ಕೋಲಾರ –
ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ವೃತ್ತಿಪರ ತರಬೇತಿ ಕೇಂದ್ರಗಳನ್ನು ಸ್ಥಾಪಿಸಲಾಗುತ್ತದೆ ಎಂದು ರಾಜ್ಯ ಸರ್ವ ಶಿಕ್ಷಣ ಅಭಿಯಾನದ ಜಂಟಿ ನಿರ್ದೇಶಕ ಕೆ.ರತ್ನಯ್ಯ ತಿಳಿಸಿದರು.ಕೋಲಾರದಲ್ಲಿ ಮಾತನಾ ಡಿದ ಅವರು ರಾಷ್ಟ್ರೀಯ ಶಿಕ್ಷಣ ನೀತಿಯಡಿ ವಿದ್ಯಾರ್ಥಿಗಳನ್ನು ಸ್ವಾವಲಂಬಿಗಳಾಗಿಸುವ ದೃಷ್ಟಿಯಿಂದ 100 ಶಾಲೆಗಳಲ್ಲಿ ವೃತ್ತಿಪರ ತರಬೇತಿ ಕೇಂದ್ರ ಸ್ಥಾಪಿಸುವ ಉದ್ದೇಶವಿದೆ ಎಂದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಯೋಜನೆಗಳ ಕುರಿತು ಇಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು ಮಗುವಿನ ಕಲಿಕಾ ಪ್ರಗತಿ ಆಧಾರದ ಮೇಲೆ ರಾಷ್ಟ್ರೀಯ ಶಿಕ್ಷಣ ನೀತಿ- 2020ರಡಿ ಕಾರ್ಯೋನ್ಮುಖವಾಗುವ ಅಗತ್ಯವಿದೆ. ಕೌಶಲಾಭಿವೃದ್ಧಿ ಅತ್ಯಗತ್ಯವಾಗಿದೆ ಎಂದು ಅಭಿಪ್ರಾಯನ್ನುಪಟ್ಟರು.
ಶಾಲೆಗಳ ಭೌತಿಕ ತರಗತಿಗಳನ್ನು ಆರಂಭಿಸುವ ಉದ್ದೇಶವಿದೆ.ಈ ಹಿನ್ನೆಲೆಯಲ್ಲಿ ಶಾಲೆಗಳು ಸುಂದರ ಗೊಳ್ಳಬೇಕು.ಸ್ವಚ್ಛತೆಗೆ ಒತ್ತು ನೀಡಿ ಮತ್ತು ಶೌಚಾ ಲಯ,ಕುಡಿಯುವ ನೀರು ಸೇರಿದಂತೆ ಸೌಲಭ್ಯಗಳು ಸಮರ್ಪಕವಾಗಿರಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಇನ್ನೂ ಪ್ರಮುಖವಾಗಿ ಶಾಲೆಗಳಲ್ಲಿ ಅಗತ್ಯವಿರುವ ಕಾಮಗಾರಿಗಳ ಕುರಿತು ಮಾಹಿತಿ ನೀಡಿ.ಶಿಕ್ಷಕರಿಗೆ ಪ್ರತಿ ತಿಂಗಳು 5ನೇ ತಾರೀಖಿನೊಳಗೆ ವೇತನ ಪಾವತಿಯಾಗಬೇಕು.ಇಲಾಖೆಯ ಕಡತಗಳನ್ನು ನಿಯಮಾನುಸಾರ ವಿಷಯ ನಿರ್ವಾಹಕರು ಮಂಡಿಸಿ ನಿರ್ವಹಣೆ ಮಾಡಬೇಕು ಎಂದು ಎಚ್ಚರಿಕೆ ನೀಡಿದರು.
ಶಿಕ್ಷಣಾಧಿಕಾರಿಗಳಾದ ಎ.ಎನ್.ನಾಗೇಂದ್ರಪ್ರಸಾದ್, ಸಿ.ಆರ್.ಅಶೋಕ್,ಡಿವೈಪಿಸಿ ಗಂಗರಾಮಯ್ಯ, ಎವೈಪಿಒಗಳಾದ ಮೋಹನ್‌ಬಾಬು,ಸಿದ್ದೇಶ್, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎ.ಬಿ.ರಾಮಕೃಷ್ಣಪ್ಪ, ಉಮಾದೇವಿ,ಕೃಷ್ಣಮೂರ್ತಿ,ಕೆಂಪಯ್ಯ, ಚಂದ್ರಶೇಖರ್ ಬಾಲಾಜಿ ಹಾಜರಿದ್ದರು.