ಮೈಸೂರು –
ಮೈಸೂರು ದಸರಾ ಮುಗಿದ ಬೆನ್ನಲ್ಲೇ ಮೈಸೂರು ಜಿಲ್ಲಾಧಿಕಾರಿಯನ್ನು ವರ್ಗಾವಣೆ ಮಾಡಲಾಗಿದ್ದು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ ಕೆ ವಿ ರಾಜೇಂದ್ರ ಅಧಿಕಾರ ವಹಿಸಿಕೊಂಡರು. ಡಾ.ಬಗಾದಿ ಗೌತಮ್ ಅವರ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ರಾಜ್ಯ ಸರ್ಕಾರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಾಗಿದ್ದ ರಾಜೇಂದ್ರ ಅವರನ್ನು ವರ್ಗಾವಣೆ ಮಾಡಿತ್ತು ಚಾಮುಂ ಡಿಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು ನಂತರ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಇವರನ್ನು ನಿರ್ಗಮಿತ ಜಿಲ್ಲಾಧಿಕಾರಿ ಡಾ ಬಗಾದಿ ಗೌತಮ್ ಸ್ವಾಗತಿಸಿದರು.
ಬಳಿಕ ಹೂಗುಚ್ಛ ನೀಡಿ ಅಧಿಕಾರವನ್ನು ಹಸ್ತಾಂ ತರಿಸಿದರು ಸರ್ಕಾರದ ನಿಯಮಾನುಸಾರ ಕಡತ ಗಳಿಗೆ ಸಹಿಹಾಕುವ ಮೂಲಕ ವಿದ್ಯುಕ್ತವಾಗಿ ಅಧಿಕಾರ ವಹಿಸಿಕೊಂಡರು.ಅಧಿಕಾರ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಕೆ.ವಿ ರಾಜೇಂದ್ರ, ಸರ್ಕಾರ ನನ್ನ ಸಾಮರ್ಥ್ಯ ನೋಡಿ ಮೈಸೂರಿನ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಲು ಅವಕಾಶ ಮಾಡಿಕೊಟ್ಟಿದೆ ಜಿಲ್ಲಾಧಿಕಾರಿ ಕಚೇರಿ ಎಂದರೆ ಸಾರ್ವಜನಿಕರಿಗೆ ಸದಾ ತೆರೆದಿರಬೇಕು.ಅಂತಹ ಆಡಳಿತ ನೀಡಲು ಇಷ್ಟಪಡುತ್ತೇನೆ ಸರ್ಕಾರದ ಯೋಜನೆಗಳಿಗೆ ಸಾರ್ವಜನಿಕರು ಜಿಲ್ಲಾಧಿಕಾರಿ ಕಚೇರಿಗೆ ಅಲೆಯದೆ ತಾಲ್ಲೂಕು ಮಟ್ಟದಲ್ಲೇ ಸಮಸ್ಯೆ ಬಗೆಹರಿಸುವಂತೆ ಕ್ರಮ ಕೈಗೊಳ್ಳುತ್ತೇನೆ ಎಂದರು.
ಮೈಸೂರಿನ ಬಗ್ಗೆ ಮೊದಲಿನಿಂದಲೂ ತಿಳಿದಿದ್ದೇನೆ ಕೇಳಿದ್ದೇನೆ ಹಲವಾರು ಹಿರಿಯ ಅಧಿಕಾರಿಗಳು ಮೈಸೂರಿನಲ್ಲಿ ಕಾರ್ಯ ನಿರ್ವಹಿಸಿ ತಮ್ಮದೇ ಆದ ರೀತಿಯಲ್ಲಿ ಸೇವೆ ಸಲ್ಲಿಸಿರುವ ಕಾರಣ ತಮ್ಮ ಅವಧಿಯಲ್ಲೂ ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವೆ ಎಂದರು ಇನ್ನೂ ನಗರಪಾಲಿಕೆ ಆಯುಕ್ತ ಜಿ. ಲಕ್ಷ್ಮೀಕಾಂತ ರೆಡ್ಡಿ, ಅಪರ ಜಿಲ್ಲಾಧಿ ಕಾರಿ ಡಾ.ಬಿ.ಎಸ್. ಮಂಜುನಾಥಸ್ವಾಮಿ,ಮುಡಾ ಆಯುಕ್ತ ಜಿ.ಟಿ. ದಿನೇಶ್‌ಕುಮಾರ್ ಸೇರಿದಂತೆ ಹಲವರು ಈ ಒಂದು ಸಮಯದಲ್ಲಿ ಹಾಜರಿ ದ್ದರು.