ನವದೆಹಲಿ –
ಕೇಂದ್ರ ಸರಕಾರಗಳ ಇಚ್ಛಾ ಶಕ್ತಿಯಿಂದಾಗಿ ಬಹು ದಿನಗಳ ಕನಸಾಗಿದ್ದ ಕಳಸಾ-ಬಂಡೂರಿ ಯೋಜನೆ ಅನುಷ್ಠಾನಕ್ಕೆ ಒಪ್ಪಿಗೆ ಸಂತೋಷದ ವಿಚಾರ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.ಕಳಸಾ ಬಂಡೂರಿ ಯೋಜನೆಗೆಕೇಂದ್ರ ಜಲಶಕ್ತಿ ಆಯೋಗದಿಂದ ಅನುಮೋದನೆ ಸಿಕ್ಕಿದೆ ಎಂದು ಕೇಂದ್ರ ಸಚಿವ ಸಚಿವರು ಹೇಳಿದರು.
ಉತ್ತರ ಕರ್ನಾಟಕ ಜನತೆಯ ಬಹುದಿನಗಳ ಬೇಡಿಕೆಯಾಗಿದ್ದ ನೆನೆಗುದಿಗೆ ಬಿದ್ದಿದ್ದ ಕಳಸಾ ಬಂಡೂರಿ ನಾಲಾ ಯೋಜನೆಗೆ ಭಾರತ ಸರಕಾರ ದಿಂದ ಅನುಮೋದನೆ ದೊರಕಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಹೇಳಿದ್ದಾರೆ.
ಉತ್ತರ ಕರ್ನಾಟಕ ಭಾಗದ ಬೆಳಗಾವಿ, ಧಾರವಾಡ ಜಿಲ್ಲಾ, ಗದಗ ಮತ್ತು ಬಾಗಲಕೋಟೆ ಜಿಲ್ಲೆಗಳಿಗೆ ನೀರೊದಗಿಸುವ ಮಹತ್ವಾಕಾಂಕ್ಷಿ ಯೋಜನೆ ಇದಾಗಿದ್ದು, ಯೋಜನೆ ಜಾರಿಯ ಸಂಬಂಧ ಪರಿಷ್ಕೃತ ಡಿಪಿಆರ್‌ಗೆ ಅರಣ್ಯ ಇಲಾಖೆ ಯಿಂದ ಈಗಾಗಲೇ ಗ್ರೀನ್ ಸಿಗ್ನಲ್ ದೊರಕಿದ್ದು ಕೇಂದ್ರ ಜಲಮಂಡಳಿ ಸಿಡಬ್ಲೂಸಿ ಇದೀಗ ಅನುಮೋದನೆ ನೀಡಿದೆ ಎಂದರು
ಮಹದಾಯಿ ನದಿ ತಿರುವು ಯೋಜನೆಯ ಮಹತ್ವಾಕಾಂಕ್ಷಿ ಕಳಸಾ-ಬಂಡೂರಿ ನಾಲಾ ಕುಡಿಯುವ ನೀರಿನ ಯೋಜನೆ ಜಾರಿಗೆ ನೆರೆಯ ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳು ತಕ ರಾರು ಎತ್ತಿದ್ದು ಪ್ರಕರಣ ನ್ಯಾಯಾಲಯದಲ್ಲಿದ್ದು ಇದೀಗ ಕೇಂದ್ರ ಸರಕಾರ ಕರ್ನಾಟಕ ಸರಕಾರದ ಮನವಿಗೆ ತೀವ್ರ ರೀತಿಯಲ್ಲಿ ಸ್ಪಂದನೆ ಮಾಡಿದ ಪರಿಣಾಮ ಕಳಸಾ ಬಂಡೂರಿ ಯೋಜನೆ ತ್ವರಿತ ಗತಿಯಲ್ಲಿ ಜಾರಿಯಾಗಲು ಸಿದ್ಧತೆ ಪೂರ್ಣ ಗೊಂಡಾತಾಗಿದೆ ಎಂದರು.
ಈ ಹಿಂದೆ 2017 ರಲ್ಲಿ ಗೋವಾ ವಿಧಾನಸಭೆ ಚುನಾವಣೆವೇಳೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ ಅವರು ಚುನಾವಣಾ ಪ್ರಚಾರ ಭಾಷಣ ಮಾಡುತ್ತಾ ಯಾವುದೇ ಕಾರಣಕ್ಕೂ ಯೋಜನೆ ಜಾರಿಗೊಳಿಸಲು ಬಿಡು ವುದಿಲ್ಲ ಎಂದು ಯೋಜನೆಗೆ ವಿರೋಧಿಸಿದ್ದರು. ಯೋಜನೆಗೆ ಒತ್ತಾಯಿಸಿ ಉತ್ತರ ಕರ್ನಾಟಕದಲ್ಲಿ ನೂರಾರು ದಿನಗಳ ಕಾಲ ನಿರಂತರವಾಗಿ ಹೋರಾಟ ನಡೆಸಲಾಗಿತ್ತು.
