಇಂದು ಬೆಳಗ್ಗೆ 6.30 ರ ಸುಮಾರಿಗೆ ನಿಧನರಾ ಗಿದ್ದಾರೆ.ಕವಿ,ನಾಟಕಕಾರ,ಸಂಘಟನಕಾರ,ಪತ್ರಿಕಾ ಸಂಪಾದಕ,ಆಡಳಿತಗಾರ, ಕನ್ನಡ ಹೋರಾಟಗಾರ ಹೀಗೆ ವಿಭಿನ್ನ ನೆಲೆಗಳ ಚಂದ್ರಶೇಖರ ಪಾಟೀಲರು ಹುಟ್ಟಿದ್ದು ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಹತ್ತೀಮತ್ತೂ ರಿನಲ್ಲಿ 1939ರ ಜೂನ್‌ 18 ರಂದು.ತಂದೆ ಬಸವರಾಜ ಹಿರೇಗೌಡರು, ತಾಯಿ ಮುರಿಗೆವ್ವ.ಚಂದ್ರಶೇಖರ ಪಾಟೀ ಲರು ಸಾಹಿತ್ಯ ಲೋಕದಲ್ಲಿ ಚಂಪಾ ಎಂಬ ಹೆಸರಿನಿಂದ ಪ್ರಖ್ಯಾತರು.

ಪಾಟೀಲರ ಪ್ರಾರಂಭಿಕ ಶಿಕ್ಷಣ ಹಾವೇರಿಯಲ್ಲಿ ಮತ್ತು ಪ್ರೌಢಶಿಕ್ಷಣ ಧಾರವಾಡದಲ್ಲಿ ನೆರವೇರಿತು.ಅವರ ತಂದೆ ಯವರಿಗೆ ಇಂಗ್ಲಿಷ್‌ ಬಗ್ಗೆ ಅಭಿಮಾನವಿದ್ದುದರಿಂದ ಅದ ರಿಂದ ಪ್ರೇರಿತರಾಗಿ ಇಂಗ್ಲಿಷ್ ಎಂ.ಎ. ಪದವಿ ಗಳಿಸಿದರು. ಇದಲ್ಲದೆ ಬ್ರಿಟಿಷ್‌ ಕೌನ್ಸಿಲ್‌ ವಿದ್ಯಾರ್ಥಿವೇತನ ಪಡೆದು ಇಂಗ್ಲೆಂಡಿನ ಲೀಡ್ಸ್‌ ವಿಶ್ವವಿದ್ಯಾಲಯದಿಂದ ಭಾಷಾಶಾಸ್ತ್ರ ದಲ್ಲಿನ ಸ್ನಾತಕೋತ್ತರ ಪದವಿ ಮತ್ತು ಹೈದರಾಬಾದಿನ ಕೇಂದ್ರೀಯ ಇಂಗ್ಲಿಷ್‌ ಸಂಸ್ಥೆಯಿಂದ ಇಂಗ್ಲಿಷ್‌ ಅಧ್ಯಯ ನದ ಡಿಪ್ಲೊಮಾ ಪಡೆದರು.ಶಿಕ್ಷಣದ ಪ್ರತಿ ಹಂತದಲ್ಲಿಯೂ ಆಗ್ರ ಶ್ರೇಯಾಂಕ ಗಳಿಸಿದ ಕೀರ್ತಿ ಅವರದ್ದಾಗಿತ್ತು. ಕಾವ್ಯ ಕೃಷಿಯಲ್ಲೇ ತೊಡಗಿಸಿಕೊಂಡಿದ್ದ ಚಂಪಾರವರು ಹಲ ವಾರು ಸಮಸ್ಯೆಗಳ ಮಿಡಿತಕ್ಕೆ ಒಳಗಾಗಿ ಕಾವ್ಯ ಮಾಧ್ಯಮ ದಿಂದ ನಾಟಕಮಾಧ್ಯಮವನ್ನೂ ಆಯ್ದುಕೊಂಡು ಹಲ ವಾರು ನಾಟಕಗಳನ್ನೂ ರಚಿಸಿದ್ದರು.

ಅವುಗಳಲ್ಲಿ ಕೊಡೆಗಳು,ಅಪ್ಪ,ಕುಂಟ ಕುಂಟ ಕುರುವತ್ತಿ, ಗುರ್ತಿನವರು,ಟಿಂಗರ ಬುಡ್ಡಣ್ಣ, ಕತ್ತಲರಾತ್ರಿ,ಗೋಕರ್ಣದ ಗೌಡಸಾನಿ,ಜಗದಂಬೆಯ ಬೀದಿನಾಟಕ, ಬುರಡಿ ಬಾಬನ ವಸ್ತ್ರಾಪಹರಣ ಪವಾಡ, ನಳ ಕವಿಯ ಮಸ್ತಕಾಭಿಷೇಕ, ವಂದಿಮಾಗಧ ಮುಂತಾದವುಗಳು ಪ್ರಖ್ಯಾತವಾಗಿವೆ.ಕನ್ನಡ ನಾಡು-ನುಡಿ, ಸಂಸ್ಕೃತಿಯ ರಕ್ಷಣೆಗಾಗಿ ನಿರಂತರ ಹೋರಾಡುತ್ತಾ ಬಂದಿರುವ ಚಂಪಾರವರಿಗೆ ಬಂದಿರುವ ಪ್ರಶಸ್ತಿ ಗೌರವಗಳು ಹಲವಾರು.ಇವುಗಳಲ್ಲಿ ರಾಜ್ಯ ಸಾಹಿತ್ಯ ಅಕಾಡೆಮಿ ಬಹುಮಾನ (1960, 74, 76)ರಾಜ್ಯ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ, ದಿನಕರ ದೇಸಾಯಿ ಪ್ರತಿಷ್ಠಾನ ಪ್ರಶಸ್ತಿ, ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕೆ.ವಿ. ಶಂಕರಗೌಡ ರಂಗಭೂಮಿ ಪ್ರಶಸ್ತಿ, ಸಂದೇಶ್‌ ಮಾಧ್ಯಮ ಪ್ರಶಸ್ತಿ, ಕರು ನಾಡ ಭೂಷಣ ಪ್ರಶಸ್ತಿ, ಆಳ್ವಾಸ್‌ ನುಡಿಸಿರಿ ಪ್ರಶಸ್ತಿ ಮತ್ತು ಪಂಪ ಪ್ರಶಸ್ತಿ ಮುಂತಾದವುಗಳು ಪ್ರಮುಖವಾಗಿವೆ.2017 ರಲ್ಲಿ ಮೈಸೂರಿನಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು 2018 ಸಾಲಿನಲ್ಲಿ ಬಸ ವಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗಿದೆ


Join The Telegram Join The WhatsApp

Suddi Sante Desk

Leave a Reply