ಎಪ್ರೀಲ್ 11 ರಿಂದ ರಾಜ್ಯದ ಶಾಲಗಳಿಗೆ ಬೇಸಿಗೆ ಆರಂಭ – ಬೇಸಿಗೆ ರಜೆಯಲ್ಲಿ ಶಾಲೆಗಳಲ್ಲಿ ಬಿಸಿಯೂಟ ನೀಡುವಂತೆ ಆದೇಶ ಮಾಡಿದ ಶಿಕ್ಷಣ ಇಲಾಖೆ…..

Suddi Sante Desk
ಎಪ್ರೀಲ್ 11 ರಿಂದ ರಾಜ್ಯದ ಶಾಲಗಳಿಗೆ ಬೇಸಿಗೆ ಆರಂಭ – ಬೇಸಿಗೆ ರಜೆಯಲ್ಲಿ ಶಾಲೆಗಳಲ್ಲಿ ಬಿಸಿಯೂಟ ನೀಡುವಂತೆ ಆದೇಶ ಮಾಡಿದ ಶಿಕ್ಷಣ ಇಲಾಖೆ…..

ಬೆಂಗಳೂರು

ಎಪ್ರೀಲ್ 11 ರಿಂದ ರಾಜ್ಯದ ಶಾಲಗಳಿಗೆ ಬೇಸಿಗೆ ಆರಂಭ – ಬೇಸಿಗೆ ರಜೆಯಲ್ಲಿ ಶಾಲೆಗಳಲ್ಲಿ ಬಿಸಿ ಯೂಟ ನೀಡುವಂತೆ ಆದೇಶ ಮಾಡಿದ ಶಿಕ್ಷಣ ಇಲಾಖೆ ಹೌದು

ರಾಜ್ಯದ ಶಾಲಾ ಮಕ್ಕಳಿಗೆ ಏ.11 ರಿಂದ ಬೇಸಿಗೆ ರಜೆ ಆರಂಭವಾಗಲಿದ್ದು ಬಿಸಿಯೂಟ ವ್ಯವಸ್ಥೆ ಯನ್ನು ಮಾಡುವಂತೆ ಶಾಲಾ ಶಿಕ್ಷಣ ಇಲಾಖೆ ಆದೇಶವನ್ನು ಮಾಡಿದೆ.ಹೌದು ರಾಜ್ಯದಲ್ಲಿ 2024-25ನೇ ಸಾಲಿನ ಬೇಸಿಗೆ ರಜೆಯ ಅವಧಿ ಯು ದಿನಾಂಕ 11-04-2024ರಿಂದ ದಿನಾಂಕ 28-05-2024 ರವರೆಗೆ ಒಟ್ಟು 41 ದಿನಗಳ ಅವಧಿಯಲ್ಲಿ ಮಧ್ಯಾಹ್ನ ಉಪಹಾರ ಯೋಜನೆ ಕಾರ್ಯಕ್ರಮವನ್ನು ಶಾಲೆಯಲ್ಲಿ ಕೈಗೊಳ್ಳಬೇ ಕೆಂದು ಶಾಲಾ ಶಿಕ್ಷಣ ಇಲಾಖೆ ಮಾರ್ಗಸೂಚಿಯ ಜೊತೆಗೆ ಆದೇಶವನ್ನು ಹೊರಡಿಸಿದೆ.

ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಘೋಷಿಸಿರುವ 31 ಕಂದಾಯ ಜಿಲ್ಲೆಗಳ 223 ಬರ ಪೀಡಿತ ತಾಲ್ಲೂಕುಗಳಲ್ಲಿ ಮಧ್ಯಾಹ್ನ ಉಪಹಾರ ಯೋಜನೆ ಕಾರ್ಯಕ್ರಮವನ್ನು ಸರ್ಕಾರಿ ಮತ್ತು ಅನುದಾನಿತ 1 ರಿಂದ 10ನೇ ತರಗತಿಗಳ ಶಾಲಾ ಮಕ್ಕಳಿಗೆ ಬೇಸಿಗೆ ರಜಾ ಅವಧಿಯಲ್ಲಿ ಅನುಷ್ಠಾನಗೊಳಿಸುವಂತೆ ಮಾರ್ಗಸೂಚಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ.

ಈ ಕುರಿತಂತೆ ಸುತ್ತೋಲೆ ಹೊರಡಿಸಲಾಗಿದ್ದು 2023-24ನೇ ಸಾಲಿನ ರಾಜ್ಯ ಸರ್ಕಾರದ ನಡವಳಿಯಂತೆ ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಬರ ಪೀಡಿತ 31 ಕಂದಾಯ ಜಿಲ್ಲೆಗಳಲ್ಲಿ ಒಟ್ಟು 236ರ ಪೈಕಿ 223 ಬರಪೀಡಿತ ತಾಲ್ಲೂಕುಗಳು ಎಂದು ಸರ್ಕಾರ ಆದೇಶಿಸಿದೆ ಎಂದಿದೆ.ಸರ್ವೋಚ್ಛ ನ್ಯಾಯಾಲಯದ ಆದೇಶದ ಅನುಸಾರವಾಗಿ ಬರಗಾಲ ಪೀಡಿತ ಪ್ರದೇಶದಲ್ಲಿ ಬೇಸಿಗೆ ರಜೆಯಲ್ಲೂ ಸಹ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 1 ರಿಂದ 10ನೇ ತರಗತಿಗ ಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟವನ್ನು ನೀಡಬೇಕಾಗಿ ರುತ್ತದೆ ಎಂದಿದ್ದಾರೆ.

ಪ್ರಸ್ತುತ 2024-25ನೇ ಸಾಲಿನ ಬೇಸಿಗೆ ರಜೆಯ ಅವಧಿಯು ದಿನಾಂಕ 11-04-2024ರಿಂದ ದಿನಾಂಕ 28-05-2024ರವರೆಗೆ ಒಟ್ಟು 41 ದಿನಗಳ ಅವಧಿಯಲ್ಲಿ ಮಧ್ಯಾಹ್ನ ಉಪಹಾರ ಯೋಜನೆ ಕಾರ್ಯಕ್ರಮವನ್ನು ಶಾಲೆಯಲ್ಲಿ ಕೈಗೊಳ್ಳಬೇಕು.ಈ ಹಿನ್ನಲೆಯಲ್ಲಿ ಪಿಎಂ ಪೋಷಣ್ ಮಧ್ಯಾಹ್ನ ಉಪಾಹಾರ ಯೋಜನೆ ಯನ್ನು 1 ರಿಂದ 10ನೇ ತರಗತಿವರೆಗಿನ

ವಿದ್ಯಾರ್ಥಿಗಳಿಗೆ ಅನುಷ್ಠಾನಕ್ಕಾಗಿ ಸಿದ್ದಪಡಿಸಿದ ವಾರ್ಷಿಕ ಕ್ರಿಯಾ ಯೋಜನೆ ಮತ್ತು ಅಯವ್ಯಯ ಬಗ್ಗೆ ಮಾರ್ಗಸೂಚಿ ಪ್ರಕಟಿಸಲಾಗಿದ್ದು ಅದರಂತೆ ಬಿಸಿಯೂಟ ವಿತರಿಸುವಂತೆ ತಿಳಿಸಲಾಗಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…….

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.