ಬೆಂಗಳೂರು –
ಅನುದಾನಿತ ಪ್ರೌಢಶಾಲೆಗಳಲ್ಲಿ 2015ರ ಡಿ.31ರವರೆಗೆ ನಿವೃತ್ತಿ,ನಿಧನ,ರಾಜೀನಾಮೆ ಹಾಗೂ ಇತರೆ ಕಾರಣಗಳಿಂದ ತೆರವಾಗಿರುವ ಬೋಧಕ ಹುದ್ದೆಗಳನ್ನು ಭರ್ತಿ ಪ್ರಕ್ರಿಯೆ ಯನ್ನು ಮುಂದುವರಿಸಲು ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ವಿ.ಶ್ರೀನಿವಾಸಮೂರ್ತಿ ಸುತ್ತೋಲೆಯನ್ನು ಹೊರಡಿಸಿದ್ದಾರೆ.ಕೋವಿಡ್-19 ಉದ್ಭವಿಸಿದ ಆರ್ಥಿಕ ಸಂಕಷ್ಟದ ಹಿನ್ನೆಲೆಯಲ್ಲಿ ಆರ್ಥಿಕ ಮಿತವ್ಯಯ ಸಾಧಿಸುವ ದೃಷ್ಠಿಯಿಂದ 2020-21ನೆ ಸಾಲಿನಲ್ಲಿ ಖಾಸಗಿ ಶಿಕ್ಷಣ ಸಂಸ್ಥೆ ಗಳನ್ನು ಹೊಸದಾಗಿ ವೇತನಾನುದಾನಕ್ಕೆ ಒಳಪಡಿಸದಂತೆ ಹಾಗೂ ಈಗಾಗಲೇ ವೇತನಾನುದಾನಕ್ಕೆ ಒಳಪಟ್ಟ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡದಂತೆ ಸೂಚನೆಗಳನ್ನು ನೀಡಲಾಗಿತ್ತು.
ಆದರೆ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಆರ್ಥಿಕ ಇಲಾಖೆಯು ಸಹಮತ ನೀಡಿದ ಹಿನ್ನೆಲೆಯಲ್ಲಿ ಈ ಹುದ್ದೆ ಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ಶಿಕ್ಷಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.