ಮಂಡ್ಯ –
ಮುಂದುವರೆದ ಮಳೆಯ ಹಿನ್ನೆಲೆಯಲ್ಲಿ ಮುಂಜಾಗ್ರತೆಯ ಹಿನ್ನೆಲೆಯಲ್ಲಿ ಮಂಡ್ಯ ಮತ್ತು ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲೆಗಳಿಗೆ ಇಂದು ರಜೆ ಘೋಷಣೆಯನ್ನು ಮಾಡಲಾಗಿದೆ ಹೌದು ಜಿಲ್ಲಾಧಿಕಾರಿ ಈ ಒಂದು ಆದೇಶವನ್ನು ಮಾಡಿದ್ದಾರೆ ಮಂಡ್ಯ ಜಿಲ್ಲಾಧಿಕಾರಿ ಎಸ್ ಅಶ್ವಥಿ ಆದೇಶವನ್ನು ಮಾಡಿ ದ್ದಾರೆ.ಇತ್ತ ದಕ್ಷಿಣ ಕನ್ನಡ ದಲ್ಲೂ ಡಿಸಿ ರಜೆ ಘೋಷಣೆ ಮಾಡಿದ್ದಾರೆ
ಮಳೆ ಸುರಿಸುತ್ತಿರುವ ಹಿನ್ನೆಲೆಯಲ್ಲಿ ರಜೆ ಘೋಷಣೆ ಮಾಡಲಾಗಿದೆ.ಅಂಗನವಾಡಿ ಹಾಗೂ 1ರಿಂದ 10 ನೇ ತರಗತಿ ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದು ಸರ್ಕಾರಿ, ಖಾಸಗಿ ಹಾಗೂ ಅನುದಾನಿತ ಶಾಲೆಗಳಿಗೆ ರಜೆ ಘೋಷಿಸ ಲಾಗಿದೆ.ಭಾರೀ ಮಳೆ ಹಿನ್ನೆಲೆಯಲ್ಲಿ ಇತ್ತ ದ.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆಯನ್ನು ಮಾಡಲಾಗಿದೆ.
ಜಿಲ್ಲಾ ಧಿಕಾರಿ ಡಾ. ರಾಜೇಂದ್ರ ಕೆ.ವಿ. ರಜೆ ಘೋಷಿಸಿದ್ದಾರೆ. ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಸರ್ಕಾರಿ,ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಗಳಿಗೆ ಮೇ 19 ರ ಗುರುವಾರ ರಜೆಯನ್ನು ಡಿಸಿ ಘೋಷಿಸಿ ದ್ದಾರೆ.