ಬೆಂಗಳೂರು –
ಹೆಚ್ಚಾಗುತ್ತಿರುವ ಕೋವಿಡ್ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿ ತುರ್ತು ಸಭೆ ನಡೆಸಿದರು. ಹೌದು ಧಾರವಾಡ,ಬೆಂಗಳೂರು ಗ್ರಾಮಾಂ ತರ ಪ್ರದೇಶಗಳಲ್ಲಿ ಶಾಲೆಗಳಲ್ಲಿ ಹಾಗೂ ಕೇರಳದಲ್ಲಿ ಸೋಂಕು ಹೆಚ್ಚಾಗುತ್ತಿರುವ ಕುರಿತು ಶೀಘ್ರವೇ ಮುಂಜಾ ಗ್ರತಾ ಕ್ರಮ ಕೈಗೊಳ್ಳುವ ಬಗ್ಗೆ ಸಭೆ ನಡೆಸಿದರು
ಸಿಎಂ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಈ ಒಂದು ಸಭೆಯಲ್ಲಿ ಹೊಸ ತಳಿ ಕುರಿತು ಹಾಗೇ ಶಾಲಾ ಕಾಲೇಜುಗಳ ಚಿತ್ರಣ ಕುರಿತು ಚರ್ಚಿಸಲಾಯಿತು. ಹೊಸ ತಳಿಯ ಬಗ್ಗೆ ಮುಂಜಾಗ್ರತಾ ಕ್ರಮದ ಬಗ್ಗೆಯೂ ಚರ್ಚಿಸ ಲಾಯಿತು
ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ದರು ಸಂಪೂರ್ಣವಾದ ಮಾಹಿತಿಯನ್ನು ಪಡೆದುಕೊಂಡ ರು.ಬಿ.ಬಿ.ಎಂ.ಪಿ ಸೇರಿದಂತೆ ಬೆಂಗಳೂರು ನಗರ ಜಿಲ್ಲೆ, ಧಾರವಾಡ, ದಕ್ಷಿಣ ಕನ್ನಡ, ಉಡುಪಿ,ಚಾಮರಾಜನಗರ , ಕೊಡಗು, ಮೈಸೂರು ಸೇರಿ ಏಳು ಜಿಲ್ಲೆಗಳ ಜಿಲ್ಲಾಧಿಕಾರಿ ಗಳೊಂದಿಗೆ ವೀಡಿಯೊ ಸಂವಾದ ನಡೆಸಿದರು.
ಇನ್ನೂ ಈ ಒಂದು ಸಭೆಯಲ್ಲಿ ಸಚಿವರಾದ ಆರ್.ಅಶೋಕ್ ಡಾ:ಸಿ.ಎನ್.ಅಶ್ವತ್ಥ್ ನಾರಾಯಣ್,ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯ ದರ್ಶಿ ಎನ್.ಮಂಜುನಾಥ್ ಪ್ರಸಾದ್,ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್,ಆರೋಗ್ಯ ಇಲಾಖೆ ಕಾರ್ಯದರ್ಶಿ ಟಿ.ಕೆ.ಅನಿಲ್ ಕುಮಾರ್,ಆಯುಕ್ತ ರಂದೀಪ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತ ರಿದ್ದರು.