ಬೆಂಗಳೂರು –
ಶಿಕ್ಷಕರ ವರ್ಗಾವಣೆ,ನಿಶ್ಚಿತ ಪಿಂಚಣಿ ಸಮಸ್ಯೆ ಯ ಕುರಿತು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದವರು ನಾಡಿನ ಶಿಕ್ಷಕರ ಧ್ವನಿಯಾಗಿ ಶಿಕ್ಷಣ ಸಚಿವರಿಗೆ ಪತ್ರ ಬರೆದು ಒತ್ತಾಯ ಮಾಡಿದ್ದ ಮನವಿಗೆ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಸ್ಪಂದಿಸಿದ್ದಾರೆ.ಹೌದು ಈ ಒಂದು ವಿಚಾರ ಕುರಿತು ಸಂಘದ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿ ಅವರು ಸಚಿವರಿಗೆ ಪತ್ರವನ್ನು ಬರೆದಿದ್ದರು.ಈ ಒಂದು ಮನವಿಗೆ ಶಿಕ್ಷಣ ಸಚಿವರು ಸ್ಪಂದಿಸಿ ಸೂಕ್ತ ಕ್ರಮಕ್ಕೆ ಸೂಚನೆ ನೀಡಿ ಶಿಕ್ಷಕರ ಸಮಸ್ಯೆಗೆ ಸ್ಪಂದಿಸುವಂತೆ ಪತ್ರ ಬರೆದಿದ್ದಾರೆ
ಈ ಕೂಡಲೇ ಸದರಿಯವರ ಮನವಿಯನ್ನು ಪರಿಗಣಿಸಿ ಪರಿಶೀಲನೆ ನಡೆಸಿ ನಿಯಮಾನುಸಾರವಾಗಿ ಈ ಕೂಡಲೇ ಸೂಕ್ತವಾದ ಕ್ರಮವನ್ನು ಕೈಗೊಳ್ಳಲು ಸೂಚನೆಯನ್ನು ನೀಡಿ ವರ್ಗಾವಣೆ ಸೇರಿದಂತೆ ಹತ್ತಾರು ಸಮಸ್ಯೆ ಗಳ ನಡುವೆ ಸಿಕ್ಕು ನರಕಯಾತನೆ ಅನುಭವಿಸುತ್ತಿರುವ ಶಿಕ್ಷಕರ ಸಮಸ್ಯೆ ಗೆ ಸ್ಪಂದಿಸಿದ್ದಾರೆ