ಸರ್ಕಾರಿ ಆಸ್ಪತ್ರೆಯ ವೈಧ್ಯೆ ಡಾ ಸಿಂಧುಜಾ ಸಾವು – ಸಾವಿನ ಹಿಂದೆ ಹುಟ್ಟಿಕೊಂಡಿವೆ ಹಲವು ಅನುಮಾನಗಳು…..

Suddi Sante Desk
ಸರ್ಕಾರಿ ಆಸ್ಪತ್ರೆಯ ವೈಧ್ಯೆ ಡಾ ಸಿಂಧುಜಾ ಸಾವು – ಸಾವಿನ ಹಿಂದೆ ಹುಟ್ಟಿಕೊಂಡಿವೆ ಹಲವು ಅನುಮಾನಗಳು…..

ಚಾಮರಾಜನಗರ

ಸರ್ಕಾರಿ ಆಸ್ಪತ್ರೆಯ ವೈಧ್ಯೆ ಡಾ ಸಿಂಧುಜಾ ಸಾವು ಸಾವಿನ ಹಿಂದೆ ಹುಟ್ಟಿಕೊಂಡಿವೆ ಹಲವು ಅನು ಮಾನಗಳು.ಹೌದು ಸರ್ಕಾರಿ ಆಸ್ಪತ್ರೆಯ ವೈದ್ಯೆ ಯೊಬ್ಬರು ಸಾವನ್ನಪ್ಪಿದ ಘಟನೆ ಚಾಮರಾಜ ನಗರ ದಲ್ಲಿ ನಡೆದಿದೆ.ಹೌದು ಜಿಲ್ಲೆಯ ಕೊಳ್ಳೇ ಗಾಲ ನಗರದ ಸರಕಾರಿ ಉಪ ವಿಭಾಗ ಆಸ್ಪತ್ರೆ ಯ ವೈದ್ಯೆ ಡಾ. ಸಿಂಧುಜಾ (28) ಅನುಮಾನಾ ಸ್ಪದವಾಗಿ ಮೃತಪಟ್ಟವರಾಗಿದ್ದಾರೆ.

ತಮಿಳುನಾಡಿನ ಚೆನ್ನೈನವರಾದ ಸಿಂಧುಜಾ ಅವರ ಊರಿನಲ್ಲಿ ಎಂಬಿಬಿಎಸ್ ಕೋರ್ಸ್ ಮಾಡಿದ್ದರು.ಆ ಬಳಿಕ ಸ್ನಾತಕೋತ್ತರ ಪದವಿಗೆ ಸೇರಿದ್ದರು.ಸ್ನಾತಕೋತ್ತರ ಪದವಿ ಶಿಕ್ಷಣದ ಭಾಗ ವಾಗಿ ಅವರು ನಗರದ ಆಸ್ಪತ್ರೆಯಲ್ಲಿ ಅರಿವಳಿಕೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು.

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಶ್ರೀ ಮಹದೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಮೀಪವಿರುವ ಬಾಡಿಗೆ ಮನೆಯಲ್ಲಿ ವರ್ಷ ದಿಂದ ವಾಸವಿದ್ದರು.ಸಿಂಧುಜಾ ಆಸ್ಪತ್ರೆಯಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಹೋಗಿದ್ದರು ಬೆಳಗ್ಗೆ ಆಸ್ಪತ್ರೆಗೆ ಬಾರದ ಕಾರಣ ವೈದ್ಯೆ ಲೋಕೇಶ್ವರಿ, ಅವರು ಮೊಬೈಲ್ ಗೆ ಕರೆ ಮಾಡಿ ದ್ದಾರೆ.

ಸಿಂಧೂಜಾ ಕರೆ ಸ್ವೀಕರಿಸಿರಲಿಲ್ಲ.ಅನುಮಾನ ಗೊಂಡು ವೈದ್ಯರು ಹಾಗೂ ಸಿಬ್ಬಂದಿ ಮನೆಗೆ ಹೋಗಿದ್ದಾರೆ. ಕೂಗಿದರೂ ಬಾಗಿಲು ತೆರೆಯಲಿಲ್ಲ. ನಂತರ ಸಿಬ್ಬಂದಿ ಮನೆಯ ಕಿಟಕಿ ಗಾಜನ್ನು ಒಡೆದು ನೋಡಿದಾಗ ಡಾ.ಸಿಂಧುಜಾ ನೆಲದ ಮೇಲೆ ಬಿದ್ದಿದ್ದರು.ಪಕ್ಕದಲ್ಲಿ ಸಿರಿಂಜ್, ಔಷಧಿ, ಚಾಕು ಇನ್ನಿತರ ವಸ್ತುಗಳು ಇದ್ದವು.

2024ರ ಜನವರಿ 2ರಂದು ಮದುವೆ ನಿಶ್ಚಯ ವಾಗಿತ್ತು ಇನ್ನೂ ವಿಷಯ ತಿಳಿದ ಡಿವೈಎಸ್ಪಿ ಸೋಮೇಗೌಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಚಾಮರಾಜನಗರ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.