ತುಮಕೂರು –
ಆಗಸ್ಟ್ 15 ರಂದು ಧ್ವಜ ಕಂಬವನ್ನು ನಿಲ್ಲಿಸುವ ಸಮಯದಲ್ಲಿ ವಿದ್ಯುತ್ ತಗುಲಿ ಮೃತಪಟ್ಟ ತುಮಕೂರಿನ ವಿದ್ಯಾರ್ಥಿ ಮನೆಗೆ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಭೇಟಿ ನೀಡಿ ಸಾಂತ್ವನ ಹೇಳಿದರು.
ಹೌದು ವಿದ್ಯಾರ್ಥಿಯ ಮನೆಗೆ ಪ್ರಾಥಮಿಕ ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರು ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳುವ ಜೊತೆಗೆ ಒಂದು ಲಕ್ಷ ರೂ.ಗಳ ಪರಿಹಾರ ಚೆಕ್ ಅನ್ನು ವಿತರಿಸಿದರು.
ಸ್ವಾತಂತ್ರ್ಯ ದಿನಾಚರಣೆಯ ನಡೆದ ಈ ಘೋರ ದುರಂತ ನಮಗೆಲ್ಲಾ ದುಃಖ ತಂದಿದೆ.ನಿಮ್ಮ ನೋವನ್ನು ಭರಿಸುವ ಶಕ್ತಿ ಯಾರಿಂದಲೂ ಆಗಲ್ಲ ಎಂದು ಮೃತ ವಿದ್ಯಾರ್ಥಿ ಚಂದನ್ ಅವರ ತಾಯಿ ನೇತ್ರಾವತಿ ಅವರಿಗೆ ಸಮಾಧಾನಪಡಿಸಿದರು.
ಅಲ್ಲದೆ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಶಶಾಂಕ್ ಅವರ ಕುಟುಂಬದ ವರಿಗೆ ಆಸ್ಪತ್ರೆಯ ಚಿಕಿತ್ಸಾ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ ಅಲ್ಲದೆ ಅತ ವಿದ್ಯಾಬ್ಯಾಸ ಮಾಡುತ್ತಿರುವ ರೇಣುಕಾ ವಿದ್ಯಾಪೀಠದಲ್ಲಿ ಶಾಲೆಯಲ್ಲಿ ವಿದ್ಯಾಭ್ಯಾಸಕ್ಕೆ ಎಲ್ಲಾ ರೀತಿಯ ಅನುಕೂಲಗಳನ್ನು ಮಾಡಿ ಕೊಡಲು ತುಮಕೂರಿನ ಉಪ ನಿರ್ದೇಶಕ ನಂಜಯ್ಯ ಅವರಿಗೆ ಸೂಚನೆ ನೀಡಿದರು.
ಇನ್ನೂ ಈಗಾಗಲೇ ಘಟನೆಯ ಬಗ್ಗೆ ತನಿಖೆ ನಡೆಸಿ ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ತುಮಕೂರಿನ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ರಾಹುಲ್ ಕುಮಾರ್ ,ಅಪರ ಜಿಲ್ಲಾಧಿಕಾರಿ ಚೆನ್ನಬಸಪ್ಪ, ಉಪ ನಿರ್ದೇಶಕ ನಂಜಯ್ಯ, ಉಪ ವಿಭಾಗಾಧಿಕಾರಿ ಅಜೇಯ, ತಹಶೀಲ್ದಾರ್ ಮೋಹನ್ ಕುಮಾರ್,
ಕ್ಷೇತ್ರ ಶಿಕ್ಷಣಾಧಿಕಾರಿ ಹನುಮನಾಯಕ್ ಸೇರಿದಂತೆ ಹಲವಾರು ಅಧಿಕಾರಿಗಳು ಉಪಸ್ಥಿತರಿದ್ದರು.ಇದೇ ವೇಳೆ ಆಸ್ಪತ್ರೆಗೆ ಭೇಟಿ ನೀಡಿದ ಶಿಕ್ಷಣ ಸಚಿವರು ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿರುವ ಇಬ್ಬರು ವಿದ್ಯಾರ್ಥಿಗಳ ಆರೋಗ್ಯವನ್ನು ಸಚಿವರು ವಿಚಾರಿಸಿ ವಿದ್ಯಾರ್ಥಿಗಳಿಗೆ ಸಾಂತ್ವನ ಹೇಳಿದರು.