ನವದೆಹಲಿ –
ರೈತರ ಆದಾಯವನ್ನು ದ್ವಿಗುಣಗೊಳಿಸುವ ನರೇಂದ್ರ ಮೋದಿಜೀ ನೇತೃತ್ವದ ಕೇಂದ್ರ ಸರ್ಕಾರದ ಯೋಜನೆಗೆ ಪೂರಕವಾಗಿ ರಾಜ್ಯದಲ್ಲಿ ಪ್ರತ್ಯೇಕ ಸೆಕೆಂಡರಿ ಕೃಷಿ ನಿರ್ದೇಶ ನಾಲಯವನ್ನು ಸ್ಥಾಪಿಸುತ್ತಿರುವುದು ಸ್ವಾಗತಾರ್ಹ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು ಗಣಿ ಮತ್ತು ಕಲ್ಲಿದ್ದ ಲು ಸಚಿವ ಪ್ರಲ್ಹಾದ ಜೋಶಿಯವರು ತಿಳಿಸಿದ್ದಾರೆ.ಈ ಮೂಲಕ ಕೃಷಿ ಉತ್ಪನ್ನಗಳ,ಉಪ ಉತ್ಪನ್ನಗಳ ತಯಾರಿ ಕೆಗೆ ರೈತರಿಗೆ ಅಗತ್ಯ ಸಹಕಾರವನ್ನು ನೀಡಿ,ಅವರ ಆದಾ ಯವನ್ನು ದ್ವಿಗುಣಗೊಳಿಸುವ ಯೋಜನೆ ಇದಾಗಿದೆ ಇದರಿಂದ.ಜೇನು ಸಾಕಣೆ,ಜೈವಿಕ ಗೊಬ್ಬರ ಘಟಕಗಳು, ಸಾವಯವ ಬಣ್ಣ ಅಥವಾ ಡೈ ತಯಾರಿಕೆ,ಅಣಬೆ,ರೇಷ್ಮೆ ಹುಳು ಸಾಕಣೆ,ನರ್ಸರಿ ಇತ್ಯಾದಿಗಳಂತಹ ಸಣ್ಣ ಪ್ರಮಾಣ ದ ಚಟುವಟಿಕೆಗಳು ಸೆಕೆಂಡರಿ ಕೃಷಿಗೆ ಉತ್ತಮ ಉದಾಹ ರಣೆಯಾಗಿದೆ ಎಂದು ಸಚಿವರು ಹೇಳಿದ್ದಾರೆ.
ರೈತರ ಆದಾಯ ಹೆಚ್ಚಿಸುವ ನಿಟ್ಟಿನಲ್ಲಿ ‘ಸೆಕೆಂಡರಿ ಅಗ್ರಿಕಲ್ಚರ್’ ನಿರ್ದೇಶಾನಲಯ ಸ್ಥಾಪಿಸಿ ಆದೇಶಿಸಿರು ವುದು ರೈತರ ಹಿತ ಕಾಯುವ ಯೋಜನೆ ಇದಾಗಿದೆ ಎಂದು ಸಚಿವ ಜೋಶಿ ತಿಳಿಸಿದ್ದಾರೆ.
ಸ್ಥಳೀಯವಾಗಿ ಲಭ್ಯವಿರುವ ಕೃಷಿ ಮತ್ತು ಇತರ ಜೈವಿಕ ಸಂಪನ್ಮೂಲಗಳ ಪ್ರಾಥಮಿಕ ಉತ್ಪನ್ನ ಮತ್ತು ಉಪ ಉತ್ಪನ್ನಗಳನ್ನು ಕಚ್ಚಾ ವಸ್ತುವಾಗಿ ಬಳಸಿಕೊಂಡು ಸಂಸ್ಕರಣೆ,ಪ್ಯಾಕಿಂಗ್ ಹಾಗೂ ಸೂಕ್ತ ಬ್ಯ್ರಾಂಡ್ ಮೂಲಕ ಮಾರುಕಟ್ಟೆ ಕಲ್ಪಿಸುವುದು ಸೆಕೆಂಡರಿ ಅಗ್ರಿಕಲ್ಚರ್‌ನ ಮುಖ್ಯ ಧ್ಯೇಯೋದ್ದೇಶವಾಗಿದೆ ಎಂದು ಹೇಳಿರುವ ಜೋಶಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಹಾಗೂ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರನ್ನು ಅಭಿನಂದಿಸುತ್ತೇನೆ ಎಂದರು.
ವರದಿ – ಚಂದ್ರಶೇಖರ್