ಹುಬ್ಬಳ್ಳಿ –
ಹೆಂಡತಿಗೆ ಕೊಡಲಿಯಿಂದ ಹಲ್ಲೆ ಮಾಡಿದ ಘಟನೆ ಹುಬ್ಬಳ್ಳಿ ತಾಲ್ಲೂಕಿನ ಸುಳ್ಳ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಈರಪ್ಪ ಮಾದರ ಎಂಬುವರೇ ತನ್ನ ಪತ್ನಿ ಪವಿತ್ರ ಅವರಿಗೆ ಕೊಡಲಿಯಿಂದ ಹಲ್ಲೆ ಮಾಡಿದ್ದಾರೆ.
ಕುಡಿದ ಅಮಲಿನಲ್ಲಿ ಹೆಂಡತಿಗೆ ಕೊಡಲಿಯಿಂದ ಹೊಡೆದಿದ್ದು ಮುಖ ಮತ್ತು ಕುತ್ತಿಗೆ ಭಾಗದಲ್ಲಿ ಮತ್ತು ತಲೆಗೆ ತೀವ್ರವಾಗಿ ಗಾಯಗಳಾಗಿದ್ದು ಹೊಡೆದ ಈರಪ್ಪ ನಂತರ ತನ್ನ ಹೆಂಡತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾನೆ.ನಂತರ ವಿಷಯ ತಿಳಿದ ಹುಬ್ಬಳ್ಳಿಯ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.ಸಧ್ಯ ಆರೋಪಿ ಸ್ಥಾನದಲ್ಲಿರುವ ಈರಪ್ಪ ನನ್ನು ವಶಕ್ಕೆ ತೆಗೆದು ಕೊಂಡು ವಿಚಾರಣೆ ಮಾಡತಾ ಇದ್ದಾರೆ. ಇನ್ನೂ ಇತ್ತ ಆಸ್ಪತ್ರೆಯಲ್ಲಿ ಮಹಿಳೆಗೆ ಚಿಕಿತ್ಸೆ ನೀಡಲಾಗುತ್ತಿದೆ