ಬೆಂಗಳೂರು –
ಸೋಮವಾರದಿಂದ ರಾಜ್ಯದಲ್ಲಿ SSLC ಪರೀಕ್ಷೆಗಳು ಆರಂಭವಾಗಲಿದ್ದು ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿ ಗಳಿಗೆ ಪ್ರವೇಶಿಸಲು ಅನುಮತಿ ನೀಡಲಾಗುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹೇಳಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂ ದಿಗೆ ಮಾತನಾಡಿದ ಅವರು ಪರೀಕ್ಷೆಗಳನ್ನು ಆಫ್‌ಲೈನ್‌ನಲ್ಲಿ ನಡೆಸಲು ವ್ಯವಸ್ಥೆ ಮಾಡಲಾಗಿದೆ.ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯ ಲ್ಲಿದ್ದು, ಇತರ ಜಿಲ್ಲೆಗಳಲ್ಲಿಯೂ ಹಿಜಾಬ್ ವಿವಾದ ಹರಡುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮಗಳ ಕೈಗೊಳ್ಳ ಲಾಗಿದೆ ಎಂದರು
ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಪರೀಕ್ಷಾ ಕೊಠಡಿಗೆ ಪ್ರವೇಶಿಸುವಂತಿಲ್ಲ.ವಿದ್ಯಾರ್ಥಿಗಳು ಹೈಕೋರ್ಟ್ ಆದೇಶ ವನ್ನು ಗಮನದಲ್ಲಿಟ್ಟುಕೊಂಡು ಡ್ರೆಸ್ ಕೋಡ್ ಪಾಲಿಸ ಬೇಕು ಎಂದು ಮನವಿ ಮಾಡಿದರು.ಈ ವರ್ಷ SSLC ಪರೀಕ್ಷೆಗೆ 8.73 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆಂದರು.