ಬೆಂಗಳೂರು –
ಕೋವಿಡ್ ಹಿನ್ನಲೆಯಲ್ಲಿ ವಿದ್ಯಾರ್ಥಿಗಳನ್ನು ಆರೋಗ್ಯದ ದೃಷ್ಟಿಯಿಂದ ಪಿಯುಸಿ ದ್ವಿತೀಯ ವರ್ಷದ ಪರೀಕ್ಷೆಗಳನ್ನು ರದ್ದು ಮಾಡಿ ವಿದ್ಯಾರ್ಥಿ ಗಳಿಗೆ ಸಿಹಿ ಸುದ್ದಿ ನೀಡಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್ ಈಗ ಮತ್ತೊಂದು ಸಿಹಿ ಸುದ್ದಿ ನೀಡಿದ್ದಾ ರೆ.ಹೌದು ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಅಂಕಗಳನ್ನು ಮಾತ್ರ ಪರಿಗಣಿಸುವಂತೆ, ದ್ವೀತಿಯ ಪಿಯುಸಿ ಪರೀಕ್ಷೆ ಅಂಕ ಅಥವಾ ಗ್ರೇಡಿಂಗ್ ಗಳನ್ನು ಪರಿಗಣಿ ಸದಂತೆ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಉನ್ನತ ಶಿಕ್ಷಣ ಇಲಾಖೆಗೆ ಸಲಹೆ ನೀಡಿದ್ದಾರೆ ಇದರೊಂದಿಗೆ ವಿದ್ಯಾರ್ಥಿಗಳಿಗೆ ಸಚಿವರು ಸಿಹಿ ಸುದ್ದಿ ನೀಡಿದ್ದಾರೆ

ಉಪಮುಖ್ಯಮಂತ್ರಿಯೂ ಆಗಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ ಅವರಿಗೆ ಸುರೇಶ್ ಕುಮಾರ್ ಪತ್ರ ಬರೆದು ಅಧಿಕೃತ ಮಾಹಿತಿ ನೀಡಿದ್ದಾರೆ. ಜೊತೆಗ ಈ ತಿಂಗಳಾಂತ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಗ್ರೆಡಿಂಗ್ ಘೋಷಣೆ ಮಾಡು ವುದಾಗಿ ತಿಳಿಸಿದ್ದಾರೆ.ಅಶ್ವಥನಾರಾಯಣ ಅವರಿಗೆ ಬರೆದಿರುವ ಪತ್ರದಲ್ಲಿ ಕೋವಿಡ್ ಪ್ರಸರಣದ ತೀವ್ರತೆ ಹಾಗೂ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಠಿ ಗಳ ನಡುವೆ ಸಮತೋಲನ ತರಲು ದ್ವೀತಿಯ ಪರೀಕ್ಷೆಗಳನ್ನು ರದ್ದು ಪಡಿಸುವ ತೀರ್ಮಾನ ತೆಗೆದು ಕೊಳ್ಳಲಾಗಿದೆ.ಈ ಸಂದರ್ಭದಲ್ಲಿ ನಿರ್ದಿಷ್ಟವಾದ ತರ್ಕವನ್ನು ಅನುಸರಿಸಲಾಗಿದೆ ಎಂದಿದ್ದಾರೆ.ಪರೀಕ್ಷೆ ನಡೆಸದೆ ಇದ್ದರೂ ಈ ಮೊದಲು ವಿದ್ಯಾರ್ಥಿಗಳು ಪಿಯುಸಿ ಮೊದಲ ವರ್ಷದಲ್ಲಿ ಗಳಿಸಿದ ಅಂಕಗಳು ಹಾಗೂ SSLC ಫಲಿತಾಂಶ ಪರಿಗಣಿಸಿ ಅದಕ್ಕೆ ಸಮ ನಾದ ಸೂಕ್ತ ಮೌಲ್ಯಮಾಪನ ಸೇರ್ಪಡೆ ಮಾಡಿ ಗ್ರೇಡಿಂಗ್ ಫಲಿತಾಂಶ ನೀಡಲು ನಿರ್ಧರಿಸಲಾಗಿದೆ. ಒಂದು ವೇಳೆ ನಿರ್ಧರಿಸಲಾಗದ ಗ್ರೇಡಿಂಗ್ ಬಗ್ಗೆ ಯಾವುದೇ ವಿದ್ಯಾರ್ಥಿ ಅತೃಪ್ತಿ ಹೊಂದಿದ್ದರೆ ಅಂತಹ ವಿದ್ಯಾರ್ಥಿಗಳು ಕಷ್ಟದ ಸಮಯದಲ್ಲಿ ನಡೆಸಲಾಗುವ ಪರೀಕ್ಷೆಗಳನ್ನು ತೆಗೆದುಕೊಳ್ಳಬಹು ದಾಗಿದೆ ಎಂದರು.