ಬೆಂಗಳೂರು –
ಮೂರನೆಯ ಅಲೆಯ ಆತಂಕದ ನಡುವೆಯೂ ಕೂಡಾ ರಾಜ್ಯದಲ್ಲಿ ಆಗಸ್ಟ್ 23 ರಿಂದ ಶಾಲೆಗಳನ್ನು ಆರಂಭ ಮಾಡಲು ಚಿಂತನೆ ಮಾಡಲಾಗಿದ್ದು ಪ್ರಸ್ತುತ ಶೈಕ್ಷಣಿಕ ಸಾಲಿನಿಂದ ಆಗಸ್ಟ್ 23ರಿಂದ 9ರಿಂದ 12ನೆ ತರಗತಿ ಪುನರಾರಂಭಿಸಲು ಉದ್ದೇಶಿಸಲಾಗಿದ್ದು ಈ ಸಂಬಂಧ ಶುಕ್ರವಾರ (ಆ.13) ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಶಾಲಾ-ಕಾಲೇಜುಗಳ ಭೌತಿಕ ತರಗತಿಗಳು ಪ್ರಾರಂಭ ವಾಗುತ್ತಿರುವ ಹಿನ್ನೆಲೆಯಲ್ಲಿ ಶಿಕ್ಷಕರು ಕಡ್ಡಾಯವಾಗಿ ಲಸಿಕೆ ಪಡೆದಿರಬೇಕು.ಜೊತೆಗೆ,ಕೋವಿಡ್ ಮಾರ್ಗ ಸೂಚಿಗಳಾದ ಮಾಸ್ಕ್ ಬಳಕೆ,ಸ್ಯಾನಿಟೈಸರ್, ಸುರಕ್ಷಿತ ಅಂತರ ಕಾಪಾಡುವುದು ಸೇರಿದಂತೆ ಹಲವು ನಿಯಮಗಳನ್ನು ಪಾಲಿಸಬೇಕಾಗುತ್ತದೆ.

ಹೀಗಾಗಿ,ಆರೋಗ್ಯ ಮತ್ತು ಶಿಕ್ಷಣ ಇಲಾಖೆ ಅಧಿಕಾ ರಿಗಳ ಜೊತೆ ಸಭೆ ನಡೆಸಿ ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು ಎಂದರು

ಮಕ್ಕಳಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿರುವುದನ್ನು ಗಮನಿ ಸಿದ್ದೇನೆ.ಯಾವ ವಯಸ್ಸಿನವರಲ್ಲಿ ಸೋಂಕು ಹೆಚ್ಚಾ ಗುತ್ತಿದೆ ಮತ್ತು ಅದರ ತೀವ್ರತೆ ಬಗ್ಗೆ ಆರೋಗ್ಯ ಇಲಾಖೆಯಿಂದ ಮಾಹಿತಿ ಪಡೆಯಲಾಗುವುದು. ಅಲ್ಲದೆ ಕೋವಿಡ್ ಸಲಹಾ ಸಮಿತಿಯ ಸಲಹೆ ಯನ್ನು ಪಡೆಯಲಾಗುವುದು ಎಂದು ಹೇಳಿದರು.

ಇನ್ನೂ ಆಗಸ್ಟ್ 30 ರಂದು ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಸಭೆ ನಡೆಯಲಿದ್ದು ಕೋವಿಡ್ ಸೋಂಕು ನಿಯಂತ್ರಣದಲ್ಲಿದ್ದರೆ 1ರಿಂದ 8ನೆ ತರಗತಿವರೆಗೂ ಎರಡನೆ ಹಂತದಲ್ಲಿ ಶಾಲೆ ಪ್ರಾರಂಭ ಮಾಡುವ ಬಗ್ಗೆಯೂ ಗಂಭೀರ ಚಿಂತನೆ ಮಾಡಲಾ ಗುವುದು ಎಂದು ಸಚಿವರು ಹೇಳಿದರು
