ಬೆಂಗಳೂರು –
ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿರುವ ಎಲ್ಲಾ ಸರ್ಕಾರಿ, ಅನುದಾನಿತ ಇಂಜಿನಿಯರಿಂಗ್, ಪಾಲಿಟೆಕ್ನಿಕ್ , ಕಿರಿಯ ತಾಂತ್ರಿಕ ಶಾಲೆಗಳಲ್ಲಿನ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಯು ಆಧಾರ್ ಆಧಾರಿತ ಬಯೋಮೆಟ್ರಿಕ್ ಹಾಜರಾತಿಗೆ ನೋಂದಣಿ ಮಾಡಿಕೊಳ್ಳುವಂತೆ ಇಲಾಖೆ ಸೂಚಿಸಿದೆ.ಈ ಹಿಂದೆಯೇ ಬಯೋ ಮೆಟ್ರಿಕ್ ಹಾಜರಾತಿ ಯಂತ್ರದಲ್ಲಿ ಹಾಜರಾತಿ ದಾಖಲಿಸುವುದು ಕಡ್ಡಾಯಗೊಳಿಸಲಾಗಿದೆ.
ಆದರೆ ಸರ್ಕಾರಿ ಕಚೇರಿಗಳಲ್ಲಿ ಆನ್‌ಲೈನ್ ಹಾಜರಾತಿ ಜಾರಿಗೆ ತರುವ ಸಲುವಾಗಿ ಆಧಾರ್ ಆಧಾರಿತ ಬಯೋಮೆಟ್ರಿಕ್ ಹಾಜರಾತಿ ಪದ್ಧತಿಗೆ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯಗೊಳಿ ಸಲಾಗಿದೆ.ಈ ಹಿನ್ನೆಲೆಯಲ್ಲಿ ಬದಲಾವಣೆ ಕುರಿತು ವೀಡಿಯೋ ಕಾನ್ಫರೆನ್ಸ್ ಮೂಲಕ ತಿಳಿಸಲಾಗಿದೆ
ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸು ತ್ತಿರುವ ಎಲ್ಲ ಸಿಬ್ಬಂದಿ ಮೇ 13ರೊಳಗೆ ಕಡ್ಡಾಯ ವಾಗಿ ನೋಂದಣಿ ಮಾಡಿಕೊಳ್ಳಬೇಕೆಂದು ಇಲಾಖೆಯು ಸೂಚಿಸಿದೆ.
ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯಗೊಳಿಸಿದ್ದರೂ ಸಹ ಬಹುತೇಕರು ಇದನ್ನು ಅನುಸರಿಸುತ್ತಿಲ್ಲ ಎಂಬ ದೂರುಗಳು ಬಂದ ಹಿನ್ನೆಲೆಯಲ್ಲಿ ಆಧಾರ್ ಆಧಾರಿತ ಹಾಜರಾತಿ ಪದ್ಧತಿ ಜಾರಿಗೊಳಿಸುತ್ತಿದೆ