ಇದಕ್ಕಿಂತ ಪ್ರಸ್ತುತ ನಿರ್ಧಾರವನ್ನು ತೆಗೆದುಕೊಳ್ಳುವುದು ಕಷ್ಟ ಸಾಧ್ಯ ಎಂದು ಸಚಿವರು ಸಮರ್ಥಿಸಿಕೊಂಡಿದ್ದಾರೆ.ಸಾಮಾನ್ಯವಾಗಿ ದ್ವಿತೀಯ ಪಿಯುಸಿ ಅಂಕಗಳನ್ನು ಸಿಇಟಿ ಪರೀಕ್ಷೆಗೆ ಪರಿಗಣಿಸಿ ಸೂಕ್ತ ವೇಟೇಜ್ ಕಲ್ಪಿಸುವ ಮೂಲಕ ಫಲಿತಾಂಶ ಘೋಷಿಸಲಾಗುತ್ತದೆ. ಈ ಬಾರಿಯ ಗ್ರೇಡಿಂಗ್ ಫಲಿ ತಾಂಶವೂ ವಿದ್ಯಾರ್ಥಿಗಳ ಪ್ರತಿಭೆಯನ್ನು ಖಚಿತ ವಾಗಿ ವ್ಯಕ್ತಪಡಿಸಿದರೂ ಅವರಿಗೆ ಅದನ್ನು ನಿರಾಕರಿ ಸಿ ಇನ್ನೊಮ್ಮೆ ಪರೀಕ್ಷೆ ಬರೆಯುವ ಅವಕಾಶ ಕಲ್ಪಿಸ ಲಾಗಿದೆ. ಪರೀಕ್ಷೆ ಇಲ್ಲದೆ ಗ್ರೇಡಿಂಗ್ ಪಡೆದವರಿಗೆ ಮತ್ತು ಗ್ರೇಡಿಂಗ್ ನಿರಾಕರಿಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳ ಫಲಿತಾಂಶವನ್ನು ಸಿಇಟಿಗೆ ಪರಿಗಣಿ ಸುವುದು ಅನಾನುಕೂಲವಾಗಲಿದೆ ಎಂದು ತಿಳಿಸಿ ದ್ದಾರೆ.ಹಾಗಾಗಿ ದ್ವಿತೀಯ ಪಿಯುಸಿ ಫಲಿತಾಂಶ ಆಧರಿಸಿ ವೇಟೇಜ್ ನೀಡುವ ಪ್ರಕ್ರಿಯೆಯನ್ನು ಈ ವರ್ಷಕ್ಕೆ ಸೀಮಿತವಾಗಿ ಕೈ ಬಿಟ್ಟು ಕೇವಲ ಸಿಇಟಿ ಪರೀಕ್ಷೆಗಳ ಅಂಕಗಳನ್ನು ಮಾತ್ರ ರಾಂಕ್ ಗೆ ಪರಿಗಣಿಸುವಂತೆ ಸುರೇಶ್ ಕುಮಾರ್ ಸಲಹೆ ನೀಡಿದ್ದಾರೆ.
ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರಿಗೂ ಪತ್ರ ಬರೆದಿರುವ ಸಚಿವ ಸುರೇಶ್ ಕುಮಾರ್ ಅವರು 2020-21ನೇ ಸಾಲಿನಲ್ಲಿ ದಾಖಲಾಗಿರುವ ದ್ವಿತೀಯ ಪಿಯಿಸಿ ಹೊಸ ವಿದ್ಯಾರ್ಥಿಗಳ ಫಲಿತಾಂಶ ಗಳನ್ನು ಘೋಷಿಸುವಲ್ಲಿ ಅವರು ಈ ಹಿಂದೆ ಮೊದಲ ವರ್ಷದ ಪಿಯುಸಿ ಯಲ್ಲಿ ಗಳಿಸಿರುವ ಅಂಕಗಳ ಆಧಾರದಲ್ಲಿ ಮಾರ್ಗಸೂಚಿ ಸೂತ್ರಗಳ ನ್ನು ತಯಾರಿಸಲು ಸೂಚನೆ ನೀಡಿದ್ದಾರೆ.
ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಠಿಯಿಂದ ಫಲಿತಾಂಶ ಕರಾರುವಕ್ಕಾಗಲು ಹಾಗೂ ನ್ಯಾಯ ಸಮ್ಮತವಾಗಲು ಎಸ್ ಎಸ್ ಎಲ್ ಸಿ ಫಲಿತಾಂಶ ವನ್ನು ಅವಲೋಕಿಸಲು ಸಲಹೆ ನೀಡಿದ್ದಾರೆ.ಎಸ್ ಎಸ್ ಎಲ್ ಸಿ ಪರೀಕ್ಷಾ ಮಂಡಳಿಯಿಂದ ಅಂಕಿ ಅಂಶಗಳನ್ನು ಪಡೆದು ತಿಂಗಳಾಂತ್ಯಕ್ಕೆ ದ್ವಿತೀಯ ಪಿಯುಸಿ ಗ್ರೇಡಿಂಗ್ ಘೋಷಿಸುವಂತೆ ನಿರ್ದೇಶನ ನೀಡಿದ್ದಾರೆ ಎಂದರು.