ಬೆಂಗಳೂರು –
ಶಿಕ್ಷಣ ಸಚಿವ ಬಿ ಸಿ ನಾಗೇಶ್ ಬೆಂಗಳೂರಿನಲ್ಲಿ ತುರ್ತು ಸಭೆ ಮಾಡಿದರು.ಹೌದು ವಿಧಾನ ಸಭೆಯಲ್ಲಿ ಅಧಿಕಾರಿ ಗಳೊಂದಿಗೆ ಸಭೆ ಮಾಡಿದ ಸಚಿವರು ಇಲಾಖೆಯಲ್ಲಿನ ಶಾಲೆಗಳ ಕುರಿತು ಚರ್ಚೆಯನ್ನು ಮಾಡಿದರು
ಪ್ರಸಕ್ತ ಸಾಲಿನ ರಾಜ್ಯ ಆಯವ್ಯ ಯದಲ್ಲಿ ಘೋಷಿಸಿರುವ ಸರ್ಕಾರಿ ಮಾದರಿ ಶಾಲೆಗಳ ಅಭಿವೃದ್ಧಿ ಕುರಿತು ಶಿಕ್ಷಣ ಇಲಾಖೆ,ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಹಣಕಾಸು ಇಲಾಖೆಯ ಉನ್ನತ ಅಧಿಕಾರಿಗಳ ಜೊತೆ ವಿಧಾನಸೌಧದ ಕಚೇರಿಯಲ್ಲಿ ಸಭೆ ನಡೆಸಿ ಮಾಹಿತಿಯನ್ನು ಪಡೆದುಕೊಂಡ ಸಚಿವರು ಕೆಲವೊಂದಿಷ್ಟು ಸಲಹೆ ಸೂಚನೆಗಳನ್ನು ನೀಡಿದರು