ಆದರೆ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯನ ವರ ಸರ್ಕಾರ ಹೋರಾಟಗಾರರನ್ನು ಹತ್ತಿಕ್ಕುವ ಸಲುವಾಗಿ ಮಹಿಳೆಯರು, ಮುದುಕರೆನ್ನದೆ ಮನ ಬಂದAತೆ ಥಳಿಸಿದ್ದನ್ನು ಸ್ಮರಿಸಬಹುದಾಗಿದೆ. ಆದರೆ ಇಂದು ಬದಲಾದ ಸನ್ನಿವೇಶದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸರಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರಗಳ ಇಚ್ಛಾ ಶಕ್ತಿಯಿಂ ದಾಗಿ ಬಹು ದಿನಗಳ ಕನಸಾಗಿದ್ದ ಕಳಸಾ ಬಂಡೂರಿ ಯೋಜನೆ ಅನುಷ್ಠಾನಕ್ಕೆ ಒಪ್ಪಿಗೆ ನೀಡಿರುವುದು ಸಂತೋಷಕರ ವಿಷಯ ಎಂದೂ ಸಚಿವ ಜೋಶಿಯವರು ಈ ಸಮಯದಲ್ಲಿ ಹೇಳಿದರು.
ಈ ಯೋಜನೆ ಅನುಮೋದನೆಗಾಗಿ ಸಚಿವ ಪ್ರಲ್ಹಾದ ಜೋಶಿಯವರು ಕೇಂದ್ರ ಜಲಸಂಪ ನ್ಮೂಲ ಸಚಿವ ಗಜೇಂದ್ರ ಸಿಂಗ ಶೇಖಾವತ್ ಅವರಿಗೂ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೂ ಸಾಕಷ್ಟು ಬಾರಿ ಕಳಸಾ ಬಂಡೂರಿ ಯೋಜನೆಯ ಸಾಧಕ-ಬಾಧಕಗಳನ್ನು ಸವಿಸ್ತಾರ ವಾಗಿ ಚರ್ಚಿಸಿದ್ದರು.
ಈ ಯೋಜನೆ ಅನುಷ್ಠಾನಕ್ಕೆ ಸಮಗ್ರ ಯೋಜನಾ ವರದಿಯನ್ನು ಸಿದ್ಧಪಡಿಸಿ ಕಾಲಕಾಲಕ್ಕೆ ರಾಜ್ಯ ಸರಕಾರದಿಂದ ಬೇಕಾದ ಸಲಹೆ ಸೂಚನೆಗಳನ್ನು ನೀಡಿ ಕಳಸಾ ಬಂಡೂರಿ ಯೋಜನೆಯ ಅನು ಮೋದನೆಗಾಗಿ ರಚನಾತ್ಮಕ ಯೋಜನಾ ವರದಿ ಯನ್ನು ನಿರೋಪಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರಕ್ಕೆ, ಮಾಜಿ ಮುಖ್ಯ ಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರಿಗೂ ಹಾಗೂ ಈ ಯೋಜನೆಯ ಡಿ.ಪಿ.ಆರ್. ಸರಿಪಡಿಸಲು ವಿಶೇಷ ಆಸಕ್ತಿ ವಹಿಸಿ ಕೆಲಸ ನಿರ್ವಹಿಸಿದ ಜಲಸಂಪ ನ್ಮೂಲ ಸಚಿವ ಗೋವಿಂದ ಕಾರಜೋಳ ಅವರಿಗೂ ನನ್ನ ಹೃದಯಪೂರ್ವಕ ಅಭಿನಂದ ನೆಗಳು ಎಂದೂ ಜೋಶಿಯವರು ಹೇಳಿದ್ದಾರೆ.
ಸಾಕಷ್ಟು ಭಾರಿ ನವದೆಹಲಿಯಲ್ಲಿ ನನ್ನೊಂದಿಗೆ ಕರ್ನಾಟಕ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಕಾವತ್ ಅವರನ್ನು ಭೇಟಿ ಮಾಡಿ ಕಳಸಾ-ಬಂಡೂರಿ ಯೋಜನೆ ಕಾರ್ಯವನ್ನು ಆದಷ್ಟು ಬೇಗ ಆರಂಭಿಸುವಂತೆ ಮನವಿ ಸಲ್ಲಿಸಿದ್ದೆವು.
ಈ ನಮ್ಮ ಮನವಿಗೆ ಸ್ಪಂದಿಸಿ ಕಳಸ ಬಂಡೂರಿ ಯೋಜನೆಗೆ ಅನುಮೋದನೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಹಾಗೂ ಕೇಂದ್ರ ಜಲ ಸಂಪನ್ಮೂಲ ಸಚಿವ ನರೇಂದ್ರ ಸಿಂಗ್ ಶಖಾವತ್ ಅವರಿಗೂ ರಾಜ್ಯದ ಅದರಲ್ಲೂ ವಿಶೇಷವಾಗಿ ಉತ್ತರ ಕರ್ನಾಟಕ ಭಾಗದ ಜನತೆಯ ಪರವಾಗಿ ಹೃದಯಪೂರ್ವಕ ಧನ್ಯವಾದಗಳನ್ನು ಹೇಳಿದ್ದಾರೆ.
ಮಹದಾಯಿ ಯೋಜನೆ ಅನುಷ್ಠಾನಕ್ಕಾಗಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಜಲಸಂಪ ನ್ಮೂಲ ಸಚಿವ ಗೋವಿಂದ ಕಾರಜೋಳ ಅವರುಗಳು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ ಶೇಖಾವತ್ ಅವರನ್ನು ನಿರಂತರ ಭೇಟಿ ಮಾಡಿ ಮನವಿ ಮಾಡಿದ್ದರು. ಕೊನೆಗೂ ಈ ಪ್ರಯತ್ನ ಯಶಸ್ವಿಯಾಗಿದೆ ಎಂದೂ ಈ ಭಾಗದ ಜನರು ಸಂತಸ ವ್ಯಕ್ತಪಡಿಸಿದ್ದಾರೆ.
ಚಕ್ರವರ್ತಿ ಸುದ್ದಿ ಸಂತೆ ನ್ಯೂಸ್ ನವದೆಹಲಿ…..