ಬೆಂಗಳೂರು –
ಮೇ ಎರಡನೇ ವಾರದಲ್ಲಿ SSLC ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಶಿಕ್ಷಣ ಸಚಿವ ಬಿಸಿ ನಾಗೇಶ್ ಹೇಳಿದರು.ಬೆಂಗಳೂರಿನಲ್ಲಿ ಮಾತನಾಡಿದ ಅವರು ಎಸ್ ಎಸ್ ಎಲ್ ಸಿ ಪರೀಕ್ಷೆಯ ಕೀ ಉತ್ತರ ಪ್ರಕಟವಾಗಿದ್ದು ವಿದ್ಯಾರ್ಥಿಗಳು ತಮ್ಮ ಮೌಲ್ಯ ಮಾಪನವನ್ನು ಬಗೆಹರಿಸಿಕೊಳ್ಳಬಹುದಾಗಿದೆ ಎಂದರು.
ಇನ್ನೂ ಕಳೆದ ವಾರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಆರಂಭಗೊಂಡಿದೆ.ಜೂನ್ ಕೊನೆಯಲ್ಲಿ ಸೆಪ್ಲೆಮೆಂಟರಿ ಪರೀಕ್ಷೆಗಳು ನಡೆಯುವ ಸಾಧ್ಯತೆ ಇದೆ ಎಂದರು.ಇನ್ನೂ ಇತ್ತೀಚೆಗೆ ಮುಕ್ತಾಯಗೊಂಡ ಪ್ರಮುಖ ಪರೀಕ್ಷೆಯಲ್ಲಿ ಸುಮಾರು 25 ಸಾವಿರ ವಿದ್ಯಾರ್ಥಿಗಳು ಗೈರು ಹಾಜರಾಗಿ ದ್ದರು.ಈ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಅವಕಾಶ ಪಡೆಯಲು ಸೆಪ್ಲಿಮೆಂಟರಿ ಪರೀಕ್ಷೆ ಅನುಕೂಲ ವಾಗಲಿದೆ.ಇದೇ ಮೊದಲ ಬಾರಿ ಪರೀಕ್ಷೆ ಬರೆದ ವಿದ್ಯಾರ್ಥಿ ಗಳಲ್ಲಿ ಶೇ.98 ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ ದ್ದಾರೆ.ಈ ಬಾರಿ ಪರೀಕ್ಷೆಯಲ್ಲಿ ಸಣ್ಣಪುಟ್ಟ ಲೋಪದೋಷ ಹೊರತುಪಡಿಸಿದರೆ ಯಾವುದೇ ಗೊಂದಲ ಉಂಟಾಗಿಲ್ಲ ಎಂದರು.