ಬೆಂಗಳೂರು –
ಸಿಎಂ ಬಸವರಾಜ ಬೊಮ್ಮಯಿ ನೇತೃತ್ವದಲ್ಲಿ ಶಿಕ್ಷಣ ಇಲಾಖೆಯ ತುರ್ತು ಸಭೆ ನಡೆಯಿತು. ಹೌದು ಬೆಂಗಳೂರಿನ ಶಕ್ತಿ ಭವನದಲ್ಲಿ ಹಿಜಾಬ್ ಸಂಘರ್ಷ ಸ್ಥಿತಿಗತಿ,ಕಾನೂನು ಸುವ್ಯವಸ್ಥೆ ಬಗ್ಗೆ ಸಭೆಯನ್ನು ನಡೆಸಲಾ ಯಿತು.ನಾಳೆಯಿಂದ ಪಿಯುಸಿ ಮತ್ತು ಡಿಗ್ರಿ ಕಾಲೇಜು ಆರಂಭಿಸಲು ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ.ಹಿಜಾಬ್ ಗಲಾಟೆ ಸಂಬಂಧ ಪಿಯುಸಿ ಹಾಗೂ ಡಿಗ್ರಿ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಇದೀಗ ಫೆ.16 ರಂದು ಪಿಯುಸಿ,ಡಿಗ್ರಿ ಕಾಲೇಜುಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ.ಸಭೆಯಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್,ಉನ್ನತ ಶಿಕ್ಷಣ ಸಚಿವ ಡಾ ಅಶ್ವತ್ಥ ನಾರಾ ಯಣ,ಗೃಹ ಸಚಿವ ಆರಗ ಜ್ಞಾನೇಂದ್ರ, ಡಿಜಿ ಐಜಿಪಿ ಪ್ರವೀಣ್ ಸೂದ್ ಸೇರಿ ಶಿಕ್ಷಣ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದರು.

ಸಭೆ ಬಳಿಕ ನಡೆದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್,ಸಿಎಂ ಮಾತನಾಡಿ ರಾಜ್ಯದ ಪರಿಸ್ಥಿತಿ ಬಗ್ಗೆ ಚರ್ಚೆ ನಡೆದಿದೆ. ಬುಧವಾರದಿಂದ ಪಿಯೂ ಮತ್ತು ಡಿಗ್ರಿ ಕಾಲೇಜುಗಳು ಆರಂಭವಾಗಲಿದೆ.ಕೋರ್ಟ್ ನ ಸೂಚನೆ ಇದೆ.ಅದನ್ನು ಕಡ್ಡಾಯವಾಗಿ ಫಾಲೋ ಮಾಡಬೇಕು ಎಂದು ತಿಳಿಸಿ ದರು.ಬಳಿಕ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಪೋಷಕರು,ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆಗದಂತೆ ಎಚ್ಚರಿಕೆ ವಹಿಸ್ತಿವಿ.ಪೊಲೀಸ್ ಇಲಾಖೆ ಇದಕ್ಕೆ ಬೇಕಾದ ಬಂದೋಬಸ್ತ್ ಕೈಗೊಳ್ಳಲಿದೆ ಎಂದರು.