ಬೆಂಗಳೂರು –
ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ ಏ ನಾರಾಯಣಗೌಡರ ಸಮ್ಮುಖದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಗೆ ಸೇರಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ವೇದಿಕೆಯ ರಾಜ್ಯ ಅಧ್ಯಕ್ಷರ ಸಮ್ಮುಖದಲ್ಲಿ ಕರವೇ ಘಟಕಕ್ಕೆ ಸೇರಿಕೊಂಡರು

ಪ್ರಾಥಮಿಕ ಸದಸ್ಯತ್ವವನ್ನೂ ಪಡೆದು ಕೊಂಡು ಅವರ ಆದೇಶದಂತೆ ಧಾರವಾಡ ಜಿಲ್ಲಾ ರೈತ ಘಟಕದ ಅಧ್ಯಕ್ಷರನ್ನಾಗಿ ಪಾಪು ಧಾರೆ ಅವರನ್ನು ಧಾರವಾಡ ಜಿಲ್ಲಾ ಅಧ್ಯಕ್ಷರಾದ ರುದ್ರೇಶ್ ಹವಳದ ನೇಮಕ ಮಾಡಿದರು. ರೈತ ಘಟಕದ ಧಾರವಾಡ ಜಿಲ್ಲಾ ಅಧ್ಯಕ್ಷರಾಗಿ ನೇಮಕಗೊಂಡ ಪಾಪು ಧಾರೆ ಇವರು ತಮಗೆ ಕೊಟ್ಟಂತಹ ಜವಾಬ್ದಾರಿಯನ್ನು ಅತ್ಯಂತ ಪ್ರಾಮಾಣಿಕತೆಯಿಂದ ಹಾಗೂ ರೈತಾಪಿ ವರ್ಗದವರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಹೋರಾಟ ಮಾಡುತ್ತಾ ,ನ್ಯಾಯ ಒದಗಿಸಿ ಕೊಡುವುದರ ಮೂಲಕ ಹಾಗೂ ಎಲ್ಲಾ ಹಂತದ ಪದಾಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಧಾರವಾಡ ಜಿಲ್ಲಾದ್ಯಂತ ಪ್ರಬಲ ಸಂಘಟನೆಯನ್ನು ಕಟ್ಟಿ, ಜವಾಬ್ದಾರಿಯಿಂದ ನಡೆಸಿಕೊಂಡು ಹೋಗು ವುದಾಗಿ ಪ್ರಮಾಣ ಮಾಡಿದರು.

ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರಾದ ನಾರಾಯಣಗೌಡರು, ರಾಜ್ಯ ಪ್ರಧಾನ ಕಾರ್ಯದರ್ಶಿ ಸಣ್ಣೀರಪ್ಪ ನವರು, ರಾಜ್ಯ ಸಂಚಾಲಕರಾದ ಹನುಮಂತಪ್ಪ ಮೇಟಿ, ರಾಜ್ಯ ರೈತ ಘಟಕದ ಸಂಘಟನಾ ಕಾರ್ಯದರ್ಶಿಯಾದ ರಹಿಮಾನ್ ಹೋಳಿ, ರಾಜ್ಯ ಸಂಘಟನಾ ಕಾರ್ಯದರ್ಶಿಯಾದ ವಿನೋದ ಅಬ್ಬಿಗೆರೆ ,ಬಾಗಲಕೋಟೆಯ ಜಿಲ್ಲಾಧ್ಯಕ್ಷರಾದ ರಮೇಶ್ ಬದ್ನೂರ ,ಧಾರವಾಡ ಜಿಲ್ಲಾ ಯುವ ಘಟಕದ ಅಧ್ಯಕ್ಷರಾದ ಸಾಗರ್ ಗಾಯಕ್ವಾಡ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.