ಬೆಂಗಳೂರು –
ರಾಜ್ಯದಲ್ಲಿ ಆಡಳಿತ ನಡೆಸುತ್ತಿದ್ದ ಜೆಡಿಎಸ್ – ಕಾಂಗ್ರೆಸ್ ನೇತೃತ್ವದ ಮೈತ್ರಿ ಸರ್ಕಾರ ಪತನಗೊಂಡ ಬಳಿಕ ಯಡಿ ಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ 2019 ರ ಜುಲೈನಲ್ಲಿ ಅಧಿಕಾರಕ್ಕೆ ಬಂದಿದ್ದು ಈವರೆಗಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಇಬ್ಬರು ಸಚಿವರು ಆರೋಪ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಈಗ ರಾಜೀನಾಮೆ ನೀಡಿದ ಈಶ್ವರಪ್ಪ ಅವರು ಮೂರನೇ ರಾಜಕಾರಣಿ ಆಗಿದ್ದಾರೆ

ಈ ಹಿಂದೆ ಅಬಕಾರಿ ಸಚಿವ ಎಚ್. ನಾಗೇಶ್ ಭ್ರಷ್ಟಾಚಾರದ ಆರೋಪದ ಕಾರಣಕ್ಕೆ 2021ರ ಜನವರಿಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಆ ಬಳಿಕ ಜಲಸಂಪ ನ್ಮೂಲ ಸಚಿವರಾಗಿದ್ದ ರಮೇಶ್ ಜಾರಕಿಹೊಳಿ ಲೈಂಗಿಕ ಹಗರಣದ ಆರೋಪದ ಕಾರಣಕ್ಕೆ 2021 ರ ಮಾರ್ಚ್ ತಿಂಗಳಿನಲ್ಲಿ ರಾಜೀನಾಮೆ ಸಲ್ಲಿಸಿದ್ದರು.


ಇದೀಗ ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಸಚಿವ ಕೆ.ಎಸ್. ಈಶ್ವರಪ್ಪ ಇಂದು ಮುಖ್ಯಮಂತ್ರಿ ಬಸವ ರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